
Chitradurga news|nammajana.com|13-03-2025
ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೆದ್ದಾರಿಗಳ ‘ಅಭಿವೃದ್ಧಿಗೆ ಸಂಬಂಧಿಸಿದಂತೆ ನಾನಾ ಬೇಡಿಕೆ ಈಡೇರಿಸುವಂತೆ ಹೆದ್ದಾರಿ ಸಚಿವಾಲಯಕ್ಕೆ ಮನವಿ ಸಲ್ಲಿಸಲಾಗಿದ್ದು ಈ ಎಲ್ಲ ಬೇಡಿಕೆಗಳನ್ನು ಪರಿಗಣಿಸಿ ಪ್ರಥಮ (Chitradurga Highways) ಆದ್ಯತೆಯ ಮೇಲೆ ಈಡೇರಿಸುವಂತೆ ಸಂಸದ ಗೋವಿಂದ ಎಂ.ಕಾರಜೋಳ ಅವರು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಬುಧವಾರ ದೆಹಲಿಯ ಕಚೇರಿಯಲ್ಲಿ ಭೇಟಿ ಮಾಡಿ ಮನವಿ ಮಾಡಿದರು.
ಹಿರಿಯೂರು ಬಳಿ ರಾಷ್ಟ್ರೀಯ ಹೆದ್ದಾರಿ 48 ಹಾಗೂ ರಾಷ್ಟ್ರೀಯ ಹೆದ್ದಾರಿ 150ಎ ಈ ಎರಡೂ ಹೆದ್ದಾರಿಗಳು ಸಂಧಿಸುವ ಜಾಗದಲ್ಲಿ ಕ್ಲೋವರ್ ಲೀಫ್ ಜಂಕ್ಷನ್ ನಿರ್ಮಾಣ ಮಾಡುವುದು, ಚಳ್ಳಕೆರೆ ನಗರ ಪರಿಮಿತಿಯಲ್ಲಿ ರಾಷ್ಟ್ರೀಯ ಹೆದ್ದಾರಿ 150ಎ ಅನ್ನು ಒನ್ ಟೈಮ್ ಇಂಪ್ಯೂವ್‌ಮೆಂಟ್ ಯೋಜನೆಯಡಿ ಅಭಿವೃದ್ಧಿಪಡಿಸುವುದು.

ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿ 48ರಿಂದ ಚಳ್ಳಕೆರೆ-ಪಾವಗಡ-ಪುಟ್ಟಪರ್ತಿ-ರಾ ಷ್ಟ್ರೀಯ ಹೆದ್ದಾರಿ-342 ಬುಕ್ಕಪಟ್ಟಣಂವರೆಗೆ ಇರುವ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸುವುದು, ಮೂಡಿಗೆರೆಯಿಂದ-ಚಿಕ್ಕಮ ಗಳೂರು-ಕಡೂರು-ಹೊಸದುರ್ಗ ಹೊಳಲ್ಕೆರೆ ಹತ್ತಿರ ರಾಷ್ಟ್ರೀಯ ಹೆದ್ದಾರಿ 369ರವರೆಗೆ ಈಗಾಗಲೇ ಘೋಷಣೆಯಾಗಿರುವ ರಾಷ್ಟ್ರೀಯ ಹೆದ್ದಾರಿಯನ್ನು ಚಿತ್ರದುರ್ಗ ಲೋಕಸಭಾ ಕ್ಷೇತ್ರ (Chitradurga Highways) ವ್ಯಾಪ್ತಿಯಲ್ಲಿ ಹೆದ್ದಾರಿಗಳ ಅಭಿವೃದ್ಧಿಗೆ ಸಂಬಂಧಿ ಸಿದಂತೆ ನಾನಾ ಬೇಡಿಕೆ ಈಡೇರಿಸುವಂತೆ ಸಂಸದ ಗೋವಿಂದ ಎಂ. ಕಾರಜೋಳ ಅವರು, ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಬುಧವಾರ ದೆಹಲಿಯ ಕಚೇರಿಯಲ್ಲಿ ಭೇಟಿ ಮಾಡಿ ಮನವಿ ಮಾಡಿದರು.
ಇದನ್ನೂ ಓದಿ: Dina Bhavishya | ದಿನ ಭವಿಷ್ಯ, ಪ್ರೇಮಿಗಳ ಜೀವನದಲ್ಲಿ ಹೊಸ ತಿರುವು
ದಾವಣಗೆರೆ ಜಿಲ್ಲೆ ಆನಗೋಡುವರೆಗೆ ವಿಸ್ತರಣೆ ಮಾಡಿ ಘೋಷಣೆ ಮಾಡುವುದು, ಸಿರಾ ಪಟ್ಟಣ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ 48ನ್ನು ಒನ್ ಟೈಮ್ ಇಂಪ್ಯೂವ್ ಮೆಂಟ್ ಯೋಜನೆಯಡಿ ಅಭಿವೃದ್ಧಿಪಡಿಸುವುದು, ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಹಿರಿಯೂರು ಹತ್ತಿರ ಆದಿವಾಲ-ಪಟ್ರೆಹಳ್ಳಿ ಬಳಿ ಕೆಳಸೇತುವೆ ನಿರ್ಮಾಣ, ಸಿರಾ ತಾಲೂಕು ಚಿಕ್ಕನಹಳ್ಳಿ (Chitradurga Highways) ಬಳಿಯಿರುವ ಕೆಳಸೇತುವೆಯಲ್ಲಿರುವ ನ್ಯೂನ್ಯತೆಗಳನ್ನು ಸರಿಪಡಿಸುವುದು ಇನ್ನಿತರೆ ಯೋಜನೆಗಳನ್ನು ಪ್ರಥಮ ಆದ್ಯತೆ ಮೇಲೆ ಪರಿಗಣಿಸುವಂತೆ ಮನವಿ ಮಾಡಿಕೊಂಡರು. ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರು ಸಕಾರಾತ್ಮಕವಾಗಿ ಸ್ಪಂದಿಸಿ ಸಂಸದರಿಗೆ ಭರವಸೆ ನೀಡಿದ್ದಾರೆ.
