![](https://nammajana.com/wp-content/uploads/2025/02/IMG-20250203-WA0008.jpg)
Chitradurga news|nammajana.com|06-02-2025
ನಮ್ಮಜನ.ಕಾಂ, ಚಿತ್ರದುರ್ಗ: ಜಿಲ್ಲಾಸ್ಪತ್ರೆಯ ಕಾರ್ಯವೈಖರಿಗೆ (Chitradurga) ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ (Chitradurga) ಡಾ.ನಾಗಲಕ್ಷ್ಮೀ ಚೌಧರಿ ಬೇಸರ ವ್ಯಕ್ತಪಡಿಸಿದರು.
ಕುಡಿಯುವ ನೀರಿನ ವ್ಯವಸ್ಥೆ ಇಲ್ಲ, ಬಿಸಿ ನೀರು ಇಲ್ಲ
ಜಿಲ್ಲಾಸ್ಪತ್ರೆಯ ಸ್ಥಿತಿಗತಿ ಅವಲೋಕನಕ್ಕಾಗಿ ಭೇಟಿ ನೀಡಿದಾಗ ಸಾಕಷ್ಟು ದೂರುಗಳು ಗಮನಕ್ಕೆ ಬಂದಿದ್ದು, ಜಿಲ್ಲಾಸ್ಪತ್ರೆಯ ವ್ಯವಸ್ಥೆಯು ಮನಸ್ಸಿಗೆ ನೋವುಂಟು ಮಾಡಿದೆ. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಬಿಸಿ ನೀರು ಇಲ್ಲ, ತಾಯಿ (Chitradurga) ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಅಳವಡಿಸಿರುವ ಲಿಪ್ಟ್ ವರ್ಕ್ ಆಗುತ್ತಿಲ್ಲ.
![](https://nammajana.com/wp-content/uploads/2025/01/gifmaker_me-2.gif)
ಜಿಲ್ಲಾಸ್ಪತ್ರೆಯಿಂದ ನಡೆಯುತ್ತಿರುವ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯಗಳು ಕಲ್ಪಿಸದೇ ಇರುವುದಕ್ಕೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಅವರ ವಿರುದ್ಧ (Chitradurga) ಅಸಮಾಧಾನ ವ್ಯಕ್ತಪಡಿಸಿದರು.
ಸತ್ಯ ಬಿಚ್ಚಿಟ್ಟ ವಿದ್ಯಾರ್ಥಿಗಳು
ನರ್ಸಿಂಗ್ ವಿದ್ಯಾರ್ಥಿಗಳನ್ನು ಸಭೆಗೆ ಕರೆಯಿಸಿದ ಆಯೋಗದ ಅಧ್ಯಕ್ಷರು, ಅವರಿಂದ ಅಹವಾಲುಗಳನ್ನು ಆಲಿಸಿದರು, ನರ್ಸಿಂಗ್ ಕಾಲೇಜಿಗೆ ಕೇವಲ 2 ಕೊಠಡಿ ಕೊಡಲಾಗಿದೆ, ಸೂಕ್ತ ಬೋಧಕರಿಂದ ಬೋಧನೆ ನಮಗೆ ದೊರೆಯುತ್ತಿಲ್ಲ, (Chitradurga) ಮೂಲಭೂತ ಸೌಕರ್ಯ ಸಿಗುತ್ತಿಲ್ಲ, ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಲಾಗುತ್ತಿದೆ ಎಂದು ದೂರಿದರು.
ಇದನ್ನೂ ಓದಿ: ಹೊಳಲ್ಕೆರೆ ನಗರದಲ್ಲಿ ನಾಳೆ ನೂತನ ಶ್ರೀ ಕುಕ್ವಾಡೇಶ್ವರಿ ದೇವಸ್ಥಾನಕ್ಕೆ ಭೂಮಿ ಪೂಜೆ | Shri Kukwadeshwari
ಈ ಬಗ್ಗೆ ಖುದ್ದಾಗಿ ಭೇಟಿ ನೀಡಿ ಸಮಸ್ಯೆ ಪರಿಹರಿಸುವುದಾಗಿ ಜಿಲ್ಲಾಧಿಕಾರಿಗಳು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.
![](https://nammajana.com/wp-content/uploads/2025/01/gifmaker_me-1.gif)