Chitradurga news|nammajana.com|15-9-2024
ನಮ್ಮಜನ.ಕಾಂ, ಚಿತ್ರದುರ್ಗ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆಯಲ್ಲಿ ಭಾನುವಾರ ಜಿಲ್ಲೆಯಲ್ಲಿ ದಾಖಲೆಯ 145 ಕಿ.ಮೀ. ಉದ್ದದ ಮಾನವ ಸರಪಳಿ ಯಶಸ್ವಿಯಾಗಿ (Chitradurga) ನಿರ್ಮಿಸಿರುವುದಕ್ಕೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹರ್ಷ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ ವಿದ್ಯಾರ್ಥಿಗಳು, ಶಿಕ್ಷಕರು, ಸ್ವ-ಸಹಾಯ ಸಂಘಗಳ ಸದಸ್ಯರು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಸರ್ಕಾರಿ ನೌಕರರು, ವಿವಿಧ ಶಾಲಾ ಕಾಲೇಜು ಶಿಕ್ಷಣ ಸಂಸ್ಥೆಗಳು, ಸರ್ಕಾರೇತರ ಸಂಘ ಸಂಸ್ಥೆಗಳು, ವಿವಿಧ ಸಂಘಟನೆಗಳ ಸದಸ್ಯರು ಸಾವಿರಾರು (Chitradurga) ಸಂಖ್ಯೆಯಲ್ಲಿ ಭಾಗವಹಿಸಿ ಸಂಭ್ರಮದಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಈ ಮೂಲಕ ಪ್ರಜಾಪ್ರಭುತ್ವದ ಮಹತ್ವವನ್ನು ಜಗತ್ತಿಗೆ ಸಾರಲಾಗಿದೆ.

ಜನಪ್ರತಿನಿಧಿಗಳು ಕಾರ್ಯಕ್ರಮದ ಯಶಸ್ವಿಗೆ ಸಹಕರಿದ್ದಾರೆ. ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯಕ್ರಮ ರೂಪಿಸಿದ್ದಾರೆ.
ಇದನ್ನೂ ಓದಿ: ಹೈಟೆಕ್ ಆಸ್ಪತ್ರೆ ನಿರ್ಮಾಣಕ್ಕೆ ಎರಡು ಎಕರೆ ಭೂಮಿಗೆ ಪ್ರಸ್ತಾವನೆ | Hospital
ಪೊಲೀಸ್ ಇಲಾಖೆ ಸೂಕ್ತ ರಕ್ಷಣೆ ಹಾಗೂ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಿದೆ. ಶಿಕ್ಷಣ, ಆರೋಗ್ಯ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಸಾರಿಗೆ ಇಲಾಖೆ ಸೇರಿದಂತೆ, ಕಾರ್ಯಕ್ರಮ ವರದಿಯನ್ನು ಎಲ್ಲಡೆ ವ್ಯಾಪಕವಾಗಿ ಬಿತ್ತರಿಸಿದ ಮಾಧ್ಯಮ (Chitradurga) ಮಿತ್ರರಿಗೂ ವೈಯಕ್ತಿಕವಾಗಿ ಧನ್ಯವಾದ ತಿಳಿಸುವುದಾಗಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252