Chitradurga news | nammajana.com | 20-8-2024
ನಮ್ಮಜನ.ಕಾಂ, ಚಿತ್ರದುರ್ಗ: ನಗರದ ತರಾಸು ರಂಗಮಂದಿರದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ, ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 109ನೇ (Devaraja Arasu Jayanti) ಜನ್ಮದಿನಾಚರಣೆ ಕಾರ್ಯಕ್ರಮ ಅಂಗವಾಗಿ ಚಿತ್ರದುರ್ಗ ನಗರದಲ್ಲಿ ಭವ್ಯ ಮೆರವಣಿಗೆ ಜರುಗಿತು.

ಅದ್ದೂರಿ ಮೆರವಣಿಗೆ : ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ದೇವರಾಜು ಅರಸು ಭಾವಚಿತ್ರದ ಅದ್ದೂರಿ ಮೆರವಣಿಗೆ ನಡೆಸಲಾಯಿತು. ನಗರದ ನೀಲಕಂಠೇಶ್ವರ ದೇವಸ್ಥಾನದ ಬಳಿ ಹಿಂದುಳಿದ ವರ್ಗಗಳ (Devaraja Arasu Jayanti) ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಡಾ.ಆರ್.ಸುಬ್ರಾನಾಯಕ್ ಮೆರವಣಿಗೆಗೆ ಚಾಲನೆ ನೀಡಿದರು.
ಇದನ್ನೂ ಓದಿ: ಚಿತ್ರದುರ್ಗ | ಕೋಟೆ ನಾಡಿನಲ್ಲಿ ವರುಣನ ಆರ್ಭಟ | ತಾಲೂಕುವಾರು ಮಳೆ ವಿವರ | Chitradurga Rain
ನಗರದ ದೇವರಾಜು ಅರಸು ಹಿಂದುಳಿದ ವಿದ್ಯಾರ್ಥಿನಿಲಯಗಳಿಂದ ಆಗಮಿಸಿದ ಸಾವಿರಾರು ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಪಾಲ್ಗೊಂಡು ಕುಣಿದು (Devaraja Arasu Jayanti) ಕುಪ್ಪಳಿಸಿದರು. ಮೆರವಣಿಗೆ ಗಾಂಧಿ ವೃತ್ತ, ಎಸ್.ಬಿ.ಐ ವೃತ್ತ, ಅಂಬೇಡ್ಕರ್ ವೃತ್ತದ ಮೂಲಕ ತರಾಸು ರಂಗಮಂದಿರ ತಲುಪಿತು
ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್‍ಪೀರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ.ಕುಮಾರಸ್ವಾಮಿ, ಜಿ.ಪಂ.ಉಪಕಾರ್ಯದರ್ಶಿ ತಿಮ್ಮಪ್ಪ, ಗ್ಯಾರಂಟಿ ಯೋಜನೆ ಅನುಷ್ಠಾನದ ಜಿಲ್ಲಾ ಸಮಿತಿ ಅಧ್ಯಕ್ಷ ಶಿವಣ್ಣ, ಆಹಾರ ಇಲಾಖೆ ಜಂಟಿ ನಿರ್ದೇಶಕ ಕೆ.ಸಿ.ಮಧುಸೂಧನ್, ಡಿವೈಎಸ್‍ಪಿ ದಿನಕರ್ ಸೇರಿದಂತೆ ಮತ್ತಿತರರು ಇದ್ದರು.
