Chitradurga news |nammajana.com|13-9-2024
ನಮ್ಮಜನ.ಕಾ, ಚಿತ್ರದುರ್ಗ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆಯಲ್ಲಿ ಸೆ.15 ರಂದು ಮೊಳಕಾಲ್ಮೂರು, ಚಳ್ಳಕೆರೆ ಹಾಗೂ ಹಿರಿಯೂರು (Chitradurga) ಮಾರ್ಗದಲ್ಲಿ ಸು.140 ಕಿ.ಮೀ ಮಾನವ ಸರಪಳಿ ನಿರ್ಮಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಸ್ವ-ಸಹಾಯ ಸಂಘಗಳ ಸದಸ್ಯರು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ.

ಮಾನವ ಸರಪಳಿ ರಚನೆಯನ್ನು ಮೊಳಕಾಲ್ಮೂರು ತಾಲ್ಲೂಕಿನ ತಮ್ಮೇನಹಳ್ಳಿ ಗೇಟ್‌ನಿಂದ, ಹಿರಿಯೂರು ನಗರದ (Chitradurga) ಟಿ.ಬಿ.ವೃತ್ತದವರಗೆ ಹಾದು ಹೊಗಿರುವ ರಾಷ್ಟ್ರೀಯ ಹೆದ್ದಾರಿ 150(ಎ) ಹಾಗೂ ಹಿರಿಯೂರು ನಗರದ ಟಿ.ಬಿ ವೃತ್ತದಿಂದ ಜೆ.ಜೆ.ಹಳ್ಳಿ ಬಾರ್ಡರ್ ವರೆಗೆ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 48 ರಸ್ತೆಗಳ ಎಡಭಾಗದಲ್ಲಿ ನಿರ್ಮಾಣ ಮಾಡಲಾಗುವುದು.
ಇದನ್ನೂ ಓದಿ: ಕಡಿಮೆ ಬಡ್ಡಿಗೆ ಸಾಲ ಸೌಲಭ್ಯ | ನೀವು ಯಾವ ಕಾರ್ಡ್ ಮಾಡಿಸಬೇಕು ಗೊತ್ತೆ? | Kisan Credit Card
ಈ ಕಾರಣದಿಂದ ಸಾರ್ವಜನಿಕರ ಸುರಕ್ಷತೆ, ವಾಹನ ಸುಗಮ ಸಂಚಾರದ ದೃಷ್ಠಿಯಿಂದ ಮೊಳಕಾಲ್ಮೂರು, ಚಳ್ಳಕೆರೆ ಹಾಗೂ ಹಿರಿಯೂರು ಮಾರ್ಗದ ಮೂಲಕ ಹಾದು ಹೋಗಿರುವ (Chitradurga) ರಾಷ್ಟೀಯ ಹೆದ್ದಾರಿಗಳಲ್ಲಿ ಸೆ.15 ರಂದು ಬೆಳಿಗ್ಗೆ 7 ಗಂಟೆಯಿಂದ ಮಧ್ಯಾಹ್ನ 12 ಗಂಟೆಗಯವರೆಗೆ ಎಡ ಭಾಗದಲ್ಲಿ ಎಲ್ಲಾ ರೀತಿಯ ವಾಹನ ಸಂಚಾರವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಆದೇಶಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252