Chitradurga News | Nammajana.com | 8-5-2024
ನಮ್ಮಜನ.ಕಾಂ.ಚಿತ್ರದುರ್ಗ:ಬೆಳೆ ಪರಿಹಾರ ಪಾವತಿ ಸಂಬಂಧ ಮಾಹಿತಿ ಪಡೆದುಕೊಳ್ಳಲು ರೈತರಿಗೆ ಅನುಕೂಲವಾಗುವಂತೆ ಜಿಲ್ಲಾಧಿಕಾರಿ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ ಹಾಗೂ ಜಿಲ್ಲೆಯ 6 ತಾಲ್ಲೂಕು ಕಚೇರಿಗಳಲ್ಲಿ ಸಹಾಯವಾಣಿ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.
2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬರ ಪರಿಸ್ಥಿತಿಯಿಂದ ಉಂಟಾದ ಬೆಳೆ ಹಾನಿಗೆ ಸಂಬಂಧಿಸಿದಂತೆ ಜಿಲ್ಲೆಯ 1,31,776 ರೈತರಿಗೆ ಮೊದಲನೇ ಕಂತಾಗಿ ಗರಿಷ್ಠ ರೂ.2000 ರವರೆಗೆ ಒಟ್ಟು ರೂ.25,61,56,790/-ಗಳನ್ನು ಪರಿಹಾರವನ್ನು ಈಗಾಗಲೇ ವಿತರಿಸಲಾಗಿದೆ.
ಪ್ರಸ್ತುತ ಎಸ್.ಡಿ.ಆರ್.ಎಫ್, ಎನ್.ಡಿ.ಆರ್.ಎಫ್ ಮಾರ್ಗಸೂಚಿ ಪ್ರಕಾರ ಅರ್ಹತೆಯ ಅನುಸಾರ ಅರ್ಹ ರೈತರಿಗೆ ಗರಿಷ್ಠ ರೂ.2000 ರವರೆಗೆ ಪರಿಹಾರ ಮೊತ್ತ ಪಾವತಿಸಿರುವುದನ್ನು ಪರಿಗಣನೆಗೆ ತೆಗೆದುಕೊಂಡು ಅರ್ಹತೆಯಂತೆ ಇನ್ನುಳಿದ ಬಾಕಿ ಬೆಳೆಹಾನಿ ಪರಿಹಾರ (ಇನ್‍ಪುಟ್ ಸಬ್ಸಿಡಿ) ಮೊತ್ತವನ್ನು ವಿತರಿಸಲಾಗುವುದು.
ಅದರಂತೆ ಜಿಲ್ಲೆಯ 1,17,064 ರೈತರಿಗೆ ಒಟ್ಟು ರೂ.89,31,60,013/- ಗಳನ್ನು ಡಿಬಿಟಿ ಮುಖಾಂತರ ಪಾವತಿಸಲಾಗುತ್ತಿದೆ.
ಇದನ್ನೂ ಓದಿ: SSLC ಪರೀಕ್ಷೆ ಫಲಿತಾಂಶ ನಾಳೆ ಪ್ರಕಟ, ಎಷ್ಟೊತ್ತಿಗೆ? ಯಾವ ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು?
ಪರಿಹಾರ ಹಣ ಪಾವತಿಗೆ ಸಂಬಂಧಿಸಿದಂತೆ ಸಹಾಯವಾಣಿ
- ಜಿಲ್ಲಾಧಿಕಾರಿಗಳ ಕಚೇರಿ ಸಹಾಯವಾಣಿ ಸಂಖ್ಯೆ
08194-222538, - ಉಪ ವಿಭಾಗಾಧಿಕಾರಿಗಳ ಕಚೇರಿ 08194-222413
- ಚಿತ್ರದುರ್ಗ ತಾಲ್ಲೂಕು ಕಚೇರಿ 08194-222416,
- ಚಳ್ಳಕೆರೆ 08195-250648,
- ಹಿರಿಯೂರು 08193-263226
- ಹೊಸದುರ್ಗ 08199-295058,
- ಹೊಳಲ್ಕೆರೆ 08191-200013,
- ಮೊಳಕಾಲ್ಮೂರು ತಾಲ್ಲೂಕು ಕಚೇರಿ 08198-229234
ಈ ನಂಬರ್ ಗಳಿಗೆ ಕರೆ ಮಾಡಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.