Chitradurga news|nammajana.com|30-9-2024
ನಮ್ಮಜನ.ಕಾಂ, ಚಿತ್ರದುರ್ಗ: ತೋಟಗಾರಿಕೆ ಇಲಾಖೆಯಡಿ ಚಿತ್ರದುರ್ಗ ತಾಲ್ಲೂಕಿನ ರೈತರಿಗೆ 2024-25ನೇ ಸಾಲಿಗೆ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದ್ದು, ಯೋಜನೆಗಳಲ್ಲಿ ಸಹಾಯಧನ ಪಡೆಯಲು ಅರ್ಹ ರೈತರಿಂದ ಅರ್ಜಿ (Department of Horticulture) ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅ.15 ಕೊನೆಯ ದಿನವಾಗಿದೆ.
ತೋಟಗಾರಿಕೆ ಇಲಾಖೆಯಡಿ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಮಿಷನ್ (ರಾಷ್ಟ್ರೀಯ ತೋಟಗಾರಿಕೆ ಮಿಷನ್), ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ (ಹನಿ ನೀರಾವರಿ ಯೋಜನೆ), (Department of Horticulture) ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ, ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಗಳಿಗೆ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು.
ಈ ಮೇಲ್ಕಂಡ ಯೋಜನೆಗಳಿಗೆ ಆಯಾ ಯೋಜನೆಗಳಲ್ಲಿ ನಿಗಧಿಪಡಿಸಿದ ಮಾರ್ಗಸೂಚಿಯಂತೆ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು. ಎಲ್ಲಾ ಯೋಜನೆಗಳಿಗೆ ಈ ಹಿಂದೆ ಇಲಾಖೆಯಿಂದ ಸಹಾಯಧನ ಪಡೆಯದೇ ಇರುವ (Department of Horticulture) ಫಲಾನುಭವಿಗಳಿಗೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅತೀ ಸಣ್ಣ ರೈತರಿಗೆ, ಮಹಿಳೆಯರಿಗೆ, ಅಂಗವಿಕಲರಿಗೆ ಆದ್ಯತೆ ನೀಡಲಾಗುವುದು.
ಅರ್ಜಿ ನಮೂನೆ, ಯೋಜನೆಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ತಾಲ್ಲೂಕು ತೋಟಗಾರಿಕೆ ಇಲಾಖೆಯನ್ನು (Department of Horticulture) ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.