Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Chitradurga Lok Sabha: ಮಧ್ಯಾಹ್ನ 12 ಕ್ಕೆ ಲೋಕ ಕದನ ಫಲಿತಾಂಶ, ಎಷ್ಟು ಸುತ್ತಿನಲ್ಲಿ ಮತ ಎಣಿಕೆ ಸಂಪೂರ್ಣ ಮಾಹಿತಿ ಇಲ್ಲಿದೆ.
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Chitradurga Lok Sabha: ಮಧ್ಯಾಹ್ನ 12 ಕ್ಕೆ ಲೋಕ ಕದನ ಫಲಿತಾಂಶ, ಎಷ್ಟು ಸುತ್ತಿನಲ್ಲಿ ಮತ ಎಣಿಕೆ ಸಂಪೂರ್ಣ ಮಾಹಿತಿ ಇಲ್ಲಿದೆ.
ಇಂದಿನ ಸುದ್ದಿ

Chitradurga Lok Sabha: ಮಧ್ಯಾಹ್ನ 12 ಕ್ಕೆ ಲೋಕ ಕದನ ಫಲಿತಾಂಶ, ಎಷ್ಟು ಸುತ್ತಿನಲ್ಲಿ ಮತ ಎಣಿಕೆ ಸಂಪೂರ್ಣ ಮಾಹಿತಿ ಇಲ್ಲಿದೆ.

Editor Nammajana
Last updated: 1 June 2024 05:50
By Editor Nammajana 3 Min Read
Share
SHARE

Chitradurga news |nammajana.com |1-6-2024

ನಮ್ಮಜನ.ಕಾಂ, ಚಿತ್ರದುರ್ಗ: ಏಪ್ರಿಲ್ 26ರಂದು ನಡೆದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ (Chitradurga Lok Sabha) ಚುನಾವಣೆಯ ಮತ ಎಣಿಕೆಯು ಜೂನ್ 4ರಂದು ಬೆಳಿಗ್ಗೆ 7 ರಿಂದ ಸರ್ಕಾರಿ ವಿಜ್ಞಾನ ಕಾಲೇಜಿನ ನೂತನ ಕಟ್ಟಡದಲ್ಲಿ ನಡೆಯಲಿದ್ದು, ಈ ಮತ ಎಣಿಕೆ ಕಾರ್ಯ ಸುಗಮವಾಗಿ ನಡೆಯಲು ಅಗತ್ಯ ಸಿದ್ಧತೆ ಗಳನ್ನುಕೈಗೊಳ್ಳಲಾಗಿದೆ. ಮಧ್ಯಾಹ್ನ 12ಗಂಟೆಯೊಳಗೆ ಫಲಿತಾಂಶ ಪ್ರಕಟ ವಾಗುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಟಿ. ವೆಂಕಟೇಶ್ ಅವರು ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಮತ ಎಣಿಕೆ ಸಿದ್ಧತೆಗಳ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, 20 ಅಭ್ಯರ್ಥಿಗಳು ಕಣದಲ್ಲಿರುವುದರಿಂದ 2 ಇವಿಎಂ ಯಂತ್ರಗಳಿವೆ. ಹಾಗಾಗಿ ಫಲಿತಾಂಶ ಪ್ರಕಟವಾಗಲು ತುಸು ತಡವಾಗಲಿದೆ. ಅಂಚೆ ಮತ ಪತ್ರಗಳ ಎಣಿಕೆ ನಂತರವೇ ಇವಿಎಂ ಯಂತ್ರಗಳ ಕೈಗೆತ್ತಿಕೊಳ್ಳಲಾಗುವುದು ಎಂದರು. ಇದೇ ಮೊದಲ ಬಾರಿಗೆ ಮತಯಂತ್ರಗಳ ದಾಸ್ತಾನು ಮಾಡಿರುವ ಕಟ್ಟಡದ ಮೇಲುಸ್ತುವಾರಿ ಗಾಗಿ ಓರ್ವ ಪತ್ರಾಂಕಿತ ಹುದ್ದೆಯ ಅಧಿಕಾರಿಯನ್ನು ದಿನದ 24 ಗಂಟೆಯ ಅವಧಿಗೆ ನಿಯೋಜಿಸಲಾಗಿದೆ.

