Chitradurga news|nammajana.com|18-10-2024
ನಮ್ಮಜನ.ಕಾಂ, ಚಳ್ಳಕೆರೆ: ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ, ರಾಜ್ಯಸಣ್ಣಕೈಗಾರಿಕೆ ಅಭಿವೃದ್ದಿ ನಿಗಮದ ಅಧ್ಯಕ್ಷ ಟಿ.ರಘುಮೂರ್ತಿಯವರ ಪುತ್ರಿ ಸುಚಿತ್ರ, ವರುಣರವರ ವಿವಾಹ ಮಹೋತ್ಸವ ಅಕ್ಟೋಬರ್ 21ರಂದು ನಡೆಯಲಿದ್ದು, ಅಂದು ನಗರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುವ (Daughter marriage) ಹಿನ್ನೆಲೆಯಲ್ಲಿ ಹೆಲಿಪ್ಯಾಡ್ ಸ್ಥಳವನ್ನು ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಪೂರ್ವವಲಯ ಐಜಿಪಿ ರಮೇಶ್‌ಬಾನೋತ್, ಪರಿಶೀಲನೆನಡೆಸಿದರು.
ಸೋಮವಾರ ನಗರದ ಎಚ್‌ಪಿಪಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದ ಕ್ರೀಡಾಂಗಣದಲ್ಲಿ ವೈಭವಪೂರಿತವಾಗಿ ನಡೆಯಲಿದ್ದು, ಈಗಾಗಲೇ ಸಿದ್ದತೆಗಳು ಬರದಿಂದ ಸಾಗಿದ್ದು, ವಿವಾಹ ಕಾರ್ಯಕ್ಕೆ ರಾಜ್ಯದ ಮುಖ್ಯಮಂತ್ರಿ (Daughter marriage) ಎಸ್.ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಮಂತ್ರಿ ಮಂಡಲದ ಸಚಿವರು, ಶಾಸಕರು ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನೂತನ ವಧುವರರನ್ನು ಆಶೀರ್ವಾದಿಸಲಿದ್ದಾರೆ. ಮುಖ್ಯಮಂತ್ರಿಗಳ ಆಗಮನದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಮತ್ತು ಪೂರ್ವವಲಯದ ಐಜಿಪಿ ನೇತೃತ್ವದಲ್ಲಿ ಬಂದೋಬಸ್ತ್ ಕಾರ್ಯಕ್ರಮವನ್ನು ವೀಕ್ಷಿಸಲಾಯಿತು.

ಇದನ್ನೂ ಓದಿ: Adike Rate: ಚನ್ನಗಿರಿ ಮಾರುಕಟ್ಟೆ | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ಧಾರಣೆ | 18 ಅಕ್ಟೋಬರ್ 2024
ಚಿತ್ರದುರ್ಗ ರಸ್ತೆಯ ರಾಷ್ಟೀಯ ಹೆದ್ದಾರಿ ಬೈಪಾಸ್ ಬಳಿ ಹೆಲಿಕಾಪ್ಟರ್ ನಿಲ್ದಾಣವನ್ನು ಸಿದ್ದಪಡಿಸಿಲು ಸ್ಥಳ ವೀಕ್ಷಣೆಯನ್ನು ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಪೂರ್ವವಲಯ ಐಜಿಪಿ ರಮೇಶ್‌ಬಾನೋತ್, ಜಿಲ್ಲಾ ರಕ್ಷಣಾಧಿಕಾರಿ ರಂಜಿತ್‌ಕುಮಾರ್ ಬಂಡಾರು, ಡಿವೈಎಸ್ಪಿ ಟಿ.ಬಿ.ರಾಜಣ್ಣ, ತಹಶೀಲ್ದಾರ್ (Daughter marriage) ರೇಹಾನ್‌ಪಾಷ, ಲೋಕೋಪಯೋಗಿ ಎಇಇ ವಿಜಯಭಾಸ್ಕರ್ ವೀಕ್ಷಿಸಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252