Chitradurga news | nammajana.com | 28-07-2025
ನಮ್ಮಜನ.ಕಾಂ, ಚಿತ್ರದುರ್ಗ: ವರ್ಷದಿಂದ(Child Marriage) ವರ್ಷಕ್ಕೆ ಜಿಲ್ಲೆಯಲ್ಲಿ ಬಾಲ್ಯವಿವಾಹ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದು ಆತಂಕ ಸೃಷ್ಟಿಸಿದೆ. ಇದಕ್ಕೆ ಕಡಿವಾಣ ಹಾಕುವುದು ಪ್ರತಿಯೊಬ್ಬ ನಾಗರೀಕರ ಜವಾಬ್ದಾರಿಯಾಗಿದೆ’ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ರೋಣ ವಾಸುದೇವ್ ತಿಳಿಸಿದರು.
ಇದನ್ನೂ ಓದಿ: ನಗರಸಭೆ ನೂತನ ಉಪಾಧ್ಯಕ್ಷೆಯಾಗಿ ಶಕೀಲ ಬಾನು ಆಯ್ಕೆ

ನಗರದ ಡಾನ್ ಬೋಸ್ಕೊ ಕಾಲೇಜಿನಲ್ಲಿ ಸೋಮವಾರ ಆಯೋಜಿಸಿದ್ದ ಶೈಕ್ಷಣಿಕ ವರ್ಷದ ಚಾಲನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬಾಲ್ಯ ವಿವಾಹದ ಜತೆ ಇದೀಗ ಬಾಲ ಗರ್ಭಾವಸ್ಥೆ ಪಿಡುಗಾಗಿ ಪರಿಣಮಿಸುತ್ತಿದೆ. ಇದರ ಬಗ್ಗೆ ಜಾಗೃತಿ ಮೂಡಿಸುವ ಜತೆಗೆ ಬಾಲ್ಯ ವಿವಾಹದ ಬಗ್ಗೆ ಮಾಹಿತಿ ತಿಳಿದ ತಕ್ಷಣವೇ ಅದರ ತಡೆಗೆ ಪ್ರಯತ್ನಿಸಬೇಕು ಎಂದು ಸೂಚಿಸಿದರು.
ಹದಿಹರೆಯದವರು ದೈಹಿಕ ತುಡಿತ, ಕುತೂಹಲ ಹಾಗೂ ಆಸೆಗೆ ಒಳಗಾಗಿ ಬಾಲ ಗರ್ಭಾವಸ್ಥೆ ಸ್ಥಿತಿಗೆ ತಲುಪುತ್ತಿದ್ದಾರೆ. ದೈಹಿಕ ಹಾಗೂ ಮಾನಸಿಕವಾಗಿ ಸಧೃಡವಾಗಿರದ ಬಾಲಕಿಯರು ಗರ್ಭಧರಿಸಿ ನಾನಾ ಸಂಕಷ್ಟಗಳಿಗೆ ತುತ್ತಾಗುತ್ತಾರೆ. 18 ವರ್ಷ ಒಳಗಿನ ಮಕ್ಕಳ ಮೇಲಿನ ದೌರ್ಜನ್ಯ ತಡೆಯಲು ಪೋಕ್ಸೊ ಕಾಯ್ದೆ ಜಾರಿ ಮಾಡಲಾಗಿದೆ. ಮಕ್ಕಳ ದೌರ್ಜನ್ಯದ ಸಂಗತಿಗಳು ಕಂಡುಬಂದ ತಕ್ಷಣವೇ ದೂರು ದಾಖಲಿಸಲು ಕ್ರಮವಹಿಸಲಾಗಿದೆ ಎಂದು ತಿಳಿಸಿದರು.
ಬಾಲ್ಯವಿವಾಹದ ಕುರಿತು ಸಹಾಯವಾಣಿಗೆ ಕರೆ ಮಾಡಬೇಕು. ಇದಕ್ಕೆ ಜಿಲ್ಲಾಡಳಿತ ತಕ್ಷಣ ಸ್ಪಂದಿಸಿ ಬಾಲ್ಯ ವಿವಾಹ ತಡೆಗಟ್ಟುವ ಕಾರ್ಯ ಮಾಡುತ್ತಿದೆ. ಈ ಸಾಮಾಜಿಕ ಪಿಡುಗು ತೊಲಗಿಸಲು ವಿದ್ಯಾರ್ಥಿಗಳು ಸಹ ಕೈ ಜೋಡಿಸಬೇಕು.
