
Chitradurga news|nammajana.com|26-6-2024
ನಮ್ಮಜನ.ಕಾಂ, ಚಿತ್ರದುರ್ಗ: ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಲಾದ 2023-24ನೇ ಸಾಲಿನ ಮಾರ್ಚ್ ಅಂತ್ಯದವರೆಗಿನ ಕೆ.ಡಿ.ಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಮಾತನಾಡಿ ನಗರದಲ್ಲಿರುವ ಸಿಸಿ ಕ್ಯಾಮೆರಾಗಳು (Chitradurga City Not Work CC TV) ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಈ ಸಿ.ಸಿ.ಕ್ಯಾಮೆರಾಗಳನ್ನು ಕಳೆದ 4-5 ವರ್ಷದ ಹಿಂದೆ ಹಾಕಿದ್ದಾರೆ. ಸರಿಯಾದ ನಿರ್ವಹಣೆ ಇಲ್ಲ. ಈ ಕುರಿತು ಕ್ರಮವಹಿಸಬೇಕು ಎಂದು ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರು ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ಅವರಿಗೆ ಸೂಚನೆ ನೀಡಿದರು.
ಇದನ್ನೂ ಓದಿ: ಚಿತ್ರದುರ್ಗ ನಿರ್ಮಿತಿ ಕೇಂದ್ರದ ಹಗರಣ COD ಗೆ ವಹಿಸಲು ಶಿಫಾರಸು | Nirmithi Kendra Money abuse

ಚಿತ್ರದುರ್ಗ ನಗರದಲ್ಲಿರುವ ಸಿ.ಸಿ.ಕ್ಯಾಮೆರಾಗಳನ್ನು (Chitradurga City Not Work CC TV) ಸರಿಪಡಿಸಿ, ನಗರಸಭೆ ವತಿಯಿಂದಲೇ ನಿರ್ವಹಣೆ ಮಾಡುತ್ತೇವೆ ಎಂದು ರೇಣುಕಾ ಸಭೆಗೆ ಮಾಹಿತಿ ನೀಡಿದರು.
ಹೊಸ ಮದ್ಯದಂಗಡಿಗೆ ಅನುಮತಿ ಬೇಡ:
ಚಿತ್ರದುರ್ಗ ಕ್ಷೇತ್ರದಲ್ಲಿ ಹಳ್ಳಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ವ್ಯಾಪಕ ದೂರುಗಳು ಕೇಳಿಬರುತ್ತಿವೆ. (Chitradurga City Not Work CC TV) ಕೂಡಲೆ ಇದರ ಬಗ್ಗೆ ಅಬಕಾರ ಇಲಾಖೆ ಕ್ರಮ ಕೈಗೊಂಡು, ಹಳ್ಳಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟವನ್ನು ಬಂದ್ ಮಾಡಿಸಬೇಕು, ಅಲ್ಲದೆ ಹೊಸದಾಗಿ ಕ್ಷೇತ್ರ ವ್ಯಾಪ್ತಿಯಲ್ಲಿ ಎಲ್ಲಿಯೂ ಖಾಸಗಿ ಅಥವಾ ಎಂಎಸ್ಐಎಲ್ ಮದ್ಯದಂಗಡಿಗೆ ಹಾಗೂ ಸಿಎಲ್-7 ಗೂ ಕೂಡ ಅನುಮತಿ ನೀಡುವುದು ಬೇಡ ಎಂದು ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರು ಅಬಕಾರ ಇಲಾಖೆ ಉಪ ಆಯುಕ್ತರಿಗೆ ಸೂಚನೆ ನೀಡಿದರು.