Chitradurga news|nammajana.com|18-6-2024
ನಮ್ಮಜನ.ಕಾಂ, ಚಿತ್ರದುರ್ಗ: ಅಮಾನವೀಯ ಕೃತ್ಯ ನಡೆದಿದ್ದು, ನಾಗರಿಕ ಸಮಾಜದ ಯಾರೂ ಬೆಂಬಲಿಸಲು ಸಾಧ್ಯವಿಲ್ಲ. ಪ್ರತಿಯೊಬ್ಬರು ಖಂಡಿಸುವ ದುರ್ಘಟನೆ (chitradurga Today latest news) ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಕ್ರೋಶ ಹೊರಹಾಕಿದರು.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ ಇಷ್ಟೊಂದು ಸುಲಭವಾಗಿ ಬರ್ಬರವಾಗಿ ಹತ್ಯೆಗೈದಿರುವುದು ರಾಜ್ಯವಷ್ಟೇ ಅಲ್ಲ, ದೇಶವೇ ಖಂಡಿಸುವಂತದ್ದು ಎಂದರು.

ರೇಣುಕಸ್ವಾಮಿ ತಂದೆ-ತಾಯಿಯನ್ನು ನೋಡಿದರೆ, ಅತೀ ದುಃಖ ಆಗುತ್ತದೆ. ಯಾವ ರೀತಿ ಧೈರ್ಯ, ಸಾಂತ್ವನ ಹೇಳಬೇಕು ಎಂಬುದು ಗೊತ್ತಾಗುತ್ತಿಲ್ಲ ಎಂದರು.
ಮೃತರ ಪತ್ನಿ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದು, ಸರ್ಕಾರಿ (chitradurga Today latest news) ನೌಕರಿ, ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವ ಮೂಲಕ ರಾಜ್ಯ ಸರ್ಕಾರ ಧೈರ್ಯ ತುಂಬುವ ಕೆಲಸಕ್ಕೆ ಮುಂದಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಜಿ.ಪರಮೇಶ್ವರ್ ಅವರಿಗೆ ಒತ್ತಾಯಿಸಿದರು.
ಇದನ್ನೂ ಓದಿ: Renukaswamy case: ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಕೊಡಿಸುತ್ತೇವೆ: ಜಿ.ಪರಮೇಶ್ವರ್
ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳಿರುವುದು ಜಗಜ್ಜಾಹೀರವಾಗಿದೆ. ಹೆಚ್ಚಿನ ತನಿಖೆ ಮೂಲಕ ತಪ್ಪಿತಸ್ಥರಿಗೆ, ಕೊಲೆಗಡುಕರಿಗೆ (chitradurga Today latest news) ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.
ಇಡೀ ದೇಶದಲ್ಲೇ ಹೆಚ್ಚಿನ ಚರ್ಚೆ ನಡೆಯುತ್ತಿದೆ. ಇದರಲ್ಲಿ ರಾಜಕೀಯ ಬೆರೆಸಲು ಇಷ್ಟ ಪಡುವುದಿಲ್ಲ. ಯಾವ ಕಾರಣಕ್ಕೂ ತನಿಖೆ ಮೇಲೆ ಒತ್ತಡ ಹೇರದೆ, ಸಡಿಲ ಆಗಬಾರದು ಎಂದು ಒತ್ತಾಯಿಸಿದರು.
ಘಟನೆ ನಡೆದು ವಾರದ ಮೇಲಾದರೂ ಸರ್ಕಾರದ ಯಾವೊಬ್ಬ ಸಚಿವರು ಈವರೆಗೂ ಬಂದು ಧೈರ್ಯ ತುಂಬುವ ಕೆಲಸ (chitradurga Today latest news) ಮಾಡಿಲ್ಲ. ಈಗಲಾದರೂ ಬೆನ್ನೆಲುಬಾಗಿ ನಿಂತು ಕುಟುಂಬಕ್ಕೆ ನೆರವು ನೀಡಬೇಕು ಎಂದು ಒತ್ತಾಯಿಸಿದರು.
ಬಾಕ್ಸ್
ಎರಡು ಲಕ್ಷ ಪರಿಹಾರ
ಬಿಜೆಪಿ ಪಕ್ಷದಿಂದ ಎರಡು ಲಕ್ಷ ಪರಿಹಾರ ನೀಡಿದ್ದೇವೆ. ಇದರ ಜೊತೆ ಜೊತೆಗೆ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂಬುದಷ್ಟೇ ಮುಖ್ಯ ಎಂದು ವಿಜಯೇಂದ್ರ ಎಂದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252