
Chitradurga news|nammajana.com|5-7-2024
ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಐತಿಹಾಸಿಕ ಸ್ಥಳಗಳ ಅಭಿವೃದ್ಧಿಗೆ ಕೆ.ಎಂ.ಇ.ಆರ್.ಸಿ ಅನುದಾನದಲ್ಲಿ (Chandravalli lake) ನೀಲನಕ್ಷೆ ಸಿದ್ದಗೊಂಡಿದೆ. ಕೋಟೆ ಅಭಿವೃದ್ಧಿ ಜೊತೆಗೆ ಚಿತ್ರದುರ್ಗ ಮತ್ತೊಂದು ಐತಿಹಾಸಿಕ ಚಂದ್ರವಳ್ಳಿ ಪ್ರದೇಶ ಅಭಿವೃದ್ಧಿಗೆ ಜಿಲ್ಲಾಡಳಿತ ಹಣ ಮೀಸಲಿಟ್ಟಿದೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಮಾತನಾಡಿದರು.

ಕೋಟೆಯ ಒನಕೆ ಓಬವ್ವ ಕಿಂಡಿಯ ಬಳಿಯ ಹನುಮಾನ ದ್ವಾರದಿಂದ ಚಂದ್ರವಳ್ಳಿ ತೋಟಕ್ಕೆ ತೆರಳಲು 3 ಮೀಟರ್ (Chandravalli lake) ಅಗಲದ ಹಾಗೂ 1.5 ಕಿ.ಮೀ ಉದ್ದದ ನೂತನ ಕಾಲುದಾರಿ ಮಾಡಲಾಗುವುದು.
ಇದನ್ನೂ ಓದಿ: ಮೊಳಕಾಲ್ಮುರು ಸಮಾಜ ಕಲ್ಯಾಣ ಇಲಾಖೆಯಿಂದ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ |Matric Purva Hostel
ಚಂದ್ರವಳ್ಳಿ ಕೆರೆಯ ಸುತ್ತ ರೂ.3.75 ಕೋಟಿ ವೆಚ್ಚದಲ್ಲಿ (Chandravalli lake) ವಾಕಿಂಗ್ ಟ್ರಾಕ್, ಬೀದಿ ದೀಪಗಳನ್ನು ಅಳವಡಿಸಲಾಗುವುದು. ರೂ.15 ಲಕ್ಷದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ, ರೂ.75 ಲಕ್ಷದಲ್ಲಿ ವಾಹನ ನಿಲುಗಡೆ, ರೂ.1 ಕೋಟಿ ವೆಚ್ಚದಲ್ಲಿ ಚಂದ್ರವಳ್ಳಿ ಗುಹೆಗೆ ವಿದ್ಯುತ್ ದೀಪಗಳ ಅಳವಡಿಕೆ, ರೂ.6 ಕೋಟಿ ವೆಚ್ಚದಲ್ಲಿ ಮಕ್ಕಳ ಆಟಿಕೆ ಟ್ರೈನ್, ರೂ.1.25 ಕೋಟೆ ವೆಚ್ಚದಲ್ಲಿ ಚಂದ್ರವಳ್ಳಿ (Chandravalli lake) ಸಂಪರ್ಕಿಸುವ ರಸ್ತೆ ಬೀದಿ ದೀಪ ಅಳವಡಿಸಲಾಗುವುದು. ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ಶೀಘ್ರವೇ ಪುರಾತತ್ವ ಇಲಾಖೆಯಿಂದ ಕಾಮಗಾರಿಗಳನ್ನು ಕೈಗೊಳ್ಳಲು ಅನುಮತಿ ಪಡೆದುಕೊಳ್ಳುವಂತೆ ಹೇಳಿದರು.
