Chitradurga news|nammajana.com|11-7-2024
ನಮ್ಮಜನ.ಕಾಂ, ಚಳ್ಳಕೆರೆ: ಕರ್ನಾಟಕವೂ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಅಕ್ರಮವಾಗಿ ಬಾರಿ ಪ್ರಮಾಣದ (Challakere) ಗಾಂಜಾವನ್ನು ಮಾರಾಟ ಮಾಡಿ ಪೊಲೀಸರ ಕೈಗೆ ಸಿಗದೆ ಓಡಾಡುತ್ತಿದ್ದ ಒಡಿಶಾ ರಾಜ್ಯದ ಗೊಲಂತಾರ ಗಂಜಾ ಪ್ರದೇಶದ ಸುಮಂಡಿ ನಿವಾಸಿ ಎ.ಬಾಜೂಜಿ ಸುಬುದಿ ಎಂಬುವವನ್ನು ಚಾಣಾಕ್ಷಾತನದಿಂದ ಚಳ್ಳಕೆರೆ ಪೊಲೀಸರು ಬಂಧಿಸಿದ್ದಾರೆ.
ಜಿಲ್ಲಾ ರಕ್ಷಣಾಧಿಕಾರಿ, ಹೆಚ್ಚುವರಿ ರಕ್ಷಣಾಧಿಕಾರಿಗಳ ಸೂಚನೆಯಂತೆ ಉಪವಿಭಾಗದ ಡಿವೈಎಸ್ಪಿ ಟಿ.ಬಿ.ರಾಜಣ್ಣ ಮತ್ತು ಠಾಣಾ ವೃತ್ತ ನಿರೀಕ್ಷಕ ರಾಜಫಕೃದ್ದೀನ್ ದೇಸಾಯಿ (Challakere) ಮಾರ್ಗದರ್ಶನದಂತೆ ಪಿಎಸ್‌ಐ ಕೆ.ಸತೀಶ್‌ನಾಯ್ಕ, ಸಿಬ್ಬಂದಿ ಕೊಂಡ್ಲಿಮಂಜುನಾಥ, ಶಿವರಾಜ್ ಅಂತರಾಜ್ಯ ಗಾಂಜಾ ಮಾರಾಟಗಾರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಇದನ್ನೂ ಓದಿ: Satish Jarakiholi: ಡಾ.ಅಂಬೇಡ್ಕರ್ ಹೇಳಿದಂತೆ ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿದೆ: ಸತೀಶ್ ಜಾರಕಿಹೊಳಿ ಸಲಹೆ
ಆರೋಪಿ ಎ.ಬಾಜೂಜಿಸುಬುದಿ ಗಾಂಜಾವನ್ನು ಚಳ್ಳಕೆರೆಯೂ ಸೇರಿದಂತೆ ರಾಜ್ಯ, ಅಂತರಾಜ್ಯದ ಅನೇಕ ಭಾಗಗಳಲ್ಲಿ ಮಾರಾಟ ಮಾಡಿ ಪೊಲೀಸರ ಕೈಗೆ ಸಿಗದಂತೆ ತಪ್ಪಿಸಿಕೊಳ್ಳುತ್ತಿದ್ದ. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಒಡಿಶಾ, ಆಂಧ್ರ ಪ್ರದೇಶ (Challakere) ಸೇರಿದಂತೆ ಎಲ್ಲೆಡೆ ಹುಡುಕಾಟ ನಡೆಸಿದ್ದು ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಪೊಲೀಸ್ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ಧಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252