Chitradurga news | nammajana.com | 04-08-2025
ನಮ್ಮಜನ.ಕಾಂ, ಚಿತ್ರದುರ್ಗ: ತೆಂಗು(Coconut sapling) ಅಭಿವೃದ್ಧಿ ಮಂಡಳಿ ಯೋಜನೆಯಡಿ ಹೊಸದಾಗಿ ತೆಂಗಿನ ಸಸಿಗಳನ್ನು ನಾಟಿ ಮಾಡಿಕೊಳ್ಳುವ ರೈತರಿಗೆ ಸಹಾಯಧನ ನೀಡುವ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: ಹೋಟೆಲ್ ಉದ್ದಿಮೆಯಲ್ಲಿ ಮಹಿಳೆಯರು ಪಾಲ್ಗೊಳ್ಳಲು ಅಕ್ಕ ಕೆಫೆ ಉತ್ತೇಜನ : ಸಚಿವ ಡಿ.ಸುಧಾಕರ್
ಪ್ರಸಕ್ತ ಸಾಲಿನ ತೆಂಗು ಅಭಿವೃದ್ಧಿ ಮಂಡಳಿ ಯೋಜನೆಯಡಿ ಹೊಸದಾಗಿ ತೆಂಗಿನ ಸಸಿಗಳನ್ನು ನಾಟಿ ಮಾಡಿಕೊಳ್ಳುವ ರೈತರಿಗೆ ಪ್ರತಿ ಹೆಕ್ಟೇರ್‍ಗೆ ವರ್ಷಕ್ಕೆ ರೂ.28000/-ರಂತೆ 02 ಕಂತುಗಳಲ್ಲಿ ಒಟ್ಟು ರೂ.56000/-ಗಳು ಸಹಾಯಧನ ನೀಡಲಾಗುವುದು.
ಒಬ್ಬ ರೈತರಿಗೆ ಗರಿಷ್ಟ 2 ಹೆಕ್ಟೇರ್ ಪ್ರದೇಶಕ್ಕೆ(Coconut sapling) ಸಹಾಯಧನ ಪಡೆಯಬಹುದಾಗಿದ್ದು, ಆಸಕ್ತ ರೈತರು ಇದೇ ಆಗಸ್ಟ್ 16ರೊಳಗೆ ತಾಲ್ಲೂಕು ತೋಟಗಾರಿಕೆ ಇಲಾಖೆ ಕಚೇರಿ ಮತ್ತು ಸಮೀಪದ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: ಬಂಗಾರದ ಬೆಲೆಯಲ್ಲಿ ಏರಿಕೆ
ಸಹಾಯಧನ ಪಡೆಯುವ ಸಂದರ್ಭದಲ್ಲಿ ಆಧಾರ್ ಕಾರ್ಡ್ ಜೆರಾಕ್ಸ್, ರಾಷ್ಟ್ರೀಕೃತ ಬ್ಯಾಂಕ್ ಪಾಸ್‍ಬುಕ್, ಅಧಿಕೃತ ಸಸ್ಯಗಾರಗಳಿಂದ ಸಸಿ ಖರೀದಿಸಿದ ಬಿಲ್‍ನ್ನು ಸಲ್ಲಿಸಬೇಕು ಎಂದು ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.
