Chitradurga News | Nammajana.com | 14-08-2025
ನಮ್ಮಜನ.ಕಾಂ, ಚಿತ್ರದುರ್ಗ: ಹರ್ ಘರ್(Zilla Panchayat) ತಿರಂಗಾ, ಹರ್ ಘರ್ ಸ್ವಚ್ಛತಾ, ಸ್ವಚ್ಛತೆಯೊಂದಿಗೆ ಸ್ವಾತಂತ್ರ್ಯ ಉತ್ಸವ ಅಭಿಯಾನದ ಅಂಗವಾಗಿ ನಗರದ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಗುರುವಾರ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ ನಡೆಯಿತು.
ಇದನ್ನೂ ಓದಿ: ಈ ಊರಲ್ಲಿ ಮಳೆಗೆ ಸೋರುತ್ತಿದೆ ಸರ್ಕಾರಿ ಶಾಲೆ, ಸೌಲಭ್ಯ ವಂಚಿತ ಮಕ್ಕಳ ಗೋಳು ಕೇಳೋರ್ಯಾರು?

79ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ದೇಶಾದ್ಯಂತ ಗ್ರಾಮೀಣ ಜನರಲ್ಲಿ ನೀರು ಮತ್ತು ನೈರ್ಮಲ್ಯ ಕುರಿತು ಹೆಚ್ಚಿನ ಅರಿವು ಮೂಡಿಸುವ ಉದ್ದೇಶದೊಂದಿಗೆ “ಹರ್ ಘರ್ ತಿರಂಗಾ, ಹರ್ ಘರ್ ಸ್ವಚ್ಛತಾ, ಸ್ವಚ್ಛತೆಯೊಂದಿಗೆ ಸ್ವಾತಂತ್ರ್ಯದ ಉತ್ಸವ ಆಚರಣೆ ಎಂಬ ಘೋಷವಾಕ್ಯದಡಿ ಹಮ್ಮಿಕೊಂಡಿರುವ.
ಈ ಅಭಿಯಾನದಲ್ಲಿ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿ ಕಚೇರಿ, ಆವರಣ, ಶಾಲೆ-ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಓವರ್ ಹೆಡ್ ಟ್ಯಾಂಕ್, ಮಿನಿ ಟ್ಯಾಂಕ್‍ಗಳ ಸ್ವಚ್ಛತೆ, ಜಾನುವಾರು ತೊಟ್ಟಿಗಳ ಸ್ವಚ್ಚತೆ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ಹೇಳಿದರು.
ಇದನ್ನೂ ಓದಿ: Nagamohan Das Report ವರದಿ ಅನ್ವಯ ಕೂಡಲೇ ಒಳ ಮೀಸಲಾತಿ ಜಾರಿಗೊಳಿಸಿ | ಸಿಎಂ, ಡಿಸಿಎಂ ಬಳಿ ಮಾದಾರ ಚನ್ನಯ್ಯ ಶ್ರೀ ನಿಯೋಗ ಮನವಿ
ಈ ಸಂದರ್ಭದಲ್ಲಿ ಜಿಲ್ಲಾ(Zilla Panchayat) ಪಂಚಾಯಿತಿ ಉಪ ಕಾರ್ಯದರ್ಶಿ ಡಾ.ರಂಗಸ್ವಾಮಿ, ಯೋಜನಾ ನಿರ್ದೇಶಕರು ಹಾಗೂ ಮುಖ್ಯ ಯೋಜನಾಧಿಕಾರಿ ಸಿ.ಎಸ್ ಗಾಯಿತ್ರಿ, ಮುಖ್ಯ ಲೆಕ್ಕಾಧಿಕಾರಿ ಮಧು, ಸಹಾಯಕ ಯೋಜನಾಧಿಕಾರಿ ಡಿ.ಎಸ್.ಸುಮಾ, ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯ ಜಿಲ್ಲಾ ಸಮಾಲೋಚಕರಾದ ನಾಗರಾಜ್, ಪ್ರಮೀಳ, ಜಿಲ್ಲಾ ಪಂಚಾಯಿತಿ ವ್ಯವಸ್ಥಾಪಕ ಸುನೀಲ್ ಸೇರಿದಂತೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಇಂಜಿನಿಯರ್‍ಗಳಾದ ಮೌನಿಕಾ, ಸಂಜೀವಿನಿ, ರಮ್ಯಾ, ಜಿಲ್ಲಾ ಪಂಚಾಯಿತಿ ಸಿಬ್ಬಂದಿ ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252