Chitradurga news|nammajana.com|23-6-2024
ನಮ್ಮಜನ.ಕಾಂ, ಚಿತ್ರದುರ್ಗ: ಆಸ್ಪತ್ರೆಗಳಲ್ಲಿ ಬಾಲ ಗರ್ಭಿಣಿ ಪ್ರಕರಣ ಪತ್ತೆಯಾದ ತಕ್ಷಣವೇ ಎಂ.ಎಲ್.ಸಿ (ಮೆಡಿಕೋ ಲೀಗಲ್ ಕೇಸ್) ಮಾಡಿ ಎಫ್.ಐ.ಆರ್. ದಾಖಲಿಸಬೇಕು. ಈ (Child pregnant case) ವಿಚಾರದಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಕೆ ನೀಡಿದರು.
ಜುಲೈ 08 ಮತ್ತು 09 ರಂದು ಮುಖ್ಯಮಂತ್ರಿಯವರ (Child pregnant case) ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯಿತಿ ಸಿಇಒ ಗಳ ಸಮ್ಮೇಳನದಲ್ಲಿ ಚರ್ಚಿಸಲಾದ ವಿಷಯಗಳ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ವಿವಿಧ ಇಲಾಖೆಗಳ ಅನುಪಾಲನಾ ಸಭೆ ನಡೆಸಿ ಅವರು ಮಾತನಾಡಿದರು.

806 ಬಾಲ ಗರ್ಭಿಣಿ ಪ್ರಕರಣಗಳು ಎಫ್ ಐಆರ್ ದಾಖಲು ಏಕೆ ಮಾಡಿಲ್ಲ? (Child pregnant case)
2022-23ನೇ ಸಾಲಿನಲ್ಲಿ ಬೆಳಕಿಗೆ ಬಂದ 806 ಬಾಲ ಗರ್ಭಿಣಿಯರ ಪ್ರಕರಣಗಳಲ್ಲಿ ಸಂಬಂಧಪಟ್ಟ ವೈದ್ಯಾಧಿಕಾರಿಗಳು ಏಕೆ ಎಂ.ಎಲ್.ಸಿ ಮಾಡಿಲ್ಲ? ಆರ್.ಸಿ.ಹೆಚ್. ತಂತ್ರಾಂಶದಲ್ಲಿ (Child pregnant case) ನೋಂದಣಿ ಮಾಡಿದರೆ ಮಾತ್ರ ಸಾಲದು. ಮೊದಲ ಹಂತದಲ್ಲಿ ಎಂ.ಎಲ್.ಸಿ ಮಾಡಿದರೆ, ಪೊಲೀಸ್ ಇಲಾಖೆ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳುವುದು. ಬಾಲ ಗರ್ಭಿಣಿ ಪ್ರಕರಣಗಳಲ್ಲಿ ಎಂ.ಎಲ್.ಸಿ ಮಾಡದ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು.
2022-23, 2023-24 ಹಾಗೂ 2024-25 ಸಾಲಿನಲ್ಲಿ (Child pregnant case) ಜಿಲ್ಲೆಯಲ್ಲಿ ಪತ್ತೆಯಾದ ಬಾಲ ಗರ್ಭಿಣಿ ಪ್ರಕರಣಗಳ ಸಂಪೂರ್ಣ ವಿವರ ನೀಡಿ. ಬಾಲ್ಯ ವಿವಾಹ ಹಾಗೂ ಬಾಲ ಗರ್ಭಿಣಿ ಪ್ರರಣಗಳೆರೆಡು ಸಹ ಸಂಬಂಧ ಹೊಂದಿವೆ. ಜಿಲ್ಲೆಯಲ್ಲಿ ಬಾಲ್ಯ ವಿವಾಹ ತಡೆಗಟ್ಟುವಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಮರ್ಪಕ ಕಾರ್ಯ ಕೈಗೊಳ್ಳದಿರುವುದು ಮೇಲ್ಮೋಟಕ್ಕೆ ಕಂಡು ಬರುತ್ತಿದೆ.(Child pregnant case) ಸಿಡಿಪಿಓಗಳು ಕಚೇರಿಯಲ್ಲಿ ಕುಳಿತುಕೊಳ್ಳದೇ ಗ್ರಾಮೀಣ ಪ್ರದೇಶದಲ್ಲಿ ಸುತ್ತಾಡಿ, ಬಾಲ್ಯ ವಿವಾಹವನ್ನು ತಡೆಗಟ್ಟಲು ಪ್ರಯತ್ನಿಸಬೇಕು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಆರೋಗ್ಯ, ಶಿಕ್ಷಣ, ಕಾರ್ಮಿಕ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಗಳ ಅಧಿಕಾರಿಗಳು ಒಟ್ಟಾಗಿ ಸಮನ್ವಯದಿಂದ ಕಾರ್ಯ ನಿರ್ವಹಿಸಿದರೆ ಮಾತ್ರ ಬಾಲ್ಯ (Child pregnant case) ವಿವಾಹ ಹಾಗೂ ಬಾಲ ಗರ್ಭಿಣಯಂತಹ ಪಿಡುಗನ್ನು ಜಿಲ್ಲೆಯಿಂದ ನಿರ್ಮೂಲನೆ ಮಾಡಲು ಸಾಧ್ಯ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.
