Chitradurga News | Nammajana.com |24-4-2024
ನಮ್ಮಜನ.ಕಾಂ.ಚಳ್ಳಕೆರೆ : ರಾಜ್ಯದಲ್ಲಿ 10 ವರ್ಷಗಳಿಂದ ಆಡಳಿತ ನಡೆಸುತ್ತಿರುವ ಎನ್‌ಡಿಎ ನೇತೃತ್ವದ ಮೈತ್ರಿಕೂಟದ ಪ್ರಧಾನಮಂತ್ರಿ ನರೇಂದ್ರಮೋದಿ ಸುಳ್ಳು ಭರವಸೆಗಳ ಮೂಲಕ ಜನರನ್ನು ದಾರಿ ತಪ್ಪಿಸುವ ಕಾರ್ಯವನ್ನು ನಿರಂತರ ಮಾಡುತ್ತಾ ಬಂದಿದ್ಧಾರೆ. ಕ್ಷೇತ್ರದ ಜನತೆ ವಾಸ್ತಾಂವಶನ್ನು ಅರಿತಿದ್ದು, ಸುಳ್ಳು ಪ್ರಚಾರದಿಂದ ಬಿಜೆಪಿ ಗೆಲುವು ಸಾಧಿಸಲಾಗದು ಎಂದು ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ತಿಳಿಸಿದರು.
ಅವರು, ಮಂಗಳವಾರ ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚಳ್ಳಕೆರೆ ನಗರದ 8,9,10,11,17,18, ಮತ್ತು 30,29 ನೇ ವಾರ್ಡ್ ವ್ಯಾಪ್ತಿಯಲ್ಲಿ ಪಕ್ಷದ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಪರ ಮತಯಾಚನೆ ಮಾಡಿದರು.
ರಹೀಂನಗರದ ಮುಸ್ಲಿಂ ಸಮಾಜದ ಬಂಧುಗಳು ಸಮಾಜದ ಪರವಾಗಿ ಶಾಸಕರಿಗೆ ಪ್ರಚಾರದ ಸಂದರ್ಭದಲ್ಲೇ ಗೌರವ ಸಮರ್ಪಿಸಿದರು.
ಕ್ಷೇತ್ರದಲ್ಲಿ ಮೂರು ದಿನ ಪ್ರಚಾರ ಮುಕ್ತಾಯ
ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಈಗಾಗಲೇ ಮೂರು ಸುತ್ತಿನ ಪ್ರಚಾರ ಕೈಗೊಂಡಿದ್ದು, ಈ ಬಾರಿ ಪ್ರತಿಯೊಬ್ಬ ಮತದಾರನ ಮನೆ, ಮನೆಗೂ ಭೇಟಿ ನೀಡಿ ಪಕ್ಷದ ಭರವಸೆಗಳ ಬಗ್ಗೆ ಕರಪತ್ರ ನೀಡಲಾಗಿದೆ. ಕಾಂಗ್ರೆಸ್ ಪಕ್ಷದ ಬಗ್ಗೆ ಜನರಲ್ಲಿ ವಿಶ್ವಾಸ ಹೆಚ್ಚಾಗುತ್ತಿದ್ದು, ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆ ಎಂದರು.
ಪ್ರಚಾರದಲ್ಲಿ ಶಾಸಕರಿಗೆ ಜೊತೆ ಇದ್ದವರು
ಕೆಎಂಎಫ್ ನಿರ್ದೇಶಕ ಸಿ.ವೀರಭದ್ರಬಾಬು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ವೀರಭದ್ರಪ್ಪ, ಜಿ.ಟಿ.ಶಶಿಧರ, ಗ್ಯಾರಂಟಿ ಸಮಿತಿ ತಾಲ್ಲೂಕು ಅಧ್ಯಕ್ಷ ಗದ್ದಿಗೆ ತಿಪ್ಪೇಸ್ವಾಮಿ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ಪಿ.ಪ್ರಕಾಶ್‌ಮೂರ್ತಿ, ಟಿ.ರವಿಕುಮಾರ್, ಅನ್ವರ್ ಮಾಸ್ಟರ್, ಮುಜೀಬುಲ್ಲಾ, ನಗರಸಭಾ ಸದಸ್ಯರಾದ ಎಂ.ಜೆ.ರಾಘವೇಂದ್ರ, ಬಿ.ಟಿ.ರಮೇಶ್‌ಗೌ
ಡ, ಸುಜಾತಪಾಲಯ್ಯ, ಎಚ್.ಎಸ್.ಸೈಯದ್, ಮೂಡಲಗಿರಿಯಪ್ಪ, ಬಿ.ಪಿ.ಪ್ರಕಾಶ್‌ಮೂರ್ತಿ ಮನು, ಬಿ.ಎಂ.ಭಾಗ್ಯಮ್ಮ, ಲಕ್ಷ್ಮಿದೇವಿ, ಗೀತಾಬಾಯಿ, ಭಾಗ್ಯಲಕ್ಷ್ಮಿ, ಮಂಜಮ್ಮ, ಸೌಭಾಗ್ಯಮ್ಮತಿಪ್ಪೇಸ್ವಾಮಿ ಮುಂತಾದವರು ಉಪಸ್ಥಿತರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252
