Chitradurga news|nammajana.com|11-6-2024
ನಮ್ಮಜನ.ಕಾಂ, ಚಿತ್ರದುರ್ಗ: ಭರಮಸಾಗರ-ಚಿತ್ರದುರ್ಗ ಮಧ್ಯದ 29 ಕಿ.ಮೀ ಉದ್ದದ ರೈಲ್ವೇ ಭೂಸ್ವಾಧೀನ ಪ್ರಕ್ರಿಯೆ ಶೇ.90 ರಷ್ಟು ಮುಕ್ತಾಯಗೊಂಡಿದ್ದು, ಭೂಮಿ ಹಸ್ತಾಂತರ (Chitradurga-Bharamasagara Railway) ಮಾಡಲಾಗಿದೆ. ಕಾಮಗಾರಿಯ ಟೆಂಡೆರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಶೀಘ್ರವೇ ರಾಜ್ಯದವರೇ ಆದ ರೈಲ್ವೇ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರಿಂದ ಕಾಮಗಾರಿಯ ಭೂಮಿ ಪೂಜೆ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಸಂಸದ ಗೋವಿಂದ ಎಂ ಕಾರಜೋಳ ರೈಲ್ವೇ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ರೈಲ್ವೇ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.

ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲ್ವೇ ಯೋಜನೆ ಜಿಲ್ಲೆ ಅಗತ್ಯವಾಗಿದೆ. ಯೋಜನೆಗೆ ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ಒಟ್ಟು 1210 ಎಕೆರೆ ಭೂಮಿ ಅವಶ್ಯಕವಾಗಿದೆ. ಇದರಲ್ಲಿ 1053 ಎಕರೆ ಭೂಮಿ ಸ್ವಾಧೀನ ಪಡಿಸಿಕೊಂಡು ರೈಲ್ವೇ ಇಲಾಖೆ (Chitradurga-Bharamasagara Railway) ನೀಡಲಾಗಿದೆ. ಬಾಕಿ ಇರುವ 145 ಎಕರೆ ಭೂ ಸ್ವಾಧೀನ ಪ್ರಕ್ರಿಯ ಅಂತಿಮ ಹಂತದಲ್ಲಿದೆ. ಯೋಜನೆ ವಿಳಂಭವಾಗದAತೆ ರೈಲ್ವೇ ಕಾಮಗಾರಿಗೆ ಅಗತ್ಯ ಇರುವ ಭೂಮಿ ಸ್ವಾಧೀನ ಹಾಗೂ ರೈಲ್ವೇ ಇಲಾಖೆಗೆ ಭೂಮಿ ಹಸ್ತಾಂತರಿಸುವ ಪ್ರಕ್ರಿಯೆಯನ್ನು ತ್ವರಿತವಾಗಿ ಮಾಡುವಂತೆ ಸಂಸದ ಗೋವಿಂದ ಎಂ ಕಾರಜೋಳ ಭೂಸ್ವಾಧೀನಾಧಿಕಾರಿಗಳಿಗೆ ಸೂಚಿಸಿದರು.
ಆಲಮಟ್ಟಿ-ಕೊಪ್ಪಳ-ಚಿತ್ರದುರ್ಗ ರೈಲುಮಾರ್ಗ ಕೇಂದ್ರಕ್ಕೆ ಪ್ರಸ್ತಾವ:
ಈ ಹಿಂದೆ ಯಡಿಯೂರಪ್ಪನವರು ಮುಖ್ಯಮಂತ್ರಿಗಳು ಇದ್ದಾಗ ಆಲಮಟ್ಟಿ-ಕೊಪ್ಪಳ-ಚಿತ್ರದುರ್ಗ ರೈಲು ಮಾರ್ಗ ಯೋಜನೆಯ ಪ್ರಸ್ತಾವವನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಕೊಡಲಾಗಿತ್ತು. 50:50 ಮಾದರಿಯಲ್ಲಿ ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡುವುದರೊಂದಿಗೆ, ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ಭೂಮಿ ಹಸ್ತಾಂತರ ಮಾಡುವುದಾಗಿ ಪ್ರಸ್ತಾವನೆಯಲ್ಲಿ ತಿಳಿಸಲಾಗಿತ್ತು. ಈ ಯೋಜನೆಗೆ ಮರುಜೀವ ನೀಡುವ ನಿಟ್ಟಿನಲ್ಲಿ ಚಿತ್ರದುರ್ಗ ಜಿಲ್ಲೆಯಿಂದ ಮತ್ತೊಮ್ಮೆ ಕೇಂದ್ರಕ್ಕೆ ಪ್ರಸ್ತಾವನೆ (Chitradurga-Bharamasagara Railway) ಸಲ್ಲಿಸಲಾಗುವುದು. ಚಿತ್ರದುರ್ಗ ಜಿಲ್ಲಾಧಿಕಾರಿಗಳು ಬಾಗಲಕೋಟೆ ಹಾಗೂ ಬಿಜಾಪುರ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿ, ಈ ಹಿಂದೆ ಸಲ್ಲಿಸಿದ್ದ ಯೋಜನೆ ಪ್ರಸ್ತಾವನೆ ಪ್ರತಿ ಪಡೆದುಕೊಳ್ಳುವಂತೆ ನಿರ್ದೇಶನ ನೀಡಿದ್ದೇನೆ ಎಂದು ಸಂಸದ ಗೋವಿಂದ ಎಂ ಕಾರಜೋಳ ತಿಳಿಸಿದರು.
ಇದನ್ನೂ ಓದಿ: ಚಿತ್ರದುರ್ಗದ ಇಬ್ಬರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ | Lokayukta attack chitradurga
ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಭೂಸ್ವಾಧೀನಾಧಿಕಾರಿ ವಿವೇಕ್, ನೈರುತ್ಯ ರೈಲ್ವೇ ಮುಖ್ಯ ಇಂಜಿನಿಯರ್ ಪರದೀಪ್ ಪುರಿ, ಕಾರ್ಯಪಾಲಕ ಇಂಜಿನಿಯರ್ ರಜತ್ ತುನಹಾ, ಸಹಾಯಕ ಕಾರ್ಯಪಾಲಕ ಇಂಜಿನಿಯರ್, ಬಿ.ಪುರುಷೊತಮ್, ವಿಭಾಗೀಯ ಸಹಾಯಕ ಇಂಜಿನಿಯರ್ ನಿತ್ಯಾನಂತದ ಸ್ವಾಮಿ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252