Chitradurga news |nammajana.com |29-5-2024
ನಮ್ಮಜನ.ಕಾಂ, ಚಿತ್ರದುರ್ಗ: ಚಳ್ಳಕೆರೆಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ (Challakere ITI) 2024-25ನೇ ಸಾಲಿನ ಪ್ರವೇಶಾತಿಗೆ ಇಎಂ, ಫಿಟ್ಟರ್, ವೆಲ್ಡರ್, ಎಂಇವಿ, ಸಿಎನ್‍ಸಿ ಹಾಗೂ ಇತರೆ ವೃತ್ತಿಗಳಿಗೆ ಎಸ್‍ಎಸ್‍ಎಲ್‍ಸಿ ಪಾಸಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ ಮಾಹಿತಿ (Challakere ITI)
ಈಗಾಗಲೇ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಿದ್ದು, ಜೂನ್ 03 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಎಸ್.ಎಸ್.ಎಲ್.ಸಿ ಪಾಸಾದ ಅರ್ಹ ಆಸಕ್ತ ಅಭ್ಯರ್ಥಿಗಳು ತಿತಿತಿ.ಛಿiಣe.ಞಚಿಡಿಟಿಚಿಣಚಿಞಚಿ. gov.iಟಿ ತಂತ್ರಾಂಶದ ಮೂಲಕ ಜೂನ್ 3 ರ ಒಳಗಾಗಿ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: Dina Bhavishya: ಇಂದಿನ ದಿನ ಭವಿಷ್ಯ 29-5-2024
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ (Challakere ITI)
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9900398732, 8748884498, 9342276951, 9902372315 ಗೆ ಸಂಪರ್ಕಿಸಬಹುದು ಎಂದು ಚಳ್ಳಕೆರೆಯ ಸರ್ಕಾರಿ ಕೈಗಾರಿಕಾ ತರಬೇತಿ (Challakere ITI) ಸಂಸ್ಥೆಯ ಪ್ರಾಂಶುಪಾಲ ಬಿ.ಎಂ.ಬಸಣ್ಣ ತಿಳಿಸಿದ್ದಾರೆ.
