Chitradurga news|nammajana.com|17-6-2024
ನಮ್ಮಜನ.ಕಾಂ, ಚಳ್ಳಕೆರೆ: ಸಂದೇಶವನ್ನು ಸಾರುವ ಎಲ್ಲಾ ಹಬ್ಬಗಳ ಆಚರಣೆಯಿಂದ ಎಲ್ಲರಲ್ಲೂ ವಿಶ್ವಾಸ ಹೆಚ್ಚುತ್ತದೆ. (Challakere news) ಹಿಂದೂ ಮತ್ತು ಮುಸ್ಲಿಂ ಬಂಧುಗಳು ಎಲ್ಲರೂ ಭಾರತೀಯರು ಎಂಬ ಉದಾರ ಮನೋಭಾವನೆಯಿಂದ ನಾವೆಲ್ಲರೂ ಬದುಕು ಕಟ್ಟಿಕೊಳ್ಳಬೇಕಿದೆ. ವಿಶೇಷವಾಗಿ ಚಳ್ಳಕೆರೆಯಲ್ಲಿ ಹಿಂದೂ, ಮುಸ್ಲಿಂ ಬಾಂಧವರ ಪ್ರೀತಿ,ವಿಶ್ವಾಸ ಎಲ್ಲರಿಗೂ ಮಾದರಿ ಎಂದು ಕ್ಷೇತ್ರದ ಶಾಸಕ, ರಾಜ್ಯ ಸಣ್ಣಕೈಗಾರಿಕೆ ಅಭಿವೃದ್ದಿ ಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ ತಿಳಿಸಿದರು.
ಅವರು ಸೋಮವಾರ ಬೆಂಗಳೂರು ರಸ್ತೆಯ ಈದ್ಗಾ ಮೈದಾನದಲ್ಲಿ ಮುಸ್ಲಿಂ ಸಮುದಾಯದ ಹಮ್ಮಿಕೊಂಡಿದ್ದ ಸಾಮೂಹಿಕ ಪ್ರಾರ್ಥನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಎಲ್ಲಾ ಮುಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬದ ಶುಭಾಶಯ (Challakere news) ವಿನಿಮಯ ಮಾಡಿಕೊಂಡು ಮಾತನಾಡಿದರು.

ಪ್ರತಿಯೊಂದು ಧರ್ಮದಲ್ಲೂ ಸೌಹಾರ್ಧತೆಯಿಂದ ಬಾಳುವಗಳ ಬಗ್ಗೆ ಒತ್ತಿ ಹೇಳಲಾಗಿದೆ. ಯಾವುದೇ ಧರ್ಮ ದ್ವೇಷವನ್ನು ಸಾರುವುದಿಲ್ಲ, ಬದಲಾಗಿ ಪ್ರತಿಯೊಂದು ಧರ್ಮವೂ ಪ್ರೀತಿ, ವಿಶ್ವಾಸ, ಗೌರವ ಹೊಂದುವ ನಿಟ್ಟಿನಲ್ಲಿ ಎಲ್ಲರೂ ಹೊಂದಾಣಿಕೆಯಿಂದ ಕಾರ್ಯನಿರ್ವಹಿಸುವಂತೆ ಹೇಳಿವೆ.
ಈ ಬಾರಿ ತಾಲ್ಲೂಕಿನಾದ್ಯಂತ ಉತ್ತಮ ಮಳೆಯಾಗಿದ್ದು, ಉತ್ತಮ ಮಳೆಯೂ ಬರಲಿದೆ. ಮುಸ್ಲಿಂ ಸಮುದಾಯದ ಯಾವುದೇ ಸಮಸ್ಯೆಗಳಿಗೆ ಸಕರಾತ್ಮಕವಾಗಿ ಸ್ಪಂದಿಸುವ ಭರವಸೆ ನೀಡಿದರು.
ಇದನ್ನೂ ಓದಿ: Chitradurga breaking: ಕಾಂಗ್ರೆಸ್ ಪಕ್ಷದ 40 ಶಾಸಕರಿಂದ ಬಂಡಾಯದ ಬಾವುಟ: ಗೋವಿಂದ ಕಾರಜೋಳ ಬಾಂಬ್
ಈ ಸಂದರ್ಭದಲ್ಲಿ ಅತಿಕೂರ್‌ರೆಹಮಾನ್, ಅನ್ವರ್‌ಮಾಸ್ಟರ್, ಎಸ್.ಎಚ್.ಸೈಯದ್, ಎಸ್.ಮುಜೀಬ್, ಬಿ.ಫರೀದ್‌ಖಾನ್, ನಗರಸಭಾ ಸದಸ್ಯರಾದ ಬಿ.ಟಿ.ರಮೇಶ್‌ಗೌಡ, ಕೆ.ವೀರಭದ್ರಪ್ಪ, ಆರ್.ಪ್ರಸನ್ನಕುಮಾರ್, ನೇತಾಜಿಪ್ರಸನ್ನ ಮುಂತಾದವರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ನಗರದ ಗಾಂಧಿನಗರ ನಿವಾಸಿ ಆಟೋಚಾಲಕ ಖದ್ದುಸ್‌ರವರ ಪುತ್ರ ಕೆ.ಸೈಯದ್‌ಫಯಾಜ್ ವಾಣಿಜ್ಯ ವಿಭಾಗದಲ್ಲಿ ಒಟ್ಟು ೫೯೩(೯೮.೮೩) ಅಂಕ ಪಡೆದ ಹಿನ್ನೆಲೆಯಲ್ಲಿ ಸನ್ಮಾನಿಸಲಾಯಿತು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252