
Chitradurga news|nammajana.com|29-7-2024
ನಮ್ಮಜನ.ಕಾಂ, ಚಿತ್ರದುರ್ಗ: ರೋಗಿಯ ಬಳಿ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗಾಗಿ ನಾಲ್ಕು ಸಾವಿರ ಲಂಚ ಪಡೆದಿದ್ದ ಆರೋಪದಲ್ಲಿ ಚಿತ್ರದುರ್ಗ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಜಿಲ್ಲಾ ಸರ್ಜನ್ ಡಾ.ಸಾಲಿ ಮಂಜಪ್ಪ ಅವರನ್ನು (Doctor Suspended) ಅಮಾನತುಗೊಳಿಸಿ, ರಾಜ್ಯ ಆರೋಗ್ಯ ಇಲಾಖೆ ಜುಲೈ 28ರಂದು ಆದೇಶ ಹೊರಡಿಸಿದೆ.
ಚಿತ್ರದುರ್ಗ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಇದಕ್ಕೆ ಸಾಕ್ಷಿ ಎಂಬಂತೆ ಜಿಲ್ಲಾ ಆಸ್ಪತ್ರೆಯ (Doctor Suspended) ಸರ್ ಜಾನ ಲಂಚ ಪಡೆದಿರುವ ವಿಡಿಯೋ ವೈರಲ್ ಆಗಿತ್ತು.

ಜಿಲ್ಲಾ ಸರ್ಜನ್ ಡಾ. ಸಾಲಿ ಮಂಜಪ್ಪ ಅವರು ರೋಗಿಯ ಸಂಬಂಧಿ ಬಳಿ 6 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಕೊನೆಗೆ 4 ಸಾವಿರ ಹಣ ಪಡೆದಿದ್ದಾರೆ. ಲಂಚ ಪಡೆಯುತ್ತಿರುವ (Doctor Suspended) ದೃಶ್ಯವನ್ನು ರೋಗಿಯ ಸಂಬಂಧಿ ತಮ್ಮ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದರು. ಅದು ಸೋಷಿಯಲ್ ಮೀಡಿಯಾಗಳಲ್ಲಿ ವೈರಲದ ಮಾಡಲಾಗಿದ್ದು ಬಳಿಕ ರಾಜ್ಯ ಆರೋಗ್ಯ ಇಲಾಖೆಯು ಜುಲೈ 28ರಂದು ಸೇವೆಯಿಂದ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದೆ.
ಇದನ್ನೂ ಓದಿ: Land Acquisition: ಭೂಸ್ವಾಧೀನ ಪರಿಹಾರ ವಿತರಣೆಯಲ್ಲಿ ಅಕ್ರಮ, FIR ದಾಖಲಿಸಿ: ಡಿ.ಸುಧಾಕರ್
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರಾದ ಡಿ.ರಂದೀಪ್ ಈ ಆದೇಶ (Doctor Suspended) ಹೊರಡಿಸಿದ್ದು, ಕರ್ನಾಟಕ ಲೋಕಾಯುಕ್ತ ಕಾಯ್ದೆ ಅನ್ವಯ ಭ್ರಷ್ಟಾಚಾರದಲ್ಲಿ ಆರೋಪ ಮೇಲ್ನೋಟಕ್ಕೆ ಸಾಬೀತಾಗಿರುವ ಕಾರಣ ಡಾ.ಸಾಲಿ ಮಂಜಪ್ಪ ಅವರನ್ನು ಸೇವೆಯಿಂದ ಅಮಾನತು ಮಾಡಿ ಆದೇಶಿಸಿದ್ದಾರೆ.
ಇದನ್ನೂ ಓದಿ: Child is pregnant: ಚಿತ್ರದುರ್ಗದಲ್ಲಿ 164 ಬಾಲ ಗರ್ಭಿಣಿ ಪ್ರಕರಣ, ತಕ್ಷಣ FIR ದಾಖಲಿಸಿ: ಡಾ.ಕೆ.ಟಿ.ತಿಪ್ಪೇಸ್ವಾಮಿ ಸೂಚನೆ
ಅಮಾನತಿನ ಅವಧಿಯಲ್ಲಿ ಜೀವನಾಂಶ ಭತ್ಯಗೆ ಅರ್ಹರಾಗಿದ್ದು,Doctor Suspended) ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಕೇಂದ್ರ ಸ್ಥಾನ ( ಬಿಡಬಾರದು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಅಮಾನತ್ತಿನ ಅವಧಿಯಲ್ಲಿ ಆರೋಪಿ ವೈದ್ಯರು ನಿಯಮಾನುಸಾರ ಜೀವನಾಂಶ ಭತ್ಯೆಗೆ (Doctor Suspended) ಅರ್ಹರಾಗಿರುವುದರಿಂದ ಅವರನ್ನು ಶಿವಮೊಗ್ಗ ಜಿಲ್ಲೆಯ ಸೊರಬದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ.