Chitradurga news|nammajana.com|23-7-2024
ನಮ್ಮಜನ.ಕಾಂ, ಚಿತ್ರದುರ್ಗ: ಜುಲೈ 08 ಮತ್ತು 09 ರಂದು ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾಧಿಕಾರಿ (Collector meeting) ಮತ್ತು ಜಿಲ್ಲಾ ಪಂಚಾಯಿತಿ ಸಿಇಒ ಗಳ ಸಮ್ಮೇಳನದಲ್ಲಿ ಚರ್ಚಿಸಲಾದ ವಿಷಯಗಳ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ವಿವಿಧ ಇಲಾಖೆಗಳ ಅನುಪಾಲನಾ ಸಭೆ ನಡೆಸಿ ಅವರು ಮಾತನಾಡಿದರು.
ಉಪವಿಭಾಗಾಧಿಕಾರಿ, ತಹಶೀಲ್ದಾರ್ ಹಾಗೂ ತಾ.ಪಂ. ಇ.ಓ ಗಳು ವಸತಿ ನಿಲಯ, ಶಾಲೆ, ಆಸ್ಪತ್ರೆಗಳಿಗೆ ಕಡ್ಡಾಯವಾಗಿ ಭೇಟಿ ನೀಡಿ, ಅಲ್ಲಿನ ಸ್ಥಿತಿಗತಿಗಳ ಕುರಿತು ಜಿ.ಪಿ.ಎಸ್ (Collector meeting) ಪೋಟೋದೊಂದಿಗೆ ವರದಿ ನೀಡುವಂತೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ನಿರ್ದೇಶನ ನೀಡಿದರು.

ವಾರಕ್ಕೆ ಕನಿಷ್ಟ ಎರಡು-ಮೂರು ಶಾಲೆ, ವಸತಿ ನಿಲಯ, ಆಸ್ಪತ್ರೆಗಳಿಗೆ ಭೇಟಿ ನೀಡಬೇಕು ಎಂದು ತಾಕೀತು ಮಾಡಿದರು. ಜಿಲ್ಲೆಯಲ್ಲಿರುವ ಎಲ್ಲಾ ಹಾಸ್ಟೆಲ್, ಶಾಲೆಗಳು ಹಾಗೂ (Collector meeting) ಅಂಗನವಾಡಿಗಳಿಗೆ ಜಲಜೀವನ್ ಮಿಷನ್ ಯೋಜನೆಯಡಿ ಶೇ.100 ರಷ್ಟು ನೀರು ಪೂರೈಕೆಗೆ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಗ್ರಾಮೀಣ ಕುಡಿಯುವ ನೀರು ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದನ್ನೂ ಓದಿ: Wind Challakere: ಗಾಳಿಗೆ ಮರಬಿದ್ದು ತುಂಡಾದ ಎರಡು ಕರೆಂಟ್ ಕಂಬ, ಆಟೋ ಜಖಂ, ಮುಂದೆ ಆಗಿದ್ದೇನು?
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252