Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಪೊರಕೆ ಹಿಡಿದು ಕಸ ಗುಡಿಸಿದ ಜಿಲ್ಲಾ ನ್ಯಾಯಾಧೀಶ | District Magistrate
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಪೊರಕೆ ಹಿಡಿದು ಕಸ ಗುಡಿಸಿದ ಜಿಲ್ಲಾ ನ್ಯಾಯಾಧೀಶ | District Magistrate
ಇಂದಿನ ಸುದ್ದಿ

ಪೊರಕೆ ಹಿಡಿದು ಕಸ ಗುಡಿಸಿದ ಜಿಲ್ಲಾ ನ್ಯಾಯಾಧೀಶ | District Magistrate

Editor Nammajana
Last updated: 23 September 2024 04:18
By Editor Nammajana 2 Min Read
Share
SHARE

Chitradurga news|nammajana.com|23-9-2024

ನಮ್ಮಜನ.ಕಾಂ, ಚಿತ್ರದುರ್ಗ: ಪರಿಸರ ಸ್ವಚ್ಛವಿದ್ದಾಗ ಮಾತ್ರ ನಮ್ಮ ಸುತ್ತಮುತ್ತಲಿನ ಸಮಾಜ ಸುಂದರವಾಗಿರುತ್ತದೆ. ಜತೆಗೆ ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾಗಲಿದೆ. ಸ್ವಚ್ಛತೆ (District Magistrate) ಕುರಿತು ಸಾರ್ವಜನಿಕರಿಗೆ ಜಾಗೃತಿ ಅವಶ್ಯ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ರೋಣ ವಾಸುದೇವ್ ಹೇಳಿದರು.

ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಭಾನುವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಜಿಲ್ಲಾ ನ್ಯಾಯಾಂಗ ಇಲಾಖೆ, ನಗರಸಭೆ ಸಹಯೋಗದಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಹಸಿ ಕಸ, ಒಣ ಕಸ ಪ್ರತ್ಯೇಕಿಸಿ ನೀಡುವಂತೆ ನಗರಸಭೆಯವರು ಸಾಕಷ್ಟು ಬಾರಿ ತಿಳಿ ಹೇಳಿದರೂ ಸಾರ್ವಜನಿಕರಿಗೂ ನಿರ್ಲಕ್ಷೆ ವಹಿಸುತ್ತಾರೆ. ಹಸಿ ಕಸ ಮತ್ತು ಒಣ ಕಸ ಕೂಡಿಸಿ (District Magistrate) ಕೊಡುವುದರಿಂದ ಅವುಗಳನ್ನು ಪ್ರತ್ಯೇಕಿಸುವುದು, ವಿಲೇವಾರಿ ಮಾಡುವುದು ಕಷ್ಟವಾಗಲಿದೆ. ಹಾಗಾಗಿ ಸಾರ್ವಜನಿಕರು ಹಸಿ ಕಸ, ಒಣ ಕಸವನ್ನು ಪ್ರತ್ಯೇಕಿಸಿ ಕಸದ ವಾಹನಗಳಿಗೆ ನೀಡಬೇಕು ಎಂದು ಕಿವಿಮಾತು ಹೇಳಿದರು.
ಪರಿಸರ ಸ್ವಚ್ಛ ಮಾಡುವುದರ ಜತೆಗೆ ನಮ್ಮ ಮನಸ್ಸನ್ನು ಕೂಡ ಸ್ವಚ್ಛಗೊಳಿಸಬೇಕು. ಪ್ರತಿಯೊಬ್ಬರು ಸ್ವಚ್ಛತೆ ಹಾಗೂ ಪರಿಸರ ಕಾಳಜಿ ವಹಿಸಬೇಕು. ಆ ಮೂಲಕ ಕಸಮುಕ್ತ ಸುಂದರ ಚಿತ್ರದುರ್ಗ ನಗರ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಹೇಳಿದರು.
ಚಿತ್ರದುರ್ಗ ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ಮಾತನಾಡಿ, ಜನರಲ್ಲಿ ನೈರ್ಮಲ್ಯ, ಶುಚಿತ್ವ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಗಾಂಧಿ ಜಯಂತಿಯ ಅಂಗವಾಗಿ ಈಗಾಗಲೇ ಸೆ.14 ರಿಂದ “ಸ್ವಚ್ಛತಾ ಹೀ ಸೇವಾ ಪಾಕ್ಷಿಕ” (District Magistrate) ಅಭಿಯಾನ ಪ್ರಾರಂಭವಾಗಿದ್ದು, ಅ.02 ರವರೆಗೆ ನಡೆಯಲಿದೆ. 15 ದಿನಗಳ ಕಾಲ ನಡೆಯುವ ಸ್ವಚ್ಛತಾ ಆಂದೋಲನದಲ್ಲಿ ಚಿತ್ರದುರ್ಗ ನಗರ ವ್ಯಾಪ್ತಿಯಲ್ಲಿ ಒಟ್ಟು 140ಕ್ಕೂ ಹೆಚ್ಚು ಸ್ವಚ್ಛತಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಸ್ವಚ್ಛತಾ ಹೀ ಸೇವಾ ಅಭಿಯಾನದ ಅಂಗವಾಗಿ ಪ್ರತಿನಿತ್ಯವೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯ, ಸ್ವಚ್ಛತೆ ಕುರಿತು ಅರಿವು ಮೂಡಿಸಲಾಗುತ್ತಿದೆ. ಈಗಾಗಲೇ ಉದ್ಯಾನವನಗಳ ಸ್ವಚ್ಛತೆ, ಕಲ್ಯಾಣಿಗಳ ಸ್ವಚ್ಛತೆ ಮಾಡಲಾಗುತ್ತಿದೆ ಎಂದು ಹೇಳಿದರು.

