Chitradurga news|Nammajana.com|8-9-2025
ನಮ್ಮಜನ.ಕಾಂ, ಚಿತ್ರದುರ್ಗ: ಜಿಲ್ಲಾ ಪಂಚಾಯತ್ (Chitradurga ZP ಕೆಡಿಪಿ)ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಲಾದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಶಾಸಕ ಟಿ.ರಘುಮೂರ್ತಿ ಮಾತನಾಡಿದರು.

ಶಾಸಕ ಟಿ.ರಘುಮೂರ್ತಿ ಮಾತನಾಡಿ, ಚಿತ್ರದುರ್ಗ ನಗರದ ಜಿಲ್ಲಾಸ್ಪತ್ರೆ ವೈದ್ಯಕೀಯ ಕಾಲೇಜಿನೊಂದಿಗೆ ಸೇರ್ಪಡೆಯಾಗಿದೆ ಈ ಹಿನ್ನಲೆಯಲ್ಲಿ ಚಳ್ಳಕೆರೆ ತಾಲ್ಲೂಕು ಆಸ್ಪತ್ರೆಯನ್ನು ಜಿಲ್ಲಾಸ್ಪತ್ರೆ ಎಂದು ಮೇಲ್ದರ್ಜೆಗೆ ಏರಿಸಬೇಕು.
ಪ್ರಸಕ್ತ ವರ್ಷದಲ್ಲಿ ಕೌನ್ಸಲಿಂಗ್ ಮೂಲಕ ವರ್ಗಾವಣೆಯಾದ ನಂತರ ಚಳ್ಳಕೆರೆ ಹಾಗೂ ಪರುಶುರಾಂಪುರ ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ಕೊರತೆ ಕಾಡುತ್ತಿದೆ. ಇಲ್ಲಿಂದ ವರ್ಗಾವಣೆಯಾದವರ (Chitradurga ZP ಕೆಡಿಪಿ) ಸ್ಥಾನಕ್ಕೆ ಬೇರೆಯಡೆಯಿಂದ ವೈದ್ಯರು ಆಗಮಿಸಿಲ್ಲ.
ಕೂಡಲೇ ವೈದ್ಯರ ನಿಯೋಜನೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕ್ರಮ ಕೈಗೊಳ್ಳಬೇಕು. ವಾಸ್ತವ ಸ್ಥಿತಿಯನ್ನು ಆರೋಗ್ಯ ಸಚಿವರು ಹಾಗೂ ಸರ್ಕಾರದ ಗಮನಕ್ಕೆ ತರಬೇಕು ಎಂದರು.
ಇದನ್ನೂ ಓದಿ: KDP meeting : ಎಸ್‍ಎಸ್‍ಎಲ್‍ಸಿ ಕಳಪೆ ಫಲಿತಾಂಶ: ಅನುದಾನಿತ ಶಾಲೆಗಳಿಗೆ ನೋಟಿಸ್ | ಸಚಿವ ಡಿ.ಸುಧಾಕರ್
ಇದೇ ವೇಳೆ ಜಿಲ್ಲೆಯಲ್ಲಿ ಏಪ್ರಿಲ್ ನಿಂದ ಆಗಸ್ಟ್ ಅಂತ್ಯದ ವರೆಗೆ ಸಂಭವಿಸಿದ ತಾಯಿ ಹಾಗೂ ಶಿಶು ಮರಣಗಳ ಕುರಿತು ಚರ್ಚಿಸಲಾಯಿತು. ಈ ಅವಧಿಯಲ್ಲಿ 7 ತಾಯಿ ಮರಣ (Chitradurga ZP ಕೆಡಿಪಿ) ಪ್ರಕರಣ ಸಂಭವಿಸಿದ್ದು, 01 ಮಾತ್ರ ಸರ್ಕಾರಿ ಆಸ್ಪತ್ರೆಯಲ್ಲಿ ಮರಣ ಸಂಭವಿಸಿದೆ, ಉಳಿದಂತೆ 03 ಖಾಸಗಿ ಆಸ್ಪತ್ರೆಯಲ್ಲಿ ಹಾಗೂ 03 ಮನೆಯಲ್ಲಿ ಸಂಭವಿಸಿದೆ ಎಂದು ಆರ್.ಸಿ.ಹೆಚ್ ಅಧಿಕಾರಿ ಡಾ.ಅಭಿನವ್ ಮಾಹಿತಿ ನೀಡಿದರು.
