
Chitradurga news | nammajana.com | 8-9-2024
ನಮ್ಮಜನ.ಕಾಂ, ಚಿತ್ರದುರ್ಗ: ಚಳ್ಳಕೆರೆ ತಾಲ್ಲೂಕಿನ ಕೆರೆಹಿಂದಲಹಟ್ಟಿ ಗ್ರಾಮದ ಗಂಟೆ ಮಾರಮ್ಮನ ದೇವಸ್ಥಾನದಲ್ಲಿ ಅಪ್ರಾಪ್ತ ಬಾಲಕಿಯನ್ನು ಮದುವೆಯಾದ ಚಿಕ್ಕಮ್ಮನಹಳ್ಳಿಯ (Child marriage) ಬಾಬು.ಸಿ ವಿರುದ್ದ ಬಾಲ್ಯ ವಿವಾಹ ಪ್ರಕರಣ ದಾಖಲಿಸಲಾಗಿದೆ.
ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಗಮನಕ್ಕೆ ಬಾಲ್ಯ ವಿವಾಹದ ಕುರಿತು ಮಾಹಿತಿ ಬಂದಿತ್ತು.

ಇದನ್ನೂ ಓದಿ: ಚಿತ್ರದುರ್ಗ ಸಿಟಿ ಇನ್‌ಸ್ಟಿಟ್ಯೂಟ್‌ನಲ್ಲಿ ಲಕ್ಷಾಂತರ ರು. ಅವ್ಯವಹಾರ ಆರೋಪ | Chitradurga
ಕೂಡಲೇ ಆಗಸ್ಟ್ 27 ರಂದು ತಳಕು ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ದ ಪೋಕ್ಸೋ ಹಾಗೂ ಬಾಲ್ಯವಿವಾಹ ನಿಷೇದ ಕಾಯ್ದೆ-2006ರ ಪ್ರಕಾರ ಚಳ್ಳಕೆರೆ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹಾಗೂ ತಳಕು ವೃತ್ತದ ಮಹಿಳಾ (Child marriage) ಮೇಲ್ವಿಚಾರಕಿ ಎಫ್.ಐ.ಆರ್ ದಾಖಲಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್ ತಿಳಿಸಿದ್ದಾರೆ.
