Chitradurga news|nammajana.com|03-05-2025
ನಮ್ಮಜನ.ಕಾಂ, ಚಿತ್ರದುರ್ಗ: ಬೆಂಗಳೂರಿನ ರಾಜ್ಯ ಬಾಲಭವನ ಸೋಸೈಟಿ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ (Chitradurga city) ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಸಮಿತಿ ಸಂಯುಕ್ತ (summer camp) ಆಶ್ರಯದಲ್ಲಿ ಮೇ 12 ರಿಂದ 26 ಮೇ ವರೆಗೆ 05 ರಿಂದ16 ವರ್ಷದ ಮಕ್ಕಳಿಗಾಗಿ ಜಿಲ್ಲಾ ಮಟ್ಟದ ಮಕ್ಕಳ ಬೇಸಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
ಶಿಬಿರದಲ್ಲಿ ಮಕ್ಕಳಿಗೆ ಯೋಗ ಧ್ಯಾನ, ಚಿತ್ರಕಲೆ, ಕಸದಿಂದ ರಸ, ಜೇಡಿ ಮಣ್ಣಿನ ಕಲೆ, ಮೇಹಂದಿ, ಕರಕುಶಲತೆ, ಸಮೂಹ ನೃತ್ಯ, ಸಂಗೀತ, ಮಾತನಾಡುವ ಗೊಂಬೆ, ಆಹ್ವಾನಿತ ಅಥಿತಿಗಳಿಂದ ಉಪನ್ಯಾಸ ಸೇರಿದಂತೆ ಮುಂತಾದ ವಿಷಯಗಳ ತರಬೇತಿ ನೀಡಲಾಗುವುದು.

ಆಸಕ್ತ ಪೋಷಕರು ಮತ್ತು ಮಕ್ಕಳು ಮೇ 09 ರ ಸಂಜೆ 5:30ರ ಒಳಗೆ ಹೆಸರು ನೊಂದಾಯಿಸಬೇಕು. ಹೆಚ್ಚಿನ ಮಾಹಿತಿಗಾಗಿ (Chitradurga city) ವೀರವನಿತೆ ಒನಕೆ ಓಬವ್ವ ಕ್ರೀಡಾಂಗಣದ ಮುಂಭಾಗದ (summer camp) ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಹಾಗೂ ಜಿಲ್ಲಾ ಬಾಲಭವನ ಸಮಿತಿ ಕಾರ್ಯದರ್ಶಿಗಳ ಕಚೇರಿಗೆ ಭೇಟಿ ನೀಡಬಹುದು.
ಇದನ್ನೂ ಓದಿ: Dina Bhavishya | ದಿನ ಭವಿಷ್ಯ, ಕೆಲಸ ಕಾರ್ಯ ಅಡೆತಡೆ ನಿವಾರಣೆ, ಉದ್ಯೋಗ ಭಾಗ್ಯ
ಕಾರ್ಯಕ್ರಮ ಸಂಯೋಜಕರ ಪೋನ್ ಸಂಖ್ಯೆ 7259551325 ಹಾಗೂ ದೂರವಾಣಿ ಸಂಖ್ಯೆ-08194-235259 ಕರೆ ಮಾಡುವಂತೆ ಪ್ರಕಟಣೆ ತಿಳಿಸಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252