
Chitradurga news|nammajana.com|29-03-2025
ನಮ್ಮಜನ.ಕಾಂ, ಚಳ್ಳಕೆರೆ: ಚಳ್ಳಕೆರೆ ವಿಧಾನಸಭಾ ಕ್ಷೇತ್ರ (Challakere) ವ್ಯಾಪ್ತಿಯಲ್ಲಿ ಇಂತಹ ಸುಡುಬಿಸಿಲಿನಲ್ಲೂ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಜಾಗ್ರತೆ ವಹಿಸುವಲ್ಲಿ ಅಧಿಕಾರಿಗಳು ಸಫಲರಾಗಿದ್ದು ಶಾಸಕ ಟಿ.ರಘುಮೂರ್ತಿ ಅವರ ನಿರಂತರವಾದ ಸೂಚನೆ ಇಂದು ನೀರಿನ ಹಾಹಾಕಾರದಿಂದ
ನಿರಂತರ ಸಭೆಗಳ ಮೂಲಕ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿದ ಶಾಸಕ ಟಿ.ರಘುಮೂರ್ತಿ
ಕ್ಷೇತ್ರದ ಶಾಸಕ, ರಾಜ್ಯಸಣ್ಣಕೈಗಾರಿಕೆ ಅಭಿವೃದ್ದಿಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ ಬೇಸಿಗೆ ಆರಂಭಕ್ಕೂ ಮುನ್ನವೆ ತಮ್ಮ ಕ್ಷೇತ್ರ ವ್ಯಾಪ್ತಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡುವ ಮೂಲಕ ಜನರು ನೀರಿಗಾಗಿ ಹಾಹಾಕಾರ ಪಡದೆ ನೆಮ್ಮೆದಿಯಿಂದ ಇರುವಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದು (Challakere) ಪಾಲನೆಯಾಗಿದೆ.

261 ಹಳ್ಳಿಗಳಿಗೆ ನೀರಿನ ಬವಣೆಯಿಲ್ಲ
ಕ್ಷೇತ್ರದಲ್ಲಿ 261 ಹಳ್ಳಿಗಳು ಬರುತ್ತಿದ್ದು ಪರಶುರಾಮಪುರ, ಕಸಬಾ ಮತ್ತು ಚಿತ್ರದುರ್ಗ ತಾಲ್ಲೂಕಿನ ತುರುವನೂರು ಹೋಬಳಿಯೂ ಸಹ ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುತ್ತಿದ್ದು, ಪ್ರಸ್ತುತ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಹಾಹಾಕಾರ ಎಲ್ಲೂ ಕಂಡಿಲ್ಲ.
ಕಳೆದ ವರ್ಷ ಬಂದ ಉತ್ತಮ ಮಳೆ ವಾಣಿವಿಲಾಸಸಾಗರದ ನೀರು ಈ ಭಾಗದಲ್ಲಿ ವೇದಾವತಿ ನದಿಮೂಲಕ ಹಾದುಹೋಗಿದ್ದು ಬಹುತೇಕ ನದಿಪಾತ್ರದ ಗ್ರಾಮಗಳಲ್ಲಿ ಅಂತರ್ಜಲ ಹೆಚ್ಚಿದೆಯಲ್ಲದೆ, ಕ್ಷೇತ್ರದ ಚೌಳೂರು, (Challakere) ಪರಶುರಾಮಪುರ, ಬೊಂಬೇರಹಳ್ಳಿ ಚೆಕ್‌ಡ್ಯಾಂಗಳು ಸಹ ತುಂಬಿ ಯಾವ ಭಾಗದಲ್ಲೂ ಕುಡಿಯುವ ನೀರಿನ ಅಭಾವ ತಲೆದೋರಿಲ್ಲ.
