Chitradurga news|nammajana.com|3-7-2024
ನಮ್ಮಜನ.ಕಾಂ, ಚಿತ್ರದುರ್ಗ: ನಗರದ ಸಂಚಾರ ದಟ್ಟಣೆ ಹಾಗೂ ಸಮಸ್ಯೆ ಕುರಿತು ಸಂಚಾರ ಠಾಣೆ ಪೊಲೀಸರು ಸಮೀಕ್ಷೆ ನಡೆಸಿ, ಪರಿಹಾರಕ್ಕಾಗಿ ಸೂಕ್ತ ವರದಿ ಸಿದ್ಧಪಡಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಸಮಗ್ರ ಚರ್ಚೆ ನಡೆಸಿ, (Challakere Gate Circle) ಸಾಧಕ ಬಾಧಕಗಳನ್ನು ಅವಲೋಕಿಸಿ ಅನುಷ್ಠಾನ ಮಾಡುವುದಾಗಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜರುಗಿದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಚಳ್ಳಕೆರೆ ಗೇಟ್‍ನಲ್ಲಿ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಹೊಸ ಸಂಚಾರಿ ವೃತ್ತ ನಿಮಾರ್ಣ ಮಾಡುವ ಕುರಿತು (Challakere Gate Circle) ಲೊಕೋಪಯೋಗಿ ಹಾಗೂ ನಗರಸಭೆಯಿಂದ ಪರಿಶೀಲನೆ ನಡೆಸಬೇಕು. ರಸ್ತೆ ಸೇತುವೆ ಕೆಳಭಾಗದ ಹಾಗೂ ಇಕ್ಕೆಲಗಳಲ್ಲಿ ಅನಧಿಕೃತವಾಗಿ ನಡೆಸುತ್ತಿರುವ ಗೂಡಂಗಡಿಗಳನ್ನು ತೆರವುಗೊಳಿಸಬೇಕು.

ಇದನ್ನೂ ಓದಿ: ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ |Kidwai Cancer Hospital free treatment
ಸೇತುವೆ ಕೆಳಭಾಗದಲ್ಲಿ ಪಾರ್ಕಿಂಗ್‍ಗೆ ಅವಕಾಶ ನೀಡದಂತೆ,(Challakere Gate Circle) ರಸ್ತೆಯ ಇಕ್ಕೆಲಗಳಲ್ಲಿರುವ ಖಾಲಿ ಸ್ಥಳದಲ್ಲಿ ದ್ವಿ ಚಕ್ರ ವಾಹನ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು. ಹಾಗೂ ಚಳ್ಳಕೆರೆ ಗೇಟ್ ಬಳಿ ಬಸ್ ತಂಗುದಾಣ ನಿರ್ಮಿಸುವಂತೆ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252