Chitradurga news |nammajana.com |26-5-2024
ನಮ್ಮಜನ.ಕಾಂ, ಚಳ್ಳಕೆರೆ: ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಎಸ್.ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರ ಶೈಕ್ಷಣಿಕ ಕ್ಷೇತ್ರದ ಅಭಿವೃದ್ದಿಗೆ ಹಲವಾರು ಯೋಜನೆ ರೂಪಿಸಿದೆ ಎಂದು ಚಳ್ಳಕೆರೆ ಶಾಸಕ ಕರ್ನಾಟಕ ಸಣ್ಣಕೈಗಾರಿಕೆ ಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ ತಿಳಿಸಿದರು.
ಅವರು, ಶನಿವಾರ ತಮ್ಮ ನಿವಾಸದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಪಕ್ಷದ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ (D. T. Srinivas) ಪರ ಮತಯಾಚನೆ ಮಾಡಿದರು. ಕ್ಷೇತ್ರದ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಭೆಯಲ್ಲಿ ಮಾತನಾಡಿದರು.

ಶಾಲಾ ಹಂತದಲ್ಲೇ ಎಲ್ಲಾ ಮಕ್ಕಳಿಗೂ ಗುಣಾತ್ಮಕ ಶಿಕ್ಷಣ ನೀಡುವ ನಿಟ್ಟಿನಲ್ಲಿ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದೆ. ಜೊತೆಯಲ್ಲೇ ಶಿಕ್ಷಕರ ಹಲವಾರು ಸಮಸ್ಯೆಗಳನ್ನು ನಿವಾರಿಸಲು ಕ್ರಮಕೈಗೊಂಡಿದೆ.
ನಮ್ಮ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ (D.T. Srinivas) ಗೆ ಮೊದಲ ಪ್ರಾಶಸ್ತ್ಯ ಮತ ನೀಡಿ ಗೆಲ್ಲಿಸಿ
ಶಿಕ್ಷಕರ ಹಲವಾರು ಸಮಸ್ಯೆಗಳ ಬಗ್ಗೆ ಸರ್ಕಾರಕ್ಕೆ ಈಗಾಗಲೇ ಸಾಕಷ್ಟು ಮಾಹಿತಿ ಇದೆ. ಶಿಕ್ಷಕರ ಸಮಸ್ಯೆಗಳನ್ನು ನಿವಾರಣೆ ಮಾಡುವುದಲ್ಲಿ ಯಾವುದೇ ಸಂಶಯಬೇಡ. ಒಪಿಎಸ್ ಪದ್ದತಿಯನ್ನು ಜಾರಿಗೆ ತರುವುದಲ್ಲದೆ, ೭ನೇ ವೇತನ ಆಯೋಗವನ್ನು ಜಾರಿ ಮಾಡುವ ನಿಟ್ಟಿನಲ್ಲಿ ಸರ್ಕಾರಿ ಕಾಯೋನ್ಮುಖವಾಗಿದೆ. ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್‌ಗೆ (D. T. Srinivas) ಮೊದಲ ಪ್ರಾಶಸ್ತ್ಯ ದ ಮತ ನೀಡಿ ಆಯ್ಕೆ ಮಾಡಬೇಕಿದೆ. ಕ್ಷೇತ್ರದ ಶಿಕ್ಷಕರ ಸಮಸ್ಯೆಗಳಿಗೆ ಕ್ರಿಯಾಶೀಲವಾಗಿ ಸ್ಪಂದಿಸುವ ಎಲ್ಲಾ ಗುಣಗಳು ಡಿ.ಟಿ.ಶ್ರೀನಿವಾಸ್ (D.T.Srinivas) ಒಳಗೊಂಡಿದ್ದಾರೆ ಎಂದರು.
ಇದನ್ನೂ ಓದಿ: challakere doctor: ಡಾಕ್ಟರ್ ಅಕೌಂಟ್ ನಿಂದ 7.40 ಲಕ್ಷ ಕದ್ದ ಕಳ್ಳರು, ಡಾಕ್ಟರ್ ಮೋಸ ಹೋಗಿದ್ದೇಗೆ?
ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖಂಡರು
ಕಾಂಗ್ರೆಸ್ ಪಕ್ಷದ ಕಾರ್ಯದರ್ಶಿ ಪಿ.ತಿಪ್ಪೇಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ವೀರಭದ್ರಪ್ಪ, ನೇತಾಜಿಪ್ರಸನ್ನ, ಜಿ.ಟಿ.ವೀರಭದ್ರಸ್ವಾಮಿ, ಮೂಡಲಗಿರಿಯಪ್ಪ, ದೊಡ್ಡಯ್ಯ, ಶ್ರೀನಿವಾಸ್, ವಸಂತಕುಮಾರ್ ಮುಂತಾದವರು ಉಪಸ್ಥಿತರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252