Chitradurga news|nammajana.com|15-8-2024
ನಮ್ಮಜನ.ಕಾಂ, ಚಿತ್ರದುರ್ಗ: ಬೆಳೆ ಸಮೀಕ್ಷೆಯಲ್ಲಿ ಜಿಲ್ಲೆ ರಾಜ್ಯದಲ್ಲಿ ಪ್ರಥಮ ಸ್ಥಾನದಲ್ಲಿದೆ. ಪೂರ್ವ ಮುಂಗಾರು (Crop Survey) ಹಂಗಾಮಿನಲ್ಲಿ ಜಿಲ್ಲೆಯಲ್ಲಿ 1,30,694 ರೈತರ ತಾಕುಗಳ ಪೈಕಿ 1,28,375 ತಾಕುಗಳ ಬೆಳೆ ಸಮೀಕ್ಷೆ ಪೂರ್ಣಗೊಂಡಿದೆ.
2023 ರ ಮುಂಗಾರು ಹಂಗಾಮಿನಲ್ಲಿ 81501 ರೈತರು ರೂ.284.22 ಕೋಟಿ ಬೆಳೆ ವಿಮೆ ಪಡೆದಿರುತ್ತಾರೆ. ಮತ್ತು 2024 ರ ಮುಂಗಾರು ಹಂಗಾಮಿನಲ್ಲಿ 1,12,101 ರೈತರು ಬೆಳೆ ವಿಮೆಗೆ ನೋಂದಣಿ ಮಾಡಿಸಿದ್ದು, ಜಿಲ್ಲೆಯು ರಾಜ್ಯದಲ್ಲಿ 8ನೇ (Crop Survey) ಸ್ಥಾನದಲ್ಲಿರುತ್ತದೆ.
ಇದನ್ನೂ ಓದಿ: ಬೈಕ್ ಅಪಘಾತದಲ್ಲಿ ಯುವಕ ಸಾವು | ಕಣ್ಣು ದಾನ ಮಾಡಿದ ಕುಟುಂಬ | Hiriyur
2023 ರ ಮುಂಗಾರು ಹಂಗಾಮಿನಲ್ಲಿ 1,44,166 ರೈತರಿಗೆ ರೂ. 125.75 ಕೋಟಿಗಳನ್ನು ಪಾರದರ್ಶಕವಾಗಿ ಫ್ರೂಟ್ಸ್, ಪರಿಹಾರ್ ತಂತ್ರಾಂಶಗಳ ಮೂಲಕ ನೇರವಾಗಿ ರೈತರ ಖಾತೆಗಳಿಗೆ ಜಮಾ ಮಾಡಿರುವುದು ನಮ್ಮ ಸರ್ಕಾರದ (Crop Survey) ಹೆಮ್ಮೆಯಾಗಿರುತ್ತದೆ ಎಂದು ಸಚಿವ ಡಿ.ಸುಧಾಕರ್ ಹೇಳಿದರು.
ಇದನ್ನೂ ಓದಿ: Sri Ahobala Motors: ಶ್ರೀ ಅಹೋಬಲ ಟಿವಿಎಸ್ ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