Chitradurga news|nammajana.com|18-05-2025
ನಮ್ಮಜನ.ಕಾಂ, ಚಿತ್ರದುರ್ಗ: ದಾವಣಗೆರೆ-ಚಿತ್ರದುರ್ಗ (Direct train line) ತುಮಕೂರು ನೇರ ರೈಲ್ವೆ ಯೋಜನೆಯನ್ನು 2027ರ ಡಿಸೆಂಬರ್ ಅಂತ್ಯಕ್ಕೆ ಪೂರ್ಣಗೊಳಿಸಿ, ಲೋಕಾರ್ಪಣೆಗೊಳಿಸಲಾ ಗುವುದು ಎಂದು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ನೇರ ರೈಲು ಮಾರ್ಗದ ಮಾರ್ಗದ ಕಾಮಗಾರಿಯ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಳೆದ 20 ರಿಂದ 30 ವರ್ಷಗಳವರೆಗೆ ದೇಶದಲ್ಲಿ ನೆನೆಗುದಿಗೆ ಬಿದ್ದ 7.25 ಲಕ್ಷ ಯೋಜನೆಗಳಿದ್ದವು. ಇವುಗಳ ಕೈಗೆತ್ತಿಕೊಂಡು ಕೈಗೆತ್ತಿಕೊಂಡು ಪೂರ್ಣಗೊಳಿಸುತ್ತಿದ್ದೇವೆ. 33 ಸಾವಿರ ಕೋಟಿ ರು. ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಹೇಳಿದರು.

ಪ್ರತಿಷ್ಟಿತ ರಾಯದುರ್ಗ-ತುಮಕೂರು ಯೋಜನೆಯು ಕೂಡ ಈಗಾಗಲೇ ಭೂಸ್ವಾಧೀನ ಪ್ರಕ್ರಿಯೆ ಮುಕ್ತಾಯವಾಗಿ (Direct train line) ಟೆಂಡರ್‌ಕರೆಯಲಾಗಿದೆ. ಇನ್ನೂ ಎರಡು ಕಡೆ ಶೀಘ್ರದಲ್ಲಿ ಕೆಲಸ ಪ್ರಾರಂಭವಾಗಲಿದೆ. ಅದೇ ರೀತಿ ತುಮಕೂರು-ಚಿ ಇದುರ್ಗ-ದಾವಣಗೆರೆ ನೇರ ರೈಲ್ವೆ ಯೋಜನೆಯ ಸಮಸ್ಯೆಯನ್ನು ಬಗೆಹರಿಸಿ, ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ, ಶೀಘ್ರವಾಗಿ ಕಾಮಗಾರಿ ಅನುಷ್ಠಾನಗೊಳಿಸಲಾಗುವುದು ಎಂದರು.
ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಹಾಗೂ ಸಂಸದ ಗೋವಿಂದ ಕಾರಜೋಳ ಅವರು ನಗರದ ತುರುವನೂರು ರಸ್ತೆ ಹಾಗೂ ಮೆದೆಹಳ್ಳಿ ರಸ್ತೆಯಲ್ಲಿನ ರೈಲ್ವೆ ಕೆಳಸೇತುವೆಯಲ್ಲಿ ಉಂಟಾಗಿರುವ ತೀವ್ರ ಸಮಸ್ಯೆಯ ಬಗ್ಗೆ ಫೋಟೋ ಸಹಿತ ಸಚಿವರಿಗೆ ಮಾಹಿತಿ ನೀಡಿದರು.
ಜಿಲ್ಲೆಯಲ್ಲಿರುವ ಬಹಳಷ್ಟು ರೈಲ್ವೆ ಕೆಳ ಸೇತುವೆಗಳು ಅವೈಜ್ಞಾನಿಕವಾಗಿ ನಿರ್ಮಾಣವಾಗಿದ್ದು, ಇದರಿಂದ ಮಳೆಗಾಲದಲ್ಲಿ ತೀವ್ರ ತೊಂದರೆಯಾಗುತ್ತಿದೆ. ಹೆಚ್ಚಿನ ಪ್ರಮಾಣದಲ್ಲಿ ಮಳೆ ನೀರು ನಿಂತು ಸಾರ್ವಜನಿಕರ ಸಂಚಾರಕ್ಕೆ ಹಾಗೂ ಅಪಾಯಕ್ಕೂ ಕಾರಣವಾಗುತ್ತಿದೆ ಎಂದರು.
ಇದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿದ ಸಚಿವ ವಿ. ಸೋಮಣ್ಣ, ಕಳೆದ ಬಾರಿ ಜಿಲ್ಲೆಗೆ ಬಂದಾಗಲೇ ಈ ಕುರಿತು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೆ, ಆದರೆ ರೈಲ್ವೆ ಇಲಾಖೆ (Direct train line) ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ, ಸಮಸ್ಯೆ ಬಗೆಹರಿದಿಲ್ಲ. ಚಿತ್ರದುರ್ಗ ನಗರದ ಸೇರಿದಂತೆ ಜಿಲ್ಲೆಯಾದ್ಯಂತ ಇರುವ ರೈಲ್ವೆ ಕೆಳ ಸೇತುವೆಗಳಲ್ಲಿ ಮಳೆ ನೀರು ಶೇಖರಣೆಯಾಗದಂತೆ ಸೂಕ್ತ ಪರಿಹಾರ ಕ್ರಮಕೈಗೊಳ್ಳಬೇಕು.
ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿರುವ ಎಲ್ಲ ರೈಲ್ವೆ ಕೆಳ ಸೇತುವೆಗಳ ಬಗ್ಗೆ ರೈಲ್ವೆ ಅಧಿಕಾರಿಗಳು ಖುದ್ದು ಭೇಟಿ ನೀಡಿ, ಅಲ್ಲಿನ ವಸ್ತು ಸ್ಥಿತಿ ಬಗ್ಗೆ ಹಾಗೂ ಸಮಸ್ಯೆಗಳಿದ್ದಲ್ಲಿ, ಅದರ ನಿವಾರಣೆಗೆ ಕೈಗೊಳ್ಳಬೇಕಾದ ಕಾರ್ಯಗಳ ಬಗ್ಗೆ ಸಮಗ್ರ ವರದಿ ಸಲ್ಲಿಸಬೇಕು ರೈಲ್ವೆ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ದಾವಣಗೆರೆ-ಚಿತ್ರದುರ್ಗ ತುಮಕೂರು ನೇರ ರೈಲ್ವೆ ಮಾರ್ಗದಲ್ಲಿ ಈಗಾಗಲೆ ಶೇ.90ರಷ್ಟು ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದೆ. ಆದರೆ ಇನ್ನೂ ಕೆಲವೆಡೆ ಭೂಸ್ವಾಧೀನ ಪ್ರಕ್ರಿಯೆ ನಾನಾ ಕಾರಣಗಳಿಂದಾಗಿ ಬಾಕಿ ಉಳಿದಿದೆ. ಬಾಕಿ ಉಳಿದಿರುವ ಎಲ್ಲ ಭೂಸ್ವಾಧೀನ ಕಾರ್ಯದ ಪ್ರಕ್ರಿಯೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ, ರೈಲ್ವೆ ಇಲಾಖೆಗೆ ಭೂಮಿ ಹಸ್ತಾಂತರಿಸಿದಲ್ಲಿ ಕಾಮಗಾರಿ ಕೈಗೊಳ್ಳಲು ಅನುಕೂಲವಾಗಲಿದೆ ಎಂದರು.
ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿ, ಈ ಮಾರ್ಗದಲ್ಲಿ ಚಿತ್ರದುರ್ಗ ಹಾಗೂ ಹಿರಿಯೂರು ತಾಲೂಕು ಸೇರಿ 1,211 ಎಕರೆ ಜಮೀನಿನ ಅವಶ್ಯಕತೆ ಇದ್ದು, ಈ ಪೈಕಿ 1,026 ಎಕರೆ ಜಮೀನು ಅವಾರ್ಡ್ ಆಗಿ, ಜಮೀನು ಮಾಲೀಕರಿಗೆ ಪರಿಹಾರ ವಿತರಿಸಲಾಗಿದೆ. ಭರಮಸಾಗರ-ಚಿತ್ರದುರ್ಗ ಮಾರ್ಗದವರೆಗಿನ 36 ಕಿಮೀ ವ್ಯಾಪ್ತಿಯಲ್ಲಿ 348 ಎಕರೆ ಪೈಕಿ 312 ಎಕರೆ ಈಗಾಗಲೆ ರೈಲ್ವೆ ಇಲಾಖೆಗೆ ಹಸ್ತಾಂತರಿಸಿದ್ದು, ರೈಲ್ವೆ ಕಾಮಗಾರಿ ನಡೆದಿದೆ. ಹೆಚ್ಚುವರಿಯಾಗಿ 41 ಎಕರೆ ಭೂಮಿಗೆ ರೈಲ್ವೆ ಇಲಾಖೆ ಬೇಡಿಕೆ ಸಲ್ಲಿಸಿದ್ದು, ಸ್ವಾಧೀನ ಪ್ರಕ್ರಿಯೆ ಪ್ರಾರಂಬಿಸಲಾಗಿದೆ ಎಂದು (Direct train line) ಹೇಳಿದರು.