-ರೋಣ ವಾಸುದೇವ್, ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ
ಇತ್ತೀಚಿನ ದಿನಗಳಲ್ಲಿ(Child Marriage) ಪ್ರತಿ ಮಗುವಿಗೂ ಮೊಬೈಲ್, ಇಂಟರ್‌ನೆಟ್ ದೊರೆಯುತ್ತಿದ್ದು, ಸಾಮಾಜಿಕ ಜಾಲತಾಣ ಬಳಸುತ್ತಿದ್ದಾರೆ. ಇದರಿಂದ ಮಕ್ಕಳು ಮಾನಸಿಕವಾಗಿ ಯಾವ ರೀತಿಯಾಗಿ ಬೆಳೆಯಬೇಕಿತ್ತೋ ಆ ರೀತಿ ಬೆಳೆಯದೇ ಇನ್ನೊಂದು ದಿಕ್ಕಿನಲ್ಲಿ ಬೆಳೆಯುತ್ತಿದ್ದಾರೆ. ಇದರಿಂದ ಮಕ್ಕಳು ಕಾನೂನು ಸಂಘರ್ಷಕ್ಕೆ ಒಳಗಾಗುತ್ತಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ: ವಿ ವಿ ಸಾಗರದ ಇಂದಿನ ನೀರಿನ ಮಟ್ಟ
ಸಂವಿಧಾನದಲ್ಲಿ ಮಹಿಳೆಯರ ಗೌರವಕ್ಕೆ ಚ್ಯುತಿ ಬರದ ಹಾಗೆ ನಡೆದುಕೊಳ್ಳುವಂತೆ ಹೇಳಲಾಗಿದೆ. ಆದರೂ ಸಹ ದೇಶದಲ್ಲಿ ಸ್ತ್ರೀಯರ ಮೇಲಿನ ದೌರ್ಜನ್ಯ ಕಡಿಮೆ ಆಗುತ್ತಿಲ್ಲ.
ಮಹಿಳೆಯರ ಕಳ್ಳ ಸಾಗಣೆ ತಡೆಯಲು ಮಾನವ ಕಳ್ಳ ಸಾಗಾಣಿಕೆ ನಿಷೇಧ ಕಾಯ್ದೆ, ಗೃಹ ಹಿಂಸೆಯಿಂದ ರಕ್ಷಣೆ, ವರದಕ್ಷಿಣೆ ನಿಷೇಧ, ಕೆಲಸದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆಗೆ ಕಾಯ್ದೆ ತರಲಾಗಿದೆ. ಜತೆಗೆ ಸಮಾನ ವೇತನ ಹಾಗೂ ತಾಯ್ತನದ ಸೌಲಭ್ಯ ಕಾಯ್ದೆ ಜಾರಿ ಮಾಡಲಾಗಿದೆ, ಇದರ ಬಗ್ಗೆ ತಿಳಿದುಕೊಳ್ಳಬೇಕು ಎಂದರು.
ಮನುಷ್ಯನ ವ್ಯಕ್ತಿತ್ವ ರೂಪಿಸುವಲ್ಲಿ ಶಿಕ್ಷಣ ಮಹತ್ವದ ಪಾತ್ರ ವಹಿಸುತ್ತದೆ. ಆದರೆ ಯುವ ಸಮುದಾಯ ಮಾದಕ ವ್ಯಸನಕ್ಕೆ ತುತ್ತಾಗುತ್ತಿರುವುದು ಕಳವಳದ ಸಂಗತಿ. ಅಪರಿಚಿತರಿಂದ ಯಾವುದೇ ವಸ್ತುಗಳನ್ನು ತೆಗೆದುಕೊಳ್ಳಬೇಡಿ. ಅವರಿಂದ ಅಂತರ ಕಾಯ್ದುಕೊಳ್ಳಿ’ ಎಂದು ತಿಳಿಸಿದರು.
