
Chitradurga news|nammajana.com|08-02-2025
ನಮ್ಮಜನ.ಕಾಂ, ಚಿತ್ರದುರ್ಗ: ಹೊಸದಾಗಿ 15 ಸಾವಿರ ಶಿಕ್ಷಕರ (Chitradurga) ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಚಿತ್ರದುರ್ಗದಲ್ಲಿ ತಿಳಿಸಿದರು.
ಚಿತ್ರದುರ್ಗದಲ್ಲಿ ನಡೆದ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿ ಶಿಕ್ಷಣ ಇಲಾಖೆಗೆ ಈಗಾಗಲೇ 13 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗಿದ್ದು, ಹೊಸದಾಗಿ 15 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು. ಇದರ ಜೊತೆಗೆ (Chitradurga) ಅನುದಾನಿತ ಶಾಲೆಗೆ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಚಾಲನೆ ದೊರೆಯಲಿದೆ.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಶಿಕ್ಷಕ ಹುದ್ದೆಗಳಲ್ಲಿ ಶೇ.80 ರಷ್ಟು ಶಿಕ್ಷಕರನ್ನು ಆದಷ್ಟು ಶೀಘ್ರ ನೇಮಕಾತಿ ಮಾಡಿ, ಶಿಕ್ಷಣವನ್ನು ಮೇಲ್ದರ್ಜೆಗೆ ಕೊಂಡ್ಯೊಯುವ ಕೆಲಸ ಮಾಡಲಾಗುವುದು ಎಂದು ತಿಳಿಸಿದ ಅವರು, ದ್ವಿತೀಯ ಪಿಯು ಪೂರೈಸಿದ ಮಕ್ಕಳು ನೀಟ್, ಸಿಇಟಿ ಪರೀಕ್ಷೆಗಾಗಿ ಕೋಚಿಂಗ್ ತರಗತಿಗಳಿಗೆ ಹೋಗಬೇಕಾಗುತ್ತದೆ. ಕೋಚಿಂಗ್‍ಗಾಗಿ ಸುಮಾರು 4 ರಿಂದ 5 ಲಕ್ಷದವರೆಗೆ ಶುಲ್ಕ (Chitradurga) ಪಾವತಿಸಬೇಕಾಗುತ್ತದೆ.
ಈ ಹಿನ್ನಲೆಯಲ್ಲಿ ದೇಶದಲ್ಲಿಯೇ ಪ್ರಥಮ ಬಾರಿಗೆ ನಮ್ಮ ರಾಜ್ಯದಲ್ಲಿ ಸುಮಾರು 25 ಸಾವಿರ ಮಕ್ಕಳಿಗೆ ನೀಟ್, ಸಿಇಟಿ ಸೇರಿದಂತೆ ವೃತ್ತಿಪರ ಕೋರ್ಸ್‍ಗಳಿಗೆ ಉಚಿತವಾಗಿ ತರಬೇತಿ ನೀಡುವ ಕಾರ್ಯಕ್ರಮವನ್ನು ಈಗಾಗಲೇ (Chitradurga) ಅನುಷ್ಠಾನಗೊಳಿಸಲಾಗಿದೆ ಎಂದು ಹೇಳಿದರು.
8, 9 ಹಾಗೂ 10ನೇ ತರಗತಿಯ ಮಕ್ಕಳಿಗೆ “ಸ್ಕಿಲ್ ಅಟ್ ಸ್ಕೂಲ್” ಎಂಬ ಕಾರ್ಯಕ್ರಮವನ್ನು ಇದೇ ಮೊದಲಬಾರಿಗೆ ಪ್ರಾರಂಭ ಮಾಡಲಾಗುವುದು. ಇದರಿಂದ ಕಲಿಕೆಯ ಜೊತೆಗೆ ಪ್ರಾಯೋಗಿಕ ಜ್ಞಾನ ಪಡೆಯಬಹುದಾಗಿದೆ.
ಇದನ್ನೂ ಓದಿ: ದಿನ ಭವಿಷ್ಯ | ಆರ್ಥಿಕ ಸ್ಥಿತಿ ಉತ್ತಮ, ಸ್ನೇಹಿತರಿಂದ ಬೆಂಬಲ | Dina Bhavishya
ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಸಂಗೀತ, ಕಲೆ ಶಿಕ್ಷಕರ ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದ್ದು, ಮೊದಲ ಹಂತದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ನೇಮಕ ಮಾಡಿ, ಮುಂದಿನ ದಿನಗಳಲ್ಲಿ ಆರ್ಥಿಕ ವ್ಯವಸ್ಥೆ ನೋಡಿಕೊಂಡು, ಉಳಿದ (Chitradurga) ಶಾಲೆಗಳಿಗೂ ನೇಮಕ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗುವುದು.
