Chitradurga News | Nammajana.com | 07-08-2025
ನಮ್ಮಜನ.ಕಾಂ, ಚಳ್ಳಕೆರೆ: ನಗರದ ಪಾವಗಡ(Dumping yard) ರಸ್ತೆಯ ರೈಲ್ವೆ ಗೇಟ್ ಬಳಿ ಡಂಪಿಂಗ್ ಯಾರ್ಡ್ ಸ್ಥಳಾಂತರ ಕುರಿತಂತೆ ಬಿಜೆಪಿ ಅಹೋರಾತ್ರಿ ಧರಣಿ ಹಮ್ಮಿಕೊಂಡಿದ್ದು, ಧರಣಿಯಲ್ಲಿ ಪಾಲ್ಗೊಂಡ ಅನೇಕ ಬಿಜೆಪಿ ಮುಖಂಡರು ಕ್ಷೇತ್ರದ ಶಾಸಕರ ಬಗ್ಗೆ ಸುಳ್ಳು ಆರೋಪ ಹೋರಿಸಿದ್ಧಾರೆ.
ಇದನ್ನೂ ಓದಿ: ಎಂ.ಇ.ಆರ್.ಸಿ ನಿಧಿಯಡಿ ಶಿಕ್ಷಣ, ಆರೋಗ್ಯ, ಮಹಿಳೆ ಮತ್ತು ದುರ್ಬಲ ವರ್ಗದವರ ಏಳಿಗೆಗೆ ಯೋಜನೆ ರೂಪಿಸಿ

ಕಳೆದ 12 ವರ್ಷಗಳ ಅವಧಿಯಲ್ಲಿ ಶಾಸಕರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭೂತಪೂರ್ವ ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಂಡು ರಾಜ್ಯಕ್ಕೆ ಮಾದರಿಯಾಗಿದ್ದು, ಅನಗತ್ಯವಾಗಿ ಅವರ ಹೆಸರನ್ನು ತಂದಿರುವುದು ನೋವಿನ ಸಂಗತಿ ಎಂದು ಬ್ಲಾಕ್‌ಕಾಂಗ್ರೆಸ್ ಅಧ