Chitradurga News | Nammajana.com |15-09-2025
ನಮ್ಮಜನ ನ್ಯೂಸ್ ಕಾಂ,ಹೊಳಲ್ಕೆರೆ: ರಕ್ತದಾನ(blood)ದಿಂದ ಸಾವು-ಬದುಕಿನ ನಡುವೆ ಹೋರಾಟ ಮಾಡುವವರ ಜೀವ ಉಳಿಸಬಹುದು. ಹಾಗಾಗಿ ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿಯೂ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡುವಂತೆ ಶಾಸಕ ಡಾ.ಎಂ.ಚಂದ್ರಪ್ಪ ಜನತೆಯಲ್ಲಿ ಮನವಿ ಮಾಡಿದರು.

ಇದನ್ನೂ ಓದಿ: Democracy: ಭಾರತದಲ್ಲಿ ಪ್ರಜಾಪ್ರಭುತ್ವ ಶಕ್ತಿಶಾಲಿಯಾಗಿದೆ | ಶಾಸಕ ಡಾ.ಎಂ.ಚಂದ್ರಪ್ಪ
ಈದ್‍ಮಿಲಾದ್ ಹಬ್ಬದ ಪ್ರಯುಕ್ತ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಟ್ರಸ್ಟ್ ವತಿಯಿಂದ ಏರ್ಪಡಿಸಲಾಗಿದ್ದ ರಕ್ತದಾನ ಶಿಬಿರ ಉದ್ಗಾಟಿಸಿ ಮಾತನಾಡಿದರು.
ಮೇರು ವ್ಯಕ್ತಿತ್ವದ ಡಾ.ಎ.ಪಿ.ಜೆ.ಅಬ್ದುಲ್ ಕಲಾಂರವರು ಕ್ಷಿಪಣಿ ಕಂಡು ಹಿಡಿದು ಭಾರತಕ್ಕೆ ಬಹುದೊಡ್ಡ ಕೊಡುಗೆ ನೀಡಿದ್ದಾರೆ. ಅಂತಹ ವಿಜ್ಞಾನಿಯನ್ನು ಯಾರು ಗುರುತಿಸಲಿಲ್ಲ. ಅಟಲ್‍ಬಿಹಾರಿ ವಾಜಪೇಯಿರವರು ದೇಶದ ಪ್ರಧಾನಿಯಾಗಿದ್ದಾಗ ಅಬ್ದುಲ್ ಕಲಾಂರವರನ್ನು ದೇಶದ ರಾಷ್ಟ್ರಪತಿಯನ್ನಾಗಿ ಮಾಡುತ್ತಾರೆ.
ಅನೇಕ ತಾಪತ್ರೆ, ತೊಂದರೆ, ಸಮಸ್ಯೆಗಳನ್ನು ಎದುರಿಸಿದ ಅಬ್ದುಲ್ ಕಲಾಂರವರು ಭಾರತಕ್ಕೆ ದೊಡ್ಡ ಶಕ್ತಿಯನ್ನು ತುಂಬುತ್ತಾರೆ. ಅಂತಹ ಪುಣ್ಯಾತ್ಮನ ಹೆಸರಿನಲ್ಲಿ ರಕ್ತದಾನ ಮಾಡುತ್ತಿರುವುದು ಅತ್ಯಂತ ಶ್ರೇಷ್ಟವಾದುದು ಎಂದು ಶಾಸಕ ಡಾ.ಎಂ.ಚಂದ್ರಪ್ಪ ಮೆಚ್ಚುಗೆ ವ್ಯಕ್ತಪಡಿಸಿದರು.
ಇದನ್ನೂ ಓದಿ: Chitradurga today Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ
ಡಾ.ಎ.ಪಿ.ಜೆ.ಅಬ್ದುಲ್ ಕಲಾಂರವರನ್ನು(blood) ಜಾತಿ ಧರ್ಮ ನೋಡಿ ರಾಷ್ಟ್ರಪತಿಯನ್ನಾಗಿ ಮಾಡಲಿಲ್ಲ. ಅವರಲ್ಲಿರುವ ವ್ಯಕ್ತಿತ್ವ ನೋಡಿ ಅಟಲ್ ಬಿಹಾರಿ ವಾಜಪೇಯಿರವರು ಆಯ್ಕೆ ಮಾಡುತ್ತಾರೆ. ಅಂತಹ ಮಹನೀಯರ ದಾರಿಯಲ್ಲಿ ಎಲ್ಲರೂ ನಡೆಯೋಣ ಎಂದು ಹೇಳಿದರು.
ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ಸುಮಿತ್ರಕ್ಕ, ಪುರಸಭೆ ಸದಸ್ಯರುಗಳಾದ ಆರ್.ಎ.ಅಶೋಕ್, ಪಿ.ಹೆಚ್.ಮುರುಗೇಶ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
