Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಚಿತ್ರದುರ್ಗ ನಗರದಲ್ಲಿ ಹರ್ ಘರ್ ತಿರಂಗಾ ಬೈಕ್ ರ್ಯಾಲಿ | Chitradurga Har Ghar Tiranga
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಚಿತ್ರದುರ್ಗ ನಗರದಲ್ಲಿ ಹರ್ ಘರ್ ತಿರಂಗಾ ಬೈಕ್ ರ್ಯಾಲಿ | Chitradurga Har Ghar Tiranga
ಇಂದಿನ ಸುದ್ದಿ

ಚಿತ್ರದುರ್ಗ ನಗರದಲ್ಲಿ ಹರ್ ಘರ್ ತಿರಂಗಾ ಬೈಕ್ ರ್ಯಾಲಿ | Chitradurga Har Ghar Tiranga

Editor Nammajana
Last updated: 13 August 2024 11:57
By Editor Nammajana 2 Min Read
Share
SHARE

Chitradurga news|nammajana.com|13-8-2024

ನಮ್ಮಜನ.ಕಾಂ, ಚಿತ್ರದುರ್ಗ: 78ನೇ ಭಾರತ ಸ್ವಾತಂತ್ರ್ಯೋತ್ಸವದ ಅಂಗವಾಗಿ ಜಿಲ್ಲಾಡಳಿತ, ನಗರಸಭೆ ವತಿಯಿಂದ “ಹರ್ ಘರ್ ತಿರಂಗಾ” ಅಭಿಯಾನದಡಿ (Chitradurga Har Ghar Tiranga) ಚಿತ್ರದುರ್ಗ ನಗರದಲ್ಲಿ ಮಂಗಳವಾರ ಆಯೋಜಿಸಿದ್ದ ಹರ್ ಘರ್ ತಿರಂಗಾ ಬೈಕ್ ರ್ಯಾಲಿಗೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಚಾಲನೆ ನೀಡಿದರು.

ಹರ್ ಘರ್ ತಿರಂಗಾ ಪ್ರತಿ ಮನೆಯ ಮೇಲೆ ರಾಷ್ಟ್ರಧ್ವಜ ಹಾರಿಸಲು ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಚಿತ್ರದುರ್ಗ ನಗರದ ಹೊಳಲ್ಕೆರೆ ರಸ್ತೆಯ ಕನಕವೃತ್ತದಲ್ಲಿ (Chitradurga Har Ghar Tiranga) ರಾಷ್ಟ್ರಧ್ವಜದೊಂದಿಗೆ ಬೈಕ್ ರ್ಯಾಲಿಗೆ ಚಾಲನೆ ದೊರೆಯಿತು.

ಈ ವೇಳೆ ಮಾತನಾಡಿದ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಜನರ ಹೃದಯದಲ್ಲಿ ದೇಶಭಕ್ತಿಯ ಭಾವನೆ ಪ್ರೇರೇಪಿಸುವುದು, ಐಕ್ಯತೆ, ಭಾವೈಕ್ಯತೆ ಮತ್ತು ರಾಷ್ಟ್ರೀಯತೆಯನ್ನು ಮೈಗೂಡಿಸಿಕೊಳ್ಳಬೇಕು ಎಂಬ ನಿಟ್ಟಿನಲ್ಲಿ ಹರ್ ಘರ್ ತಿರಂಗಾ ಬೈಕ್ ರ್ಯಾಲಿ ಕಾರ್ಯಕ್ರಮ (Chitradurga Har Ghar Tiranga) ಅಯೋಜಿಸಿದ್ದು, ಪ್ರತಿಯೊಬ್ಬರಲ್ಲಿಯೂ ಭಾರತ ಸ್ವಾತಂತ್ರ್ಯದ ಹಣತೆಯ ದೀಪ ಹಚ್ಚುವಂತಹ ಕಾರ್ಯ ಆಗಬೇಕಿದೆ ಎಂದು ಹೇಳಿದರು.

ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ಮಾತನಾಡಿ, ಭಾರತ ಸ್ವಾತಂತ್ರೋತ್ಸವದ ಅಂಗವಾಗಿ “ಹರ್ ಘರ್ ತಿರಂಗಾ” ಅಭಿಯಾನವನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಬೈಕ್ ರ್ಯಾಲಿ, ದೇಶಭಕ್ತಿ ಗೀತೆಗಳ ಗಾಯನ ಸೇರಿದಂತೆ ವಿವಿಧ (Chitradurga Har Ghar Tiranga) ರೀತಿಯ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದ್ದು, ಆ.13 ರಿಂದ 15 ರವರೆಗೆ ಮೂರು ದಿನಗಳ ಕಾಲ ಪ್ರತಿಯೊಬ್ಬರು ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸುವ ಮೂಲಕ ರಾಷ್ಟ್ರಪ್ರೇಮ ಮೆರೆಯಬೇಕು ಎಂದರು.

