Chitradurga news|nammajana.com|27-9-2024
ನಮ್ಮಜನ.ಕಾಂ, ಚಿತ್ರದುರ್ಗ: ರಾಜ್ಯ ಸರ್ಕಾರದ ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮ ರೀತಿಯಲ್ಲಿ ತಲುಪಿಸಿರುವ ಚಿತ್ರದುರ್ಗ ಜಿಲ್ಲಾಧಿಕಾರಿ (Chitradurga DC) ಟಿ.ವೆಂಕಟೇಶ್ ಮತ್ತು ಚಳ್ಳಕೆರೆ ತಹಶೀಲ್ದಾರ್ ರೇಹಾನ್‌ಪಾಷರವರಿಗೆ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಬೆಂಗಳೂರಿನ ವಿಕಾಸಸೌಧದಲ್ಲಿ ಶುಕ್ರವಾರ ನಡೆದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಹಾಗೂ ಅಭಿನಂದನಾ ಸಭೆಯಲ್ಲಿ ಕಂದಾಯ ಇಲಾಖೆ ಸಚಿವ ಕೃಷ್ಣಭೈರೇಗೌಡ ಹಾಗೂ ಪ್ರಧಾನ ಕಾರ್ಯದರ್ಶಿ ರಶ್ಮಿ ವಿ ಮಹೇಶ್ ಅವರು ಜಿಲ್ಲಾಧಿಕಾರಿ (Chitradurga DC) ಟಿ.ವೆಂಕಟೇಶ್ ಅವರಿಗೆ “ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024ರ ಪ್ರಶಸ್ತಿ ನೀಡಿ ಗೌರವಿಸಿದರು.

ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಉತ್ತಮವಾಗಿ ಕಾರ್ಯನಿರ್ವಹಿಸುವ ಮೂಲಕ ಜನಸ್ನೇಹಿ ಹಾಗೂ ನಾಗರಿಕ ಸ್ನೇಹಿ ಸೇವೆಗಳನ್ನು ಸಲ್ಲಿಸಿದ್ದಾರೆ.
ಇದನ್ನೂ ಓದಿ: ಮೊಳಕಾಲ್ಮೂರು ತಾಲೂಕು ಪಂಚಾಯತಿ ವ್ಯವಸ್ಥಾಪಕ ಅಮಾನತು | Suspended
ರಾಜ್ಯ ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಿ, ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ರೂಪಿಸಿದ್ದಾರೆ. ಈ ಎಲ್ಲಾ ಕೊಡುಗೆಗಳನ್ನು ಆಧರಿಸಿ, ಕಂದಾಯ ಇಲಾಖೆ ವತಿಯಿಂದ 2023-24ನೇ ಸಾಲಿಗೆ “ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಚಳ್ಳಕೆರೆ ತಹಶೀಲ್ದಾರ್ ಗೆ ಉತ್ತಮ ಕಂದಾಯಾಧಿಕಾರಿ ಪ್ರಶಸ್ತಿ
ಚಳ್ಳಕೆರೆ ತಾಲ್ಲೂಕಿನ ತಹಶೀಲ್ದಾರ್ ರೇಹಾನ್‌ಪಾಷರವರಿಗೆ ಕಂದಾಯ ಇಲಾಖೆ ವಿಪತ್ತು ನಿರ್ವಹಣೆ ಮತ್ತು ಆಯುಕ್ತರು ಕಂದಾಯ ಇಲಾಖೆ ಸಹಯೋಗದೊಂದಿಗೆ ಅತ್ಯುತ್ತಮ (Chitradurga DC) ಕಂದಾಯಾಧಿಕಾರಿ ೨೦೨೪ರ ಪ್ರಶಸ್ತಿಯನ್ನು ಬೆಂಗಳೂರಿನಲ್ಲಿ ಆಯೋಜಿಸಿದ್ದ ಕಂದಾಯ ಭವನದಲ್ಲಿ ಕೃಷಿ ಸಚಿವ ಕೃಷ್ಣಬೈರೇಗೌಡ ವಿತರಿಸಿದರು
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252