ವಿಧಾನಸಭಾ ವ್ಯಾಪ್ತಿಯಲ್ಲಿ ಒಟ್ಟು 170 ಶುದ್ದ ಕುಡಿಯುವ ನೀರಿನ ಘಟಕಗಳು ಕಾರ್ಯನಿರ್ವಹಿಸುತ್ತಿವೆ, ಈ ಪೈಕಿ 24 ಘಟಕಗಳು ದುಸ್ಥಿತಿಯಲ್ಲಿವೆ. 146 ಘಟಕಗಳು ಪ್ರತಿನಿತ್ಯ ಕಾರ್ಯಚರಣೆಯಲ್ಲಿದ್ದು, ಗ್ರಾಮೀಣ ಭಾಗದ ಜನರಿಗೆ ದಿನ 24 ಗಂಟೆಗಳ ಕಾಲವೂ ಕುಡಿಯುವ ನೀರು ಪೂರೈಕೆಯಾಗುತ್ತಿದೆ.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಉಪವಿಭಾಗದ ಅಧಿಕಾರಿಗಳು ಮಾಹಿತಿ ನೀಡಿ, ಶಾಸಕರ ಮಾರ್ಗದರ್ಶನದಲ್ಲಿ ನಡೆದ ಪ್ರಗತಿಪರಿಶೀಲನಾ ಸಭೆಯಲ್ಲಿ ಕೈಗೊಂಡ ನೀರಿನ ಸಮಸ್ಯೆಗಳ ನಿವಾರಣೆಯಿಂದ ಇಂದು ಈ ಭಾಗದಲ್ಲಿ ನೀರಿನ ಕೊರತೆ ಉಂಟಾಗಿಲ್ಲ. ವಿಶೇಷವಾಗಿ ಉಪವಿಭಾಗದ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ವರ್ಗ ಎಲ್ಲೇ ನೀರಿನ ಕೊರತೆಯಾಗಲಿ ಕೂಡಲೇ ಅಲ್ಲಿ ಕೊಳವೆಬಾವಿ ಕೊರೆಸಿ ನೀರು ನೀಡುವ ಕೆಲಸ ಮಾಡಿದ್ದಾರೆ.
ವಿಧಾನಸಭಾ ಕ್ಷೇತ್ರದ ಕೆರೆಗಳಲ್ಲೂ ಸಹ ಸಮೃದ್ದ ನೀರಿದೆ, ಸುಮಾರು 5.39 ಕೋಟಿ ಯೋಜನೆ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಕಳಿಸಿಕೊಡಲಾಗಿದೆ. ತುಂಗಾ ಹಿನ್ನೀರು ಯೋಜನೆ ಕಾಮಗಾರಿಯೂ ಪ್ರಗತಿಯಲ್ಲಿದ್ದು, ಮುಂದಿನ ದಿನಗಳಲ್ಲಿ ಚಳ್ಳಕೆರೆ ಕ್ಷೇತ್ರ ವ್ಯಾಪ್ತಿಯಲ್ಲಿ ಯಾವ ಭಾಗದಲ್ಲೂ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಜಾಗ್ರತೆ ವಹಿಸಲಾಗಿದೆ.
ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮೂರು ಪ್ರಮುಖ (Challakere) ಹೋಬಳಿಗಳಿಂದ ಒಟ್ಟು 262 ಗ್ರಾಮಗಳಿವೆ, ಎಲ್ಲಾ ಗ್ರಾಮಗಳ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ನಿರಂತರವಾಗಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಯಾವ ಭಾಗದಲ್ಲೂ ಕುಡಿಯುವ ನೀರಿನ ಕೊರತೆ ಉಂಟಾಗದAತೆ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.
