ಚಿತ್ರದುರ್ಗ: ಚಿತ್ರದುರ್ಗ (ಪ.ಜಾತಿ) ಲೋಕಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಜೂನ್ 04ರಂದು ಚಿತ್ರದುರ್ಗ ನಗರದ ಬಿ.ಡಿ.ರಸ್ತೆಯ ಸರ್ಕಾರಿ ವಿಜ್ಞಾನ ಕಾಲೇಜಿನ ಹೊಸ ಕಟ್ಟಡದಲ್ಲಿ ನಡೆಯಲಿದ್ದು, ಮತ ಎಣಿಕೆ (Counting of votes) ಕಾರ್ಯಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸಿದೆ.
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕ ಮನೋಹರ್ ಮರಂಡಿ, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಸಹಾಯಕ ಚುನಾವಣಾಧಿಕಾರಿ ಹಾಗೂ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ತಹಶೀಲ್ದಾರ್ ಡಾ.ನಾಗವೇಣಿ ಅವರು ಸೋಮವಾರ ನಗರದ ಸರ್ಕಾರಿ ವಿಜ್ಞಾನ ಕಾಲೇಜಿಗೆ ಭೇಟಿ ನೀಡಿ ಮತ ಎಣಿಕೆಗೆ (Counting of votes) ಮಾಡಿರುವ ಸಿದ್ಧತೆಯನ್ನು ಪರಿಶೀಲಿಸಿದರು.
ಈ ವೇಳೆ ಮಾತನಾಡಿದ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಚಿತ್ರದುರ್ಗ ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯಕ್ಕಾಗಿ ಎಲ್ಲ ಅಗತ್ಯ ಸಿದ್ಧತಾ ಕಾರ್ಯ ಕೈಗೊಳ್ಳಲಾಗಿದ್ದು, ಜೂನ್ 04ರಂದು ಬೆಳಿಗ್ಗೆ 7.30ಕ್ಕೆ ಭದ್ರತಾ ಕೊಠಡಿಗಳನ್ನು ಚುನಾವಣಾ ವೀಕ್ಷಕರ, ಅಭ್ಯರ್ಥಿಗಳ, ಪ್ರತಿನಿಧಿಗಳ ಸಮಕ್ಷಮದಲ್ಲಿ ತೆರೆಯಲಾಗುವುದು. ಎಣಿಕೆ ಕಾರ್ಯವು (Counting of votes) ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಲಿದೆ ಎಂದರು.

ಇದನ್ನೂ ಓದಿ: Congress: ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ.ತಿಪ್ಪೇಸ್ವಾಮಿ ಹುಟ್ಟು ಹಬ್ಬ ಆಚರಣೆಆಚರಣೆ
ಪ್ರತಿ ಕೌಟಿಂಗ್ ಹಾಲ್‍ನಲ್ಲಿ ಪ್ರತಿ ಟೇಬಲ್‍ಗೆ ಸಿ.ಸಿ.ಟಿವಿ ಕ್ಯಾಮೆರಾ ಅವಳಡಿಸಿ ಮಾನಿಟರಿಂಗ್ ಮಾಡಲಾಗುತ್ತಿದೆ. ಪ್ರತಿ ಸುತ್ತಿನ ಎಣಿಕೆ ಕಾರ್ಯ ಮುಕ್ತಾಯದ ನಂತರ ಚುನಾವಣಾ ವೀಕ್ಷಕರ ಗಮನಕ್ಕೆ ತಂದು ಅಂಕಿ ಅಂಶಗಳ ಕ್ರೂಢೀಕರಣ ಮಾಡಲಾಗುತ್ತದೆ. ಈ ನಿಟ್ಟಿನಲ್ಲಿ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ ಎಂದರು.
ಅಂಚೆ ಮತಪತ್ರಗಳ ಎಣಿಕೆಯ ಜೊತೆಜೊತೆಗೆ ಇವಿಎಂ ಮತ ಎಣಿಕೆ ಕಾರ್ಯವೂ ನಡೆಯಲಿದ್ದು, ಮಧ್ಯಾಹ್ನ 12.30ರ ವೇಳೆಗೆ ಮತ ಎಣಿಕೆಯ ಸ್ಪಷ್ಟ ಚಿತ್ರಣ ದೊರೆಯಲಿದೆ. ಪ್ರತಿ ಟೇಬಲ್‍ಗೆ ಎಣಿಕೆ ಮೈಕ್ರೋ ಅಬಸ್ಸರ್ವರ್, ಎಣಿಕೆ ಮೇಲ್ವಿಚಾರಕರು ಹಾಗೂ ಎಣಿಕೆ ಸಹಾಯಕರನ್ನು ನಿಯೋಜಿಸಲಾಗಿದ್ದು, ಮತ ಎಣಿಕೆ ಕಾರ್ಯಕ್ಕೆ 141 ಎಣಿಕೆ ಮೈಕ್ರೋ ಆಬಸ್ಸರ್ವರ್, 141 ಜನ ಎಣಿಕೆ ಮೇಲ್ವಿಚಾರಕರು ಹಾಗೂ 154 ಜನ ಎಣಿಕೆ (Counting of votes) ಸಹಾಯಕರನ್ನು ನೇಮಿಸಲಾಗಿದೆ ಎಂದರು.
