Chitradurga news|nammajana.com|3-7-2024
ನಮ್ಮಜನ.ಕಾಂ, ಚಿತ್ರದುರ್ಗ: ನಗರದ ಕೆಳಗೋಟೆಯ ಬಸವೇಶ್ವರ ಆಸ್ಪತ್ರೆಯ (Chitradurga accident) ಬಳಿಯ ಹಳೆಯ ರಾಷ್ಟ್ರೀಯ ಹೆದ್ದಾರಿ ಅಪಾಯಕರ ಸ್ಥಳವಾಗಿದೆ. ಜನರು ರಸ್ತೆ ದಾಟಲು ಹೋಗಿ ಅಪಘಾತದಲ್ಲಿ ಮರಣ ಹೊಂದುತ್ತಿದ್ದಾರೆ. ಈ ಸ್ಥಳದಲ್ಲಿ 2020 ರಿಂದ 2024ರ ವರೆಗೆ ವಿವಿಧ ಅಪಘಾತದಲ್ಲಿ ಒಟ್ಟು 11 ಜನರು ಮೃತಪಟ್ಟಿದ್ದು, ಲೋಕೋಪಯೋಗಿ ಇಲಾಖೆ ವತಿಯಿಂದ ಜನರು ಹೆದ್ದಾರಿ ಪ್ರವೇಶಿಸದಂತೆ ಲೋಹದ ಮೆಸ್ ಅಳವಡಿಸಬೇಕು. ಹೀಗೆ ಅಳವಡಿಸಿದ ಮೆಸ್ ತುಂಡಾಗದಂತೆ ನಿರ್ವಹಣೆ ಮಾಡಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ ಸಭೆಯಲ್ಲಿ ಹೇಳಿದರು.
ಈಗಾಗಲೇ ರಸ್ತೆಯನ್ನು ಹೆದ್ದಾರಿ ಪ್ರಾಧಿಕಾರ ಲೋಕೋಪಯೋಗಿ ಇಲಾಖೆಗೆ ಹಸ್ತಾಂತರಿಸಿದೆ. ತಕ್ಷಣವೇ ಹೆದ್ದಾರಿ ಮಧ್ಯದ (Chitradurga accident) ಡಿವೈಡರ್‍ಗಳಲ್ಲಿ ಬೆಳೆದಿರುವ ಗಿಡಗಳನ್ನು ಕಡಿಯುವ ಕೆಲಸವಾಗಬೇಕು. ಸಂಚಾರಿ ಫಲಕಗಳು ಅಳವಡಿಸಬೇಕು. ಅಪಘಾತ ಕೇವಲ ಒಬ್ಬ ವ್ಯಕ್ತಿ ಸಂಬಂಧ ಪಟ್ಟದ್ದು ಅಲ್ಲ. ಅವರನ್ನು ನಂಬಿದ ಕುಟುಂಬಗಳು ಅಪಘಾತದಲ್ಲಿ ಬೀದಿಪಾಲಾಗುತ್ತಿವೆ. ಆದ್ದರಿಂದ ರಸ್ತೆ ಸುರಕ್ಷತೆಗೆ ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವಂತೆ ಹೇಳಿದರು.
ಇದನ್ನೂ ಓದಿ: ಚಳ್ಳಕೆರೆ ಗೇಟ್‍ನಲ್ಲಿ ಹೊಸ ಸಂಚಾರಿ ವೃತ್ತ ನಿರ್ಮಾಣಕ್ಕೆ ಜಿಲ್ಲಾಧಿಕಾರಿ ಸೂಚನೆ | Challakere Gate Circle
ತುರುವನೂರು ರಸ್ತೆಯಿಂದ ಜಿಲ್ಲಾ ಆಸ್ಪತ್ರೆಗೆ ತೆರಳುವ (Chitradurga accident) ಮಾರ್ಗದಲ್ಲಿ ಜಿಲ್ಲಾ ಆಸ್ಪತ್ರೆ ಮುಂಭಾಗ ಬಿ.ಡಿ. ರಸ್ತೆಯಲ್ಲಿನ ಡಿವೈಡರ್ ತೆರವುಗೊಳಿಸಿ ಆಸ್ಪತ್ರೆಗೆ ಹೋಗಲು ಅನುಕೂಲ ಮಾಡಿಕೊಡಬೇಕು. ಮೆದೆಹಳ್ಳಿ ಅಂಡರ್ ಪಾಸ್ ಬಳಿ ರಸ್ತೆಯ ಮಧ್ಯದಲ್ಲಿ ಒಳಚರಂಡಿ ದುರಸ್ಥಿಯಲ್ಲಿ ಇದ್ದು, ಸುಗಮ ಸಂಚಾರಕ್ಕೆ ಅಡ್ಡಿಯಾಗಿದೆ. ಇದೇ ಮಾದರಿಯಲ್ಲಿ ತುರುವನೂರು ರಸ್ತೆಯ ಅಂಡರ್ ಪಾಸ್ ತೊಂದರೆ ಇದೆ. ನಗರ ರಸ್ತೆಗಳಲ್ಲಿ ಬಿಡಾಡಿ ದನಗಳ ಸಂಚಾರ ಅಧಿಕವಾಗಿದೆ. ಗೂಡಂಗಡಿಗಳು ಸಹ ಹೆಚ್ಚಾಗಿವೆ ಇದರಿಂದ ಲಘು ಅಪಘಾತಗಳು ಉಂಟಾಗುವ ಸಂಭವವಿದೆ ಎಂದು ಸಂಚಾರಿ ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ಟಿ. ರಾಜು ತಿಳಿಸಿದರು.