Chitradurga news|nammajana.com|3-7-2024
ನಮ್ಮಜನ.ಕಾಂ, ಚಿತ್ರದುರ್ಗ: ರಾಜ್ಯ ಆಡಳಿತ ಸುಧಾರಣೆಗಾಗಿ, ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಲಗೊಳಿಸುವ ಉದ್ದೇಶದಿಂದ ಪೊಲೀಸ್ ಇಲಾಖೆಯಲ್ಲಿ ರಾಜ್ಯ ಸರ್ಕಾರ (chitradurga) ವರ್ಗಾವಣೆಯ ಸರ್ಜರಿ ಮಾಡಿದೆ. ರಾಜ್ಯದಲ್ಲಿ 25 ಐಪಿಎಸ್ ಆಫೀಸರ್ಗಳ ವರ್ಗಾವಣೆಯನ್ನು ಮಾಡಲಾಗಿದೆ.
ಪೊಲೀಸ್ ಇಲಾಖೆಯಲ್ಲಿ ಪ್ರಮುಖ ಹುದ್ದೆಯನ್ನು ಅಲಂಕರಿಸಿದವರನ್ನು ಬೇರೆಡೆಗೆ ವರ್ಗಾವಣೆ ಮಾಡಿ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ.

ವರ್ಗಾವಣೆಗೊಂಡ ಪೊಲೀಸ್ ಅಧಿಕಾರಿಗಳು ಒಂದು ವಾರದಲ್ಲಿ ನೂತನ ಜವಾಬ್ದಾರಿಯನ್ನು ಹೊರಲಿದ್ದಾರೆ. ಈ ಹಿನ್ನಲೆಯಲ್ಲಿ ಮೈಸೂರಿನಲ್ಲಿ ಕೆಲಸ ಮಾಡುತ್ತಿದ್ದ ಚಿತ್ರದುರ್ಗ (chitradurga) ತಾಲ್ಲೂಕು ಬೊಮ್ಮೆನಹಳ್ಳಿ ಮೂಲದ ಡಾ.ಕವಿತಾ ಬಿ.ಟಿ. ಇವರನ್ನು ಚಾಮರಾಜನಗರ ಜಿಲ್ಲೆಯ ರಕ್ಷಣಾಧಿಕಾರಿಗಳಾಗಿ ವರ್ಗಾವಣೆ ಮಾಡಲಾಗಿದೆ.
ಇದನ್ನೂ ಓದಿ: ಬೈಕ್ ಅಪಘಾತ | ಇಬ್ಬರ ಸಾವು | Bike accident two dead
ಚಾಮರಾಜ ನಗರಕ್ಕೆ ನೂತನ ರಕ್ಷಣಾಧಿಕಾರಿಗಳಾಗಿ (chitradurga) ನೇಮಕವಾಗಿರುವ ಡಾ.ಬಿ.ಟಿ.ಕವಿತಾರವರಿಗೆ ಶ್ರೀ ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಮಾದಾರ ಚನ್ನಯ್ಯ ಶ್ರೀಗಳು, ಮಾಜಿ ಸಚಿವರಾದ ಹೆಚ್.ಅಂಜನೇಯ, ಮಾಜಿ ಸಂಸದರಾದ ಬಿ.ಎನ್.ಚಂದ್ರಪ್ಪ, ಆದಿ ಜಾಂಬವ ನಿಗಮದ ಅಧ್ಯಕ್ಷರಾದ ಜಿ.ಎಸ್.ಮಂಜುನಾಥ್ ಹಾಗೂ ಆದಿ ಜಾಂಬವ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಬಿ.ಟಿ.ಮಂಜುನಾಥ್ ಅಭಿನಂದಿಸಿ, ಶುಭ ಕೋರಿ ತಮ್ಮ ಆಧಿಕಾರವಧಿಯಲ್ಲಿ ಉತ್ತಮವಾದ ಕೆಲಸವನ್ನು ಮಾಡಲಿ ಕಾನೂನು ಸುವ್ಯವಸ್ಥೆಯನ್ನು ಸರಿಯಾದ ರೀತಿಯಲ್ಲಿ ಕಾಪಾಡಿ, ನೊಂದ ಜನರಿಗೆ ನ್ಯಾಯವನ್ನು ಒದಗಿಸಲಿ ಎಂದು ಹಾರೈಸಿದ್ದಾರೆ
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252