
Chitradurga news| nammajana.com|2-8-2024
ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ತಾಲ್ಲೂಕಿನಲ್ಲಿ ಬಚ್ಚಬೋರನಟ್ಟಿ ಗ್ರಾಮದ ಬಾಲ್ಯ ವಿವಾಹ ಪ್ರಕರಣದಲ್ಲಿ (Child marriage) ಅಪ್ರಾಪ್ತ ಬಾಲಕಿಯ ಮದುವೆಯಾದ ಆರೋಪಿ ವಿರುದ್ದ ಎಫ್.ಐ.ಆರ್ ದಾಖಲಿಸಲಾಗಿದೆ.
ಹಿರಿಯೂರು ತಾಲ್ಲೂಕಿನ ಯಲ್ಲಕರನಹಳ್ಳಿ ಗ್ರಾಮದ ಹರೀಶ್ ಬಿನ್ ಪಾಲಯ್ಯ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿಯಲ್ಲಿ (Child marriage) ಅಪ್ರಾಪ್ತ ಬಾಲಕಿಯನ್ನು ಬಾಲ್ಯ ವಿವಾಹವಾಗಿದ್ದ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಘಟನೆಯನ್ನು ಪರಿಶೀಲಿಸಿ, ಚಳ್ಳಕೆರೆ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ವರದಿ ಕಳುಹಿಸಿಕೊಡಲಾಗಿತ್ತು.

ಇದನ್ನೂ ಓದಿ: MBBS STUDENT: ಮೆಡಿಕಲ್ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ
ಇದನ್ನು ಆಧರಿಸಿ ಜುಲೈ 29 ರಂದು ನಾಯಕನಹಟ್ಟಿ ಪೊಲೀಸ್ ಠಾಣೆಯಲಿ, ಬಾಲ್ಯ ವಿವಾಹ ನಿಷೇಧ ಕಾಯ್ದೆ-2006ರ ಪ್ರಕಾರ (Child marriage) ಆರೋಪಿ ಹರೀಶ್ ವಿರುದ್ದ ಚಳ್ಳಕೆರೆ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕರಣ ದಾಖಲಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್ ತಿಳಿಸಿದ್ದಾರೆ.