ದಾವಣಗೆರೆ-ತುಮಕೂರು ನೇರ ರೈಲ್ವೆ ಮಾರ್ಗ ನಿರ್ಮಾಣವಾಗುತ್ತಿದ್ದು, ಈ ಮಾರ್ಗದಲ್ಲಿ ಬರುವ ಶಿರಾ ಬಳಿ ಅಥವಾ ಈ ಮಾರ್ಗದಲ್ಲಿ ರೈಲ್ವೆ ಇಲಾಖೆ ನಿರ್ಧರಿಸುವ ಯಾವುದೇ ಸ್ಥಳದಲ್ಲಿ ರೈಲ್ವೆ ಕಾರ್ಗೋ ಕಾರಿಡಾರ್‌ನಿರ್ಮಾಣ ಮಾಡುವಂತೆ ಸಿರಾ ಶಾಸಕ ಹಾಗೂ ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಅವರು ರೈಲ್ವೆ ಸಚಿವ ವಿ. ಸೋಮಣ್ಣ ಅವರಿಗೆ ಮನವಿ ಮಾಡಿದರು.
ಶಾಸಕ ಡಾ.ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ರೈಲ್ವೆ ಇಲಾಖೆ ಮುಖ್ಯ ಆಡಳಿತಾಧಿಕಾರಿ (ನಿರ್ಮಾಣ) ಅಜಯ್ ಶರ್ಮಾ, ವಿಭಾಗೀಯ ರೈಲ್ವೆ ವ್ಯವಸ್ಥಾಪಕ (ಡಿಜಿಎಂ) ಮುದಿತ್ ಮಿತ್ತಲ್, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಪಂ ಸಿಇಒ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾ ರಸ್ವಾಮಿ, ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನಿ ಖುರೇಷಿ, ನೇರ ರೈಲ್ವೆ ಯೋಜನೆ ವಿಶೇಷ ಭೂಸ್ವಾಧೀನಾಧಿಕಾರಿ ವೆಂಕಟೇಶ್, ಸೇರಿದಂತ ರೈಲ್ವೆ ಇಲಾಖೆ ಅಧಿಕಾರಿಗಳು ಇದ್ದರು.
ಬಾಕ್ಸ್
ಹಿರಿಯೂರು-ಚಳ್ಳಕೆರೆ ರೈಲ್ವೆ ಮಾರ್ಗ
ಚಳ್ಳಕೆರೆಯಿಂದ ಹಿರಿಯೂರಿಗೆ ಹೊಸದಾಗಿ ರೈಲ್ವೆ ಸಂಪರ್ಕ ಕಲ್ಪಿಸಿ. ಹೊಸ ರೈಲ್ವೆ ಮಾರ್ಗ ಯೋಜನೆ ರೂಪಿಸಿ ಅನುಷ್ಠಾನಗೊಳಿಸಬೇಕು, ಇದರಿಂದಾಗಿ ಉತ್ತರ ಕರ್ನಾಟಕದಿಂದ ಬೆಂಗಳೂರು ಮಾರ್ಗಕ್ಕೆ ನೇರ ರೈಲ್ವೆ ಮಾರ್ಗ ಕಲ್ಪಿಸಿದಂತಾಗುತ್ತದೆ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್‌ಹಾಗೂ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ (Direct train line) ಅವರು ಬೇಡಿಕೆ ಸಲ್ಲಿಸಿದ್ದು, ಈ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ, ಸರ್ವೇ ಮಾಡಿಸಿ, ಸೂಕ್ತ ಕ್ರಮ ವಹಿಸಲಾಗುವುದು ಎಂದು ಸಚಿವ ವಿ.ಸೋಮಣ್ಣ ಭರವಸೆ ನೀಡಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252