
Chitradurga news|nammajana.com|5-7-2024
ನಮ್ಮಜನ.ಕಾಂ, ಚಿತ್ರದುರ್ಗ: 2024-25 ನೇ ಶೈಕ್ಷಣಿಕ ಸಾಲಿಗೆ ಹಿರಿಯೂರಿನ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಆನ್‍ಲೈನ್ ಮೂಲಕ ಸೀಟು ಹಂಚಿಕೆಯಾದ ನಂತರ ಭರ್ತಿಯಾಗದೇ (Diploma Admission) ಉಳಿದಿರುವ ಸೀಟುಗಳನ್ನು ಪ್ರಾಂಶುಪಾಲರ ಹಂತದಲ್ಲಿ ಆಫ್‍ಲೈನ್ ಮೂಲಕ ಪ್ರಥಮ ಸೆಮಿಸ್ಟರ್ ಅಥವಾ ಲ್ಯಾಟರಲ್ ಎಂಟ್ರಿ 3ನೇ ಸೆಮಿಸ್ಟರ್‍ಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಜುಲೈ 15ರವರೆಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಿಸಲಾಗಿದೆ.
ಪ್ರವೇಶಾತಿಗೆ ಸಲ್ಲಿಸಬೇಕಾದ ದಾಖಲೆಗಳು: ಪ್ರವೇಶಾತಿ ಬಯಸುವ ಅರ್ಹ ಅಭ್ಯರ್ಥಿಗಳು ಮೂಲ ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಮೂಲ ವರ್ಗಾವಣೆ ಪತ್ರ, ಜಾತಿ ಮತ್ತು ಆದಾಯ (Diploma Admission) ಪ್ರಮಾಣ ಪತ್ರ, ಕನ್ನಡ ಮಾಧ್ಯಮ ಹಾಗೂ ಗ್ರಾಮೀಣ ಮಾಧ್ಯಮ ಪ್ರಮಾಣ ಪತ್ರ ಮತ್ತು ವ್ಯಾಸಂಗ ದೃಢೀಕರಣ ಪತ್ರದೊಂದಿಗೆ ಸಂಸ್ಥೆಗೆ ಹಾಜರಾಗಿ ಪ್ರವೇಶ ಪಡೆಯಲು ಸೂಚಿಸಿದೆ.

ಇದನ್ನೂ ಓದಿ: ಚಂದ್ರವಳ್ಳಿಕೆರೆ ಪ್ರದೇಶ ಅಭಿವೃದ್ದಿಗೆ 3.75 ಕೋಟಿ ಅನುದಾನ | Chandravalli lake
ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಕಚೇರಿಯ ದೂರವಾಣಿ ಸಂಖ್ಯೆ 9900337587, 9482787542 ಗೆ ಸಂಪರ್ಕಿಸಬಹುದು (Diploma Admission) ಎಂದು ಹಿರಿಯೂರು ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯ ಪ್ರಾಂಶುಪಾಲರು ತಿಳಿಸಿದ್ದಾರೆ.
==========