ಜಿಲ್ಲಾಪೊಲೀಸ್‌ವರಿಷ್ಠಾಧಿಕಾರಿಗಳೊಂದಿಗೆನಿತ್ಯವೂ ತಾವು ಖುದ್ದಾಗಿ ಭೇಟಿ ನೀಡಿ ಭದ್ರತಾ ಕೊಠಡಿಗಳನ್ನು ಪರಿಶೀಲಿಸಲಾಗುತ್ತಿದೆ. ಉಮೇದುವಾರ ರಲ್ಲದೇ ರಾಜಕೀಯ ಪಕ್ಷಗಳ ಪ್ರತಿನಿಧಿಗಳೂ ಕೂಡ ಭದ್ರತಾ ಕೊಠಡಿಯನ್ನು ಭೇಟಿ ನೀಡಲು ಅವಕಾಶ ನೀಡಲಾಗಿದೆ ಎಂದರು.

ಪ್ರತಿ ವಿಧಾನಸಭಾ ಕ್ಷೇತ್ರ ಪ್ರತ್ಯೋಕ ಮತ ಏಣಿಕೆ

ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಪ್ರತ್ಯೇಕ ಮತ ಎಣಿಕೆ ನಡೆಯಲಿದೆ. ಸುಮಾರು 125 ಮಂದಿ ಏಜೆಂಟರನ್ನು ನೇಮಿಸಿಕೊಳ್ಳಲು ಸೂಚಿಸಲಾಗಿದೆ. ಪ್ರತಿವಿಧಾನಸಭಾ ಕ್ಷೇತ್ರಕ್ಕೆ 14 ಟೇಬಲ್ ಹಾಗೂ ಅಂಚೆ ಮತಪತ್ರಗಳ ಎಣಿಕೆಗೆ ಒಟ್ಟು 12 ಟೇಬಲ್‌ಗಳನ್ನು ನಿಗದಿಪಡಿಸಲಾಗಿದೆ. ಅಂದು ಬೆಳಿಗ್ಗೆ 7.30ಕ್ಕೆ ಭದ್ರತಾ ಕೊಠಡಿಗಳನ್ನು ಏಕಕಾಲಕ್ಕೆ ತೆರೆದು ಬೆಳಿಗ್ಗೆ ಅಂಚೆ ಮತ ಎಣಿಕೆ ಮತ್ತು ವಿದ್ಯುನ್ಮಾನ ಮತಯಂತ್ರಗಳ ಎಣಿಕೆಯನ್ನು ಆರಂಭಿಸಲಾಗುವುದು.

ಯಾವ ತಾಲೂಕು ಎಲ್ಲಿ ಮತಎಣಿಕೆ

ನೆಲಮಹಡಿಯಲ್ಲಿ ಚಳ್ಳಕೆರೆ, ಹೊಸದುರ್ಗ ಮತ್ತು ಪಾವಗಡ ವಿಧಾನ ಸಭಾ ಕ್ಷೇತ್ರಗಳ ಎಣಿಕೆ, ಮೊದಲ ಮಹಡಿಯಲ್ಲಿ ಮೊಳಕಾಲ್ಕೂರು, ಹಿರಿಯೂರು ಮತ್ತು ಶಿರಾ ತಾಲೂಕುಗಳ ಮತಎಣಿಕೆ ಹಾಗೂ ಎರಡನೇ ಮಹಡಿಯಲ್ಲಿ ಚಿತ್ರದುರ್ಗ ಮತ್ತು ಹೊಳಲ್ಕೆರೆ ವಿಧಾನಸಭಾ ಕ್ಷೇತ್ರಗಳ ಮತಎಣಿಕೆ ಕಾರ್ಯ ನಡೆಯಲಿದೆ ಎಂದರು.