ತಾಲ್ಲೂಕು ಮಟ್ಟದಲ್ಲಿ ಬಾಲ್ಯ ವಿವಾಹ ತಡೆ ಮೇಲ್ವಿಚಾರಣಾ ಸಮಿತಿ ಹಾಗೂ ಗ್ರಾಮಗಳಲ್ಲಿ ಬಾಲ್ಯ ವಿವಾಹ ಕಾವಲು (Child pregnant case) ಸಮಿತಿಗಳನ್ನು ರಚಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಇಲಾಖೆ ಅಧಿಕಾರಿಗಳು ತಪ್ಪದೇ ಸಭೆಗಳನ್ನು ಆಯೋಜಿಸಿ ತಾಲ್ಲೂಕು ಮಟ್ಟದ ಹಾಗೂ ಗ್ರಾಮ ಮಟ್ಟದ ಅಧಿಕಾರಿಗಳಲ್ಲಿ ಜಾಗೃತಿ ಮೂಡಿಸಬೇಕು. ಎಲ್ಲಾ ಶಾಲಾ ಕಾಲೇಜುಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲ ಗರ್ಭಿಣಿ ಪಿಡುಗಿನ ಕುರಿತು ಜಾಗೃತಿ ಮೂಡಿಸಬೇಕು ಎಂದು ಜಿ.ಪಂ.ಸಿಇಓ ಎಸ್.ಜೆ ಸೋಮಶೇಖರ್ ಸಭೆಯಲ್ಲಿ ಹೇಳಿದರು.
ಇದನ್ನೂ ಓದಿ: Ganga Welfare Scheme: ಗಂಗಾ ಕಲ್ಯಾಣ ಯೋಜನೆ ಪಂಪಸೆಟ್‍ಗಳಿಗೆ ಶೀಘ್ರವೇ ವಿದ್ಯುತ್ ಸಂಪರ್ಕಕ್ಕೆ ಜಿಲ್ಲಾಧಿಕಾರಿ ಸೂಚನೆ
ಬಾಲ್ಯ ವಿವಾಹ ಹಲವು ಸಾಮಾಜಿಕ ಪಿಡುಗುಗಳಿಗೆ (Child pregnant case) ನಾಂದಿಯಾಗುತ್ತದೆ. ಇದರಿಂದ ಬಾಲ ಗರ್ಭಿಣಿ, ಬಾಲ ತಾಯಿ, ಅನೀಮಿಯಾ, ತಾಯಿ ಹಾಗೂ ಮಗುವಿನ ಮರಣ ಸಹ ಉಂಟಾಗುತ್ತದೆ. ಈ ಸಾಮಾಜಿಕ ಅನಿಷ್ಠಗಳು ಜಿಲ್ಲೆಯ ಅಭಿವೃದ್ಧಿಗೆ ಕಳಂಕ ತರುತ್ತವೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಬಾಲ್ಯ ವಿವಾಹವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ಬಾಲ್ಯ ವಿವಾಹ ತಡೆಗೆ ಕಾರ್ಯಪ್ರವೃತ್ತವಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚಿಸಿದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೆಶಕ ಬಿ.ಆನಂದ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (Child pregnant case) ಡಾ.ರೇಣುಪ್ರಸಾದ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ಹಿಂದು ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಸುಬ್ರನಾಯ್ಕ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್ ಸೇರಿದಂತೆ ಎಲ್ಲಾ ತಾಲ್ಲೂಕುಗಳ ತಹಶೀಲ್ದಾರ್, ನಗರಸಭೆ ಪೌರಾಯುಕ್ತರು, ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252