ಗ್ರಾಮೀಣ ಭಾಗದ ಪ್ರವಾಸದ ಸಂದರ್ಭದಲ್ಲಿ ಸಾರ್ವಜನಿಕರಿಂದ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಬಂದ ಎಲ್ಲಾ ಮನವಿಗಳಿಗೆ ಸ್ಪಂದಿಸಲಾಗಿದೆ. ಶುದ್ದಕುಡಿಯುವ ನೀರಿನ ಘಟಕ ರಿಪೇರಿ ಸಂದರ್ಭದಲ್ಲಿ ವಿಳಂಬ ಉಂಟಾಗುತ್ತಿದ್ದು, ಸಂಬಂಧಪಟ್ಟ ಗುತ್ತಿಗೆದಾರರಿಗೆ ಸೂಚನೆ ನೀಡಿ ನೀರಿನ ಸಮಸ್ಯೆ ಉಂಟಾಗದಂತೆ ಎಚ್ಚರಿಕೆ ವಹಿಸಿದೆ.
ಭದ್ರಾ ಮೇಲ್ದಂಡೆ ಯೋಜನೆ ಅನುಷ್ಠಾನಗೊಳಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಿದ್ದು, ಈ ಯೋಜನೆ ಪೂರ್ಣಪ್ರಮಾಣದಲ್ಲಿ ಅನುಷ್ಠಾನವಾದಲ್ಲಿ ಕ್ಷೇತ್ರದ ಎಲ್ಲಾ ಗ್ರಾಮಗಳಲ್ಲಿ ಸಮೃದ್ದ ಕುಡಿಯುವ ನೀರು ಸಿಗಲಿದೆ. ತುಂಗಾ ಹಿನ್ನೀರು ಯೋಜನೆ ಅನುಷ್ಠಾನಕ್ಕೆ ವಿಳಂಬವಾಗುತ್ತಿರುವ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗಿದೆ.
ಇದನ್ನೂ ಓದಿ: Adike rate Hike | ಇಂದಿನ ಅಡಿಕೆ ಬೆಲೆಯಲ್ಲಿ ಭಾರೀ ಏರಿಕೆ
ಕುಡಿಯುವ ನೀರಿಗಿಲ್ಲ ತೊಂದರೆ
ಶಾಸಕ, ರಾಜ್ಯ ಸಣ್ಣಕೈಗಾರಿಕೆ ಅಭಿವೃದ್ದಿ ನಿಗಮ ಅಧ್ಯಕ್ಷ ಟಿ.ರಘುಮೂರ್ತಿ ಅವರ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಸ್ತುತ ವರ್ಷ ಯಾವ ಭಾಗದಲ್ಲೂ ಕುಡಿಯುವ ನೀರಿಗೆ ತೊಂದರೆಯಾಗಿಲ್ಲ. ಪ್ರತಿಗ್ರಾಮಗಳಲ್ಲೂ ನಾಲ್ಕು ಶುದ್ದ ಕುಡಿಯುವ ನೀರಿನ ಘಟಕವಿದ್ದು, ಎರಡರಿಂದ ಮೂರು ಘಟಕಗಳು (Challakere) ಚಾಲನೆಯಲ್ಲಿವೆ. ಕೆಲವೆಡೆ ಮಾತ್ರ ರಿಪೇರಿಯಾಗಿಲ್ಲ. ಗ್ರಾಮೀಣ ಭಾಗದ ಕೆರೆಗಳಲ್ಲಿ ಸಮೃದ್ದ ನೀರಿದ್ದು ಪೈಪ್ ಮೂಲಕ ಗ್ರಾಮಕ್ಕೆ ತಲುಪಿಸುವ ಕಾರ್ಯವೂ ಸಹ ಯಶಸ್ವಿಯಾಗಿದೆ. ಶಾಸಕರ ಮಾರ್ಗದರ್ಶನದಲ್ಲಿ ಕುಡಿಯುವ ನೀರು ಒದಗಿಸಲು ಎಲ್ಲಾ ರೀತಿಯಕ್ರಮಕೈಗೊಂಡಿದೆ ಎಂದರು.
ಕೆ.ಎಚ್.ದಯಾನಂದಸ್ವಾಮಿ ಸಹಾಯಕ ಕಾರ್ಯಪಾಲಕ ಅಭಿಯಂತರ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ.