ಇದನ್ನೂ ಓದಿ: Challakere Labor death: ಕಟ್ಟಡ ಕಾಮಗಾರಿ | ಮೇಲಿಂದ ಬಿದ್ದು ಕಾರ್ಮಿಕ ಸಾವು
ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 14 ಟೇಬಲ್‍ಗಳನ್ನು ಹಾಗೂ ಅಂಚೆ ಮತಪತ್ರಗಳ ಎಣಿಕೆಗೆ ಒಟ್ಟು 12 ಟೇಬಲ್‍ಗಳನ್ನು ನಿಗಧಿಪಡಿಸಲಾಗಿದೆ. ನೆಲಮಹಡಿಯಲ್ಲಿ ಚಳ್ಳಕೆರೆ, ಹೊಸದುರ್ಗ, ಪಾವಗಡ ಹಾಗೂ ಅಂಚೆಮತ ಪತ್ರಗಳ ಮತ ಎಣಿಕೆ ನಡೆಯಲಿದೆ. ಮೊದಲನೇ ಮಹಡಿಯಲ್ಲಿ ಮೊಳಕಾಲ್ಮುರು, ಹಿರಿಯೂರು ಹಾಗೂ ಶಿರಾ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಹಾಗೂ ಎರಡನೇ ಮಹಡಿಯಲ್ಲಿ ಚಿತ್ರದುರ್ಗ ಹಾಗೂ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯಕಾರ್ಯ (Counting of votes) ನಡೆಯಲಿದೆ ಎಂದು ತಿಳಿಸಿದರು.
ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ 285 ಮತಗಟ್ಟೆಗಳ ಎಣಿಕೆಯು 21 ಸುತ್ತುಗಳಲ್ಲಿ, ಚಳ್ಳಕೆರೆ ವಿಧಾನಸಭಾ ಕ್ಷೇತ್ರದ 260 ಮತಗಟ್ಟೆಗಳ ಎಣಿಕೆಯು 19 ಸುತ್ತುಗಳಲ್ಲಿ, ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ 288 ಮತಗಟ್ಟೆಗಳ ಎಣಿಕೆಯು 21 ಸುತ್ತುಗಳಲ್ಲಿ, ಹಿರಿಯೂರು ವಿಧಾನಸಭಾ ಕ್ಷೇತ್ರದ 287 ಮತಗಟ್ಟೆಗಳ ಎಣಿಕೆಯು 21 ಸುತ್ತುಗಳಲ್ಲಿ, ಹೊಸದುರ್ಗ ವಿಧಾನಸಭಾ ಕ್ಷೇತ್ರದ 242 ಮತಗಟ್ಟೆಗಳ ಎಣಿಕೆಯು 18 ಸುತ್ತುಗಳಲ್ಲಿ, ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ 299 ಮತಗಟ್ಟೆಗಳ ಎಣಿಕೆಯು 22 ಸುತ್ತುಗಳಲ್ಲಿ, ಶಿರಾ ವಿಧಾನಸಭಾ ಕ್ಷೇತ್ರದ 267 ಮತಗಟ್ಟೆಗಳ ಎಣಿಕೆಯು 20 ಸುತ್ತುಗಳಲ್ಲಿ ಹಾಗೂ ಪಾವಗಡ ವಿಧಾನಸಭಾ ಕ್ಷೇತ್ರದ 240 ಮತಗಟ್ಟೆಗಳ ಎಣಿಕೆಯು 18 ಸುತ್ತುಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಹೇಳಿದರು.
ಮತ ಎಣಿಕೆ ದಿನದಂದು ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿಗೊಳಿಸಲಾಗಿದೆ ಹಾಗೂ ಜಿಲ್ಲೆಯಾದ್ಯಂತ ಮಧ್ಯಪಾನ ನಿಷೇಧ ಜಾರಿಗೊಳಿಸಲಾಗಿದೆ. ಯಾವುದೇ ಅಭ್ಯರ್ಥಿಗಳು ಸಭೆ, ಸಮಾರಂಭ ಹಾಗೂ ವಿಜಯೋತ್ಸವ ಆಚರಿಸುವಂತಿಲ್ಲ ಎಂದು ತಿಳಿಸಿದರು.
ಮತ ಎಣಿಕ (Counting of votes) ಕೇಂದ್ರದೊಳಗೆ ಮೊಬೈಲ್ ಪೋನ್‍ಗಳು, ಪೇಜರ್, ಎಲೆಕ್ಟ್ರಾನಿಕ್, ಕ್ಯಾಲ್ಕುಲೇಟರ್ಸ್, ಸಿಗರೇಟ್, ಬೀಡಿ, ಬೆಂಕಿಪೊಟ್ಟಣ ಹಾಗೂ ಲೈಟರ್ಸ್‍ಗಳು, ನೀರಿನ ಬಾಟಲ್ಸ್‍ಗಳು ಹಾಗೂ ಇನ್ನೂ ಯಾವುದೇ ಬಾಟಲ್ಸ್‍ಗಳುಯ, ಛತ್ರಿ, ಯಾವುದೇ ಹರಿತವಾದ ಆಯುಧಗಳು, ಯಾವುದೇ ರೀತಿಯ ಸ್ಪೋಟಕ ವಸ್ತುಗಳು ಹಾಗೂ ಸಿಡಿಮದ್ದುಗಳು, ಯಾವುದೇ ರೀತಿಯ ಬೆಂಕಿ ಹತ್ತುವ ಪದಾರ್ಥಗಳು, ಯಾವುದೇ ಬಗೆಯ ಆಯುಧಗಳು, ಇಕ್‍ಪೆನ್ ವಸ್ತುಗಳನ್ನು ತರುವುದನ್ನು ಕಡ್ಡಾಯವಾಎಣಿಕೆ ಷೇಧಿಸಲಾಗಿದೆ ಎಂದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252