Chitradurga news|nammajana.com|12-12-2024
ನಮ್ಮಜನ.ಕಾಂ, ಚಿತ್ರದುರ್ಗ: ರೈಲ್ವೆ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಬಾಕಿ ಇರುವ (DC) ಪ್ರಕರಣಗಳನ್ನು ಲೋಕ್ ಅದಾಲತ್‍ನಲ್ಲಿ ಇತ್ಯರ್ಥ ಪಡಿಸುವ ಪ್ರಕರಣಗಳನ್ನು ನಿಯಾಮಾನುಸಾರ ಇತ್ಯರ್ಥಪಡಿಸಲು ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ರೈಲ್ವೆ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಲೋಕಾ ಅದಾಲತ್‍ನಲ್ಲಿ (DC) ಇತ್ಯರ್ಥಪಡಿಸುವ ಬಗ್ಗೆ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲ್ವೆ ಯೋಜನೆಗೆ ಸಂಬಂಧಿಸಿದಂತೆ ಬಾಕಿ ಇರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಶೀಘ್ರದಲ್ಲಿ ಪೂರ್ಣಗೊಳಿಸಿ, ಕಾಮಗಾರಿ ಪ್ರಾರಂಭಿಸಬೇಕು. (DC) ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮುಂದಿನ ಲೋಕ್ ಅದಾಲತ್‍ನಲ್ಲಿ ಇತ್ಯರ್ಥಪಡಿಸಲು ಕ್ರಮವಹಿಸಬೇಕು ಎಂದು ತಿಳಿಸಿದರು.
ಇದನ್ನೂ ಓದಿ: ಮಾಜಿ ಸಿಎಂ ನಿಜಲಿಂಗಪ್ಪ ಮನೆ ಖರೀದಿ ಮಾಡಿದ ಸರ್ಕಾರ | Nijalingappa house
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲ್ವೆ ಮಾರ್ಗದ ವಿಭಾಗೀಯ ಅಭಿಯಂತರ ರಜತ್ ತೆನಿಯಾ, ವಿಶೇಷ ಭೂಸ್ವಾಧೀನಾಧಿಕಾರಿ ವೆಂಕಟೇಶ್ ನಾಯ್ಕ್ ಸೇರಿದಂತೆ ಮತ್ತಿತರರು ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252