ಚಿತ್ರದುರ್ಗ ನಗರದ ತರಾಸು ರಂಗಮಂದಿರದ ಆವರಣದಲ್ಲಿರುವ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕಚೇರಿ, ಅಂಚೆ ಕಚೇರಿ ಹಾಗೂ ರೈಲ್ವೆ ನಿಲ್ದಾಣಗಳಲ್ಲಿಯೂ ರಾಷ್ಟ್ರಧ್ವಜ ಲಭ್ಯವಿದ್ದು, ಪ್ರತಿ ಧ್ವಜಕ್ಕೆ ರೂ.26 ದರ ನಿಗದಿಪಡಿಸಲಾಗಿದೆ. ಎಂದು ತಿಳಿಸಿದ ಅವರು, ಹರ್ ಘರ್ ತಿರಂಗಾ ಅಭಿಯಾನದ (Chitradurga Har Ghar Tiranga) ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಚಿತ್ರದುರ್ಗ ನಗರದ ಹೊಳಲ್ಕೆರೆ ರಸ್ತೆಯ ಕನಕವೃತ್ತದಿಂದ ಆರಂಭವಾದ ಹರ್ ಘರ್ ತಿರಂಗಾ ಬೈಕ್ ರ್ಯಾಲಿಯು (Chitradurga Har Ghar Tiranga) ಸಂಗೊಳ್ಳಿ ರಾಯಣ್ಣ ವೃತ್ತ, ಗಾಂಧಿವೃತ್ತ, ಎಸ್‍ಬಿಐ ವೃತ್ತ, ಪ್ರವಾಸಿ ಮಂದಿರ ಮಾರ್ಗವಾಗಿ ಅಂಬೇಡ್ಕರ್ ವೃತ್ತ, ಮದಕರಿ ವೃತ್ತದ ಮೂಲಕ ಚಳ್ಳಕೆರೆ ಗೇಟ್ ತಲುಪಿ ನಂತರ ಪುನಃ ನಗರಸಭೆಗೆ ಆಗಮಿಸಿ ರ್ಯಾಲಿ ಕೊನೆಗೊಂಡಿತು.

ಇದನ್ನೂ ಓದಿ: VV Sagara water level: ವಿವಿ ಸಾಗರ ಜಲಾಶಯದ ಆಗಸ್ಟ್ 13 ರ ನೀರಿನ ಮಟ್ಟ

ಈ ಸಂದರ್ಭದಲ್ಲಿ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಸುಚೇತಾ ನೆಲವಿಗಿ, (Chitradurga Har Ghar Tiranga) ನಗರಸಭೆ ಸದಸ್ಯರಾದ ಸುರೇಶ್, ಶಶಿಧರ್, ನಗರಸಭೆ ವ್ಯವಸ್ಥಾಪಕಿ ಮಂಜುಳಾ, ನೌಕರರ ಸಂಘದ ಅಧ್ಯಕ್ಷೆ ರೇಣುಕಾ, ಗುತ್ತಿಗೆದಾರ ಸಂಘದ ಅಧ್ಯಕ್ಷ ಸಿದ್ದಪ್ಪ ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಕ್ರೀಡಾಪಟುಗಳು, ಸಾರ್ವಜನಿಕರು ಇದ್ದರು.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:ChitradurgaChitradurga NewsCity CouncilDistrict AdministrationHar Ghar TirangaIndependence DayKannada Newskannada suddiNammajana.comNational Flagಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜಿಲ್ಲಾಡಳಿತನಗರಸಭೆನಮ್ಮಜನ.ಕಾಂರಾಷ್ಟ್ರಧ್ವಜಸ್ವಾತಂತ್ರ್ಯ ದಿನಾಚರಣೆಹರ್ ಘರ್ ತಿರಂಗಾ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article VV Sagara water level: ವಿವಿ ಸಾಗರ ಜಲಾಶಯದ ಆಗಸ್ಟ್ 13 ರ ನೀರಿನ ಮಟ್ಟ
Next Article ಜಿಟಿಟಿಸಿ ಪ್ರವೇಶಾತಿ: ಅವಧಿ ವಿಸ್ತರಣೆ | GTTC Chitradurga
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?