ಶೈಕ್ಷಣಿಕ ವರ್ಷದ ಪ್ರತಿ ಕ್ಷಣವೂ ಅಮೂಲ್ಯ. ಶಿಕ್ಷಕರ ಮಾತನ್ನು ಪಾಲಿಸಿ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಿ. ಸಮಯ ವ್ಯರ್ಥ ಮಾಡಿದರೆ ಕಷ್ಟದ ದಿನಕ್ಕೆ ನೀವೇ ದಾರಿ ಮಾಡಿಕೊಟ್ಟಂತೆ. ಸ್ಪರ್ಧಾತ್ಮಕ ಯುಗದಲ್ಲಿ ಅಂಕಗಳಿಕೆ ಜತೆಗೆ ಕ್ರೀಯಾಶೀಲತೆ ಬಹಳ ಮುಖ್ಯವಾಗುತ್ತದೆ’ ಎಂದು ತಿಳಿಸಿದರು.
ಇದನ್ನೂ ಓದಿ: ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಪ್ರಸ್ತುತ ದಿನಮಾನದಲ್ಲಿ(Child Marriage) ಕಲಿಕೆಗೆ ಭಾಷೆ ಅಡ್ಡಿ ಆಗುವುದಿಲ್ಲ. ಎಲ್ಲವೂ ಬೆರಳ ತುದಿಯಲ್ಲಿ ಎಲ್ಲ ಭಾಷೆಯಲ್ಲಿ ದೊರೆಯುತ್ತವೆ. ಅಧ್ಯಯನಕ್ಕೆ ಮಾತ್ರ ಮೊಬೈಲ್ ಬಳಕೆ ಮಾಡಬೇಕು. ಜ್ಞಾನ ಪಡೆಯಲು ಮತ್ತು ಉತ್ತಮ ನಾಗರಿಕರಾಗಲು ಅವಕಾಶವನ್ನು ಬಳಸಿಕೊಳ್ಳಿ ಎಂದರು.
ಎಲ್ಲಾ ಕೋರ್ಸ್‌ಗಳು ಉತ್ತಮವಾಗಿವೆ. ವಿಜ್ಞಾನ ಮಾತ್ರ ಉತ್ತಮ ಎಂದು ಭಾವಿಸಬೇಡಿ. ನಿಮ್ಮ ಒಳಗೊಳ್ಳುವಿಕೆಯಿಂದ ನೀವು ಅತ್ಯುತ್ತಮವಾಗಿ ಮಾಡಬಹುದು. ಶ್ರದ್ಧೆಯಿಂದ ಕಲಿತು ನಿಮ್ಮ ಕುಟುಂಬ, ತಂದೆ– ತಾಯಿ ಹಾಗೂ ಸಂಸ್ಥೆಗೆ ಉತ್ತಮ ಹೆಸರು ತಂದು ಕೊಡಿ ಎಂದು ತಿಳಿಸಿದರು.
ಇದನ್ನೂ ಓದಿ: ಕೆಸರು ಗದ್ದೆಯಾದ ಭೀಮಸಮುದ್ರ ಡಾಂಬರ್ ರಸ್ತೆ
ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ವಿಜಯ್, ಸಂಸ್ಥೆ ಆಡಳಿತಾಧಿಕಾರಿ ಫಾದರ್ ಫೆಲೆಕ್ಸ್ ಸೆರಾವೋ, ಪ್ರಾಂಶುಪಾಲ ಫಾದರ್ ಸಿ.ಬೆನ್ನಿ, ಉಪ ಪ್ರಾಂಶುಪಾಲ ಫಾದರ್ ಕ್ರಿಸ್ಟಿ ಜೋಸೆಫ್, ನಿರ್ದೇಶಕ ಡಿ.ಎನ್.ಅಂಥೋನಿ ರಾಜು, ಉಪನ್ಯಾಸಕರಾದ ಡಾ.ಎನ್.ಧನಕೋಟಿ, ರಿಂಕಿ, ಆಕಾಂಕ್ಷಿ ಹಜಾರೆ ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252