ಸ್ವಚ್ಛತಾ ಕಾರ್ಯ:

ಸ್ವಚ್ಛತಾ ಹೀ ಸೇವಾ ಅಭಿಯಾನದ ಅಂಗವಾಗಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನ್ಯಾಯಾಧೀಶರು, ಸಿಬ್ಬಂದಿಗಳು, ವಕೀಲರು ಹಾಗೂ ನಗರಸಭೆಯ ಪೌರಾಯುಕ್ತರು, ಪೌರಕಾರ್ಮಿಕರು ಪೊರಕೆ ಹಿಡಿದು ನ್ಯಾಯಾಲಯದ (District Magistrate) ಸಂಕಿರ್ಣದಲ್ಲಿ ಸ್ವಚ್ಛತಾ ಕಾರ್ಯಕ್ರಮ ನೆರವೇರಿಸಿದರು. ಇದೇ ಸಂದರ್ಭದಲ್ಲಿ ಜಿಲ್ಲಾ ನ್ಯಾಯಾಧೀಶರಾದ ರೋಣ ವಾಸುದೇವ್ ಅವರು ಸ್ವಚ್ಛತೆಯ ಪ್ರತಿಜ್ಞಾವಿಧಿ ಬೋಧಿಸಿದರು.
ಇದನ್ನೂ ಓದಿ: Kannada Dina Bhavishya: ಇಂದಿನ ದಿನ ಭವಿಷ್ಯ | ಯಾರಿಗೆಲ್ಲ ಸರ್ಕಾರಿ ಉದ್ಯೋಗ ಯೋಗ, ವ್ಯಾಪರದಲ್ಲಿ ಲಾಭ?
ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್, ವಕೀಲರ ಸಂಘದ ಅಧ್ಯಕ್ಷ ವೈ.ತಿಪ್ಪೇಸ್ವಾಮಿ ಸೇರಿದಂತೆ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ನ್ಯಾಯಾಂಗ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಇದ್ದರು.
ಫೋಟೋ ವಿವರ: ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಭಾನುವಾರ ಸ್ವಚ್ಛತಾ ಹೀ ಸೇವಾ ಅಭಿಯಾನದ ಅಂಗವಾಗಿ ನ್ಯಾಯಾಧೀಶರಿಂದ ಸ್ವಚ್ಛತಾ ಕಾರ್ಯ ನಡೆಯಿತು.

You Might Also Like

Dina Bhavishya | ದಿನ ಭವಿಷ್ಯ, ಇವತ್ತು ಯಾವ ರಾಶಿಗೆ ಶುಭ?

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

TAGGED:Bar AssociationChitradurgaChitradurga NewsDistrict Judicial DepartmentDistrict MagistrateKannada Newskannada suddiMunicipal Council CollaborationNammajana.comSwachhata Hee Seva Abhiyanಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜಿಲ್ಲಾ ನ್ಯಾಯಾಂಗ ಇಲಾಖೆಜಿಲ್ಲಾ ಮ್ಯಾಜಿಸ್ಟ್ರೇಟ್ನಗರಸಭೆ ಸಹಯೋಗನಮ್ಮಜನ.ಕಾಂವಕೀಲರ ಸಂಘಸ್ವಚ್ಛತಾ ಹೀ ಸೇವಾ ಅಭಿಯಾನ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Kannada Dina Bhavishya: ಇಂದಿನ ದಿನ ಭವಿಷ್ಯ | ಯಾರಿಗೆಲ್ಲ ಸರ್ಕಾರಿ ಉದ್ಯೋಗ ಯೋಗ, ವ್ಯಾಪರದಲ್ಲಿ ಲಾಭ?
Next Article ಚಿತ್ರದುರ್ಗಕ್ಕಿಂದು ಬಿ.ವೈ.ವಿಜಯೇಂದ್ರ | B. Y. Vijayendra
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?