Chitradurga news|nammajana.com|8-8-2024
ನಮ್ಮಜನ.ಕಾಂ, ಚಳ್ಳಕೆರೆ: ಕರ್ನಾಟಕ ರಾಜ್ಯ ಪಂಚಾಯಿತ್‌ರಾಜ್ ಮತ್ತು ಗ್ರಾಮೀಣಾಭಿವೃದ್ದಿ ಇಲಾಖೆ (Chitradurga zp) ಗ್ರಾಮೀಣ ಪ್ರದೇಶದ ಬಡ ಜನರಿಗೆ ಮಹಾತ್ಮಗಾಂಧಿ ಉದ್ಯೋಗ ಖಾತರಿಯ ನರೇಗಾ ಯೋಜನೆಯಡಿ ೧೩೦ ದಿನಗಳ ಕಾಮಗಾರಿಯನ್ನು ನೀಡಿ ಅವರ ಬದುಕನ್ನು ಹಸನುಗೊಳಿಸುವ ಕಾರ್ಯವನ್ನು ಮಾಡುತ್ತಿದೆ ಎಂದು ಜಿ.ಪಂ.ಸಿಇಓ ಎಸ್.ಜೆ.ಸೋಮಶೇಖರ್ ತಿಳಿಸಿದರು.
ಅವರು, ತಾಲ್ಲೂಕಿನ ತಳಕು ಮತ್ತು ಹಿರೇಹಳ್ಳಿ ಗ್ರಾಮ (Chitradurga zp) ಪಂಚಾಯಿತಿ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿಯಲ್ಲಿ ಕೈಗೊಂಡ ಅನೇಕ ಯೋಜನೆಗಳ ಮೂಲಕ ವಿವಿಧ ಕಾಮಗಾರಿ ನಡೆಸುತ್ತಾ ಗ್ರಾಮೀಣ ಭಾಗದ ಜನರ ಬದುಕಿಗೆ ಹೆಚ್ಚು ಆಸರೆಯಾಗಿದೆ

ಉದ್ಯೋಗ ಖಾತರಿ ಯೋಜನೆಗಳ ಕಾಮಗಾರಿಗಳಾದ ಕೃಷಿಹೊಂಡ ನಿರ್ಮಾಣ, ಬದು ನಿರ್ಮಾಣ, ದಾಳಿಂಬೆ ಬೆಳೆ, ನೀರಿನಹೊಂಡ, ನೀರಿನಕಾಲುವೆ ನಿರ್ಮಾಣ ಮುಂತಾದ (Chitradurga zp) ಕಾಮಗಾರಿಗಳನ್ನು ವೀಕ್ಷಿಸಿದರಲ್ಲದೆ, ವಿವಿಧ ಕಾಮಗಾರಿಗಳ ಅನುಷ್ಠಾನದಲ್ಲಿ ಭಾಗವಹಿಸಿದ ಕೂಲಿಕಾರರ ಸಮಸ್ಯೆಗಳನ್ನು ಆಲಿಸಿ, ಆರೋಗ್ಯ ತಪಾಸಣಾ ಕಾರ್ಯದಲ್ಲೂ ಭಾಗವಹಿಸಿದ್ದರು.
ಸರ್ಕಾರ ವಿವಿಧ ಯೋಜನೆಗಳು ಗ್ರಾಮೀಣ ಭಾಗದಲ್ಲೇ ಹೆಚ್ಚು ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಬೇಕಿದೆ. ಗ್ರಾಮೀಣ ಭಾಗದ ಜನರು ತಾವು ಇರುವ ಸ್ಥಳದಲ್ಲೇ ಉದ್ಯೋಗ ಖಾತರಿ ಯೋಜನೆಯಡಿ ಕಾಮಗಾರಿಗಳಲ್ಲಿ ಭಾಗವಹಿಸಬಹುದು. (Chitradurga zp) ಪ್ರತಿಯೊಬ್ಬ ಕೂಲಿಕಾರರಿಗೂ ಕಾರ್ಡ್ಗಳನ್ನು ಮಾಡಿಕೊಡಿ, ಕೂಲಿ ಕೇಳಿ ಬರುವ ಗ್ರಾಮಸ್ಥರಿಗೆ ಕೆಲಸ ನೀಡಿ, ಅವರಿಗೆ ಪಿಡಿಒ ಮತ್ತು ಪಂಚಾಯಿತಿ ಸಿಬ್ಬಂದಿ ಜಾರ್ಬ್ ಕಾರ್ಡ್ಗಳನ್ನು ಮಾಡಿಸಿಕೊಡುವ ಜವಾಬ್ದಾರಿಯನ್ನು ನಿರ್ವಹಿಸಿ, ಯಾವುದೇ ಕಾರಣಕ್ಕೂ ಯಂತ್ರಗಳನ್ನು ಬಳಸದಂತೆ ಇಒ ಶಶಿಧರಗೆ ಸೂಚಿಸಿದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಚ್.ಶಶಿಧರ ಮಾಹಿತಿ ನೀಡಿ, ತಳಕು ಮತ್ತು ಹಿರೇಹಳ್ಳಿ ವ್ಯಾಪ್ತಿಯಲ್ಲಿ ಇಲಾಖೆಯ ವಿವಿಧ ಯೋಜನೆಯ ಕಾಮಗಾರಿ ಅನುಷ್ಠಾನದಲ್ಲಿ ಗುಣಮಟ್ಟವೂ ಸೇರಿದಂತೆ ಯಾವುದೇ (Chitradurga zp) ಲೋಪವಾಗದಂತೆ ಎಚ್ಚರಿಕೆ ವಹಿಸಲಾಗಿದೆ. ಸಂಬಂಧಪಟ್ಟ ಪಂಚಾಯಿತಿ ಅಭಿವೃದ್ದಿ ಅಧಿಕಾರಿ, ತಾಂತ್ರಿಕ ಅಧಿಕಾರಿ ಹಾಗೂ ನೋಡಲ್ ಅಧಿಕಾರಿಗಳು ಪ್ರತಿಯೊಂದು ಕಾಮಗಾರಿಯನ್ನು ಖುದ್ದಾಗಿ ವೀಕ್ಷಿಸಿ ಮಾಹಿತಿ ನೀಡಬೇಕು. ತಾಲ್ಲೂಕಿನ ಬಹುತೇಕ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಮಗಾರಿಗಳ ಅನುಷ್ಠಾನ ಕಾರ್ಯ ಭರದಿಂದ ಸಾಗಿದೆ ಎಂದರು.
ಇದನ್ನೂ ಓದಿ: Chitradurga Power Cut: ನಾಳೆಯಿಂದ ಏಳು ದಿನ ಈ ಊರುಗಳಲ್ಲಿ ಕರೆಂಟ್ ಇರಲ್ಲ
ಹಿರೇಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜಣ್ಣ, ಸಹಾಯಕ ನಿರ್ದೇಶಕ ಟಿ.ಎಚ್.ಸಂತೋಷ್, ಡಾ.ಶಿವಕುಮಾರ್, ಪಿಡಿಒ ನರಸಿಂಹಪ್ಪ ಮುಂತಾದವರು ಉಪಸ್ಥಿತರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252