Chitradurga news|nammajana.com|10-8-2024
ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಆ.26 ರಂದು ಚುನಾವಣೆ ನಡೆಸಲಾ ಗುತ್ತದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ (Chitradurga City Municipal Council) ಕೊಟ್ಟಿದೆ.
ಈ ಚುನಾವಣೆ ವಿಚಾರವಾಗಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು (Chitradurga City Municipal Council) ನ್ಯಾಯ ಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.
ಈ ವೇಳೆ ಸರ್ಕಾರದ ಪರ ವಕೀಲರು ಹಾಜರಾಗಿ ಚಿತ್ರದುರ್ಗ ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆಗೆ ದಿನಾಂಕ ನಿಗದಿಪಡಿಸಿ ವೇಳಾಪಟ್ಟಿ ಪ್ರಕಟಿಸಲಾಗಿದೆ ಎಂದು ಮಾಹಿತಿ ನೀಡಿ ಪ್ರಮಾಣ ಪತ್ರ ಸಲ್ಲಿಸಿದರು.
ಅದನ್ನು ದಾಖಲಿಸಿಕೊಂಡ ನ್ಯಾಯಪೀಠ, ಅರ್ಜಿದಾರರ ಮನವಿ ಈಡೇರಿರುವುದ ರಿಂದ ಅರ್ಜಿಯ ವಿಚಾರಣೆ ಮುಂದುವ ರಿಸುವುದು ಅಗತ್ಯವಿಲ್ಲ ಅರ್ಜಿಯನ್ನು ಆದೇಶಿಸಿತು.ಎಂದು (Chitradurga City Municipal Council) ಹೇಳಿ ಇತ್ಯರ್ಥಪಡಿಸಿ ವಿಚಾರಣೆಗೆ ಬಂದಿದ್ದಾಗ ಸರ್ಕಾರದ ಪರ ಹೆಚ್ಚುವರಿ ಅಡ್ವಕೇಟ್ ಜನರಲ್ ಪ್ರತಿಮಾ ಹೊನ್ನಾಪುರ ಹಾಜರಾಗಿ, ಚಿತ್ರದುರ್ಗ ಸೇರಿದಂತೆ ಇತರೆ ಸ್ಥಳೀಯ ಸಂಸ್ಥೆಗಳ 2ನೇ ಅವಧಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲು ನಿಗದಿಪಡಿಸಿ ಸರ್ಕಾರ ಹೊರಡಿಸಿದ್ದ ಗೆಜೆಟ್ ಅಧಿಸೂಚನೆಯನ್ನು ನ್ಯಾಯ ಪೀಠಕ್ಕೆ ಸಲ್ಲಿಸಿದ್ದರು.
ಅರ್ಜಿದಾರರ ಪರ ಹಾಜರಿದ್ದ ವಕೀಲ ಎ.ಮೊಹಮ್ಮದ್ ತಾಹೀರ್, ಸರ್ಕಾರ ಮೀಸಲು ನಿಗದಿಪಡಿಸಿದೆಯಾದರೂ ಯಾವಾಗ ಚುನಾವಣೆ ನಡೆಸಲಾಗುತ್ತದೆ ಎಂಬ ಬಗ್ಗೆ ಮಾಹಿತಿ ನೀಡಿಲ್ಲ ಎಂದು ಆಕ್ಷೇಪಿಸಿದ್ದರು.
ಇದನ್ನೂ ಓದಿ: ಚಿತ್ರದುರ್ಗ ಸಿಟಿ ಯಲ್ಲಿ ವಿದ್ಯುತ್ ವ್ಯತ್ಯಯ | Power Cut
ಅದನ್ನು ಪರಿಗಣಿಸಿದ್ದನ್ಯಾಯಪೀಠ, ಯಾವಾಗ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ನಡೆಸಲಾಗುತ್ತದೆ ಚುನಾವಣೆ ಬಗ್ಗೆ (Chitradurga City Municipal Council) ಆ.9ರಂದು (ಶುಕ್ರವಾರ) ಮಾಹಿತಿ ನೀಡಬೇಕು ಎಂದು ಸೂಚಿಸಿತ್ತು.
ಇದನ್ನೂ ಓದಿ: ಕಾಲೇಜು ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ |Degree Course