ಇದನ್ನೂ ಓದಿ: Dina Bhavishya: ಇಂದಿನ ರಾಶಿ ಫಲ 1-6-2024

ಮೊಳಕಾಲ್ಲೂರು ವಿಧಾನಸಭಾ ಕ್ಷೇತ್ರದ 285 ಮತಗಟ್ಟೆಗಳ ಎಣಿಕೆಯು 21ಸುತ್ತುಗಳಲ್ಲಿ, ಚಳ್ಳಕೆರೆ ವಿಧಾನಸಭಾ ಕ್ಷೇತ್ರದ 260ಮತಗಟ್ಟೆಗಳ ಎಣಿಕೆಯು 19 ಸುತ್ತುಗಳಲ್ಲಿ, ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ 288 ಮತಗಟ್ಟೆಗಳ ಎಣಿಕೆಯು 21ಸುತ್ತುಗಳಲ್ಲಿ, ಹಿರಿಯೂರುವಿಧಾನಸಭಾಕ್ಷೇತ್ರದ287 ಮತಗಟ್ಟೆಗಳ ಎಣಿಕೆ 21 ಸುತ್ತುಗಳಲ್ಲಿ, ಹೊಸದುರ್ಗ ವಿಧಾನಸಭಾ ಕ್ಷೇತ್ರದ 242 ಮತಗಟ್ಟೆಗಳ ಎಣಿಕೆ 18ಸುತ್ತುಗಳಲ್ಲಿ, ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ 299 ಮತಗಟ್ಟೆಗಳ ಎಣಿಕೆಯು 22 ಸುತ್ತುಗಳಲ್ಲಿ, ಶಿರಾ ವಿಧಾನಸಭಾ ಕ್ಷೇತ್ರ ದ 267 ಮತಗಟ್ಟೆಗಳ ಎಣಿಕೆಯು 20 ಸುತ್ತುಗಳಲ್ಲಿ ಹಾಗೂ ಪಾವಗಡ ವಿಧಾನಸಭಾ ಕ್ಷೇತ್ರದ 240 ಮತಗಟ್ಟೆಗಳ ಎಣಿಕೆಯು 18 ಸುತ್ತುಗಳಲ್ಲಿ ಪೂರ್ಣಗೊಳ್ಳಲಿದೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ‌ರ್ ಕುಮಾರ್‌ಮೀನಾ ಮಾತನಾಡಿ ಲೋಕಸಭಾ ಕ್ಷೇತ್ರದ (Chitradurga Lok Sabha) ಮತಎಣಿಕೆಕಾರ್ಯಕ್ಕೆ ಭದ್ರತೆ ಒದಗಿಸಲು ಒಟ್ಟಾರೆ 1800 ಸಿಬ್ಬಂದಿ ನಿಯೋಜಿಸಲಾಗಿದೆ. ಇಬ್ಬರು ಎಎಸ್ಪಿ, ಡಿಎಸ್ಪಿ, 18 ಮಂದಿ ಸಿಪಿಐ, 51 ಸ ಸಿಪಿಐ, 833 ಮಂದಿ ಎಎಸ್ ಐ ಸೇರಿದಂತೆ ಪೋಲೀಸ್ ಪೇದೆಗಳು ಕಾರ್ಯನಿರ್ವಹಿಸುವರು ಎಂದರು. ಮತ ಎಣಿಕೆ ದಿನದಂದು ಪ್ರಮುಖ ರಾಜಕೀಯ ಪಕ್ಷಗಳ ಏಣಿಕೆ ಮನೆಗಳಿಗೂ ಭದ್ರತೆ ಒದಗಿಸಲಾಗುತ್ತಿದೆ ಎಂದರು.

ಜಿಲ್ಲಾಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪ ವಿಭಾಗಾಧಿಕಾರಿ ಕಾರ್ತಿಕ್ ಉಪಸ್ಥಿತರಿದ್ದರು.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ

Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ

TAGGED:Chitradurga Lok Sabha Election 2024DCLok Sabha ConstituencyLok Sabha Election 2024Lok Sabha Election 2024 Lokfight 2024Loka Sabha ElectionsLokfightLokfight 2024preparetionಚಿತ್ರದುರ್ಗ ಲೋಕಸಭಾ ಚುನಾವಣೆ 2024ಜಿಲ್ಲಾಧಿಕಾರಿಮತ ಎಣಿಕೆಲೋಕಫೈಟ್ಲೋಕಫೈಟ್ 2024ಲೋಕಸಭಾ ಚುನಾವಣೆಲೋಕಸಭಾ ಚುನಾವಣೆ 2024ಸಿದ್ದತೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article CHITRADURGA WEATHER: ಚಿತ್ರದುರ್ಗದಲ್ಲಿ ಇಂದು ಬಿಸಿಲು ಧಗೆ ಹೆಚ್ಚು, ಎಷ್ಟಿರುತ್ತೆ ಇಂದಿನ ತಾಪಮಾನ ಇಲ್ಲಿದೆ ಇಡೀ ದಿನದ ವರದಿ
Next Article Challakere accident news: ಲಾರಿಗೆ ಲೈಲೆಂಡ್ ಮಿನಿ ಟ್ರಕ್ ಡಿಕ್ಕಿ, ಇಬ್ಬರ ಸ್ಥಳದಲೇ ಸಾವು
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ
ದಿನ ಭವಿಷ್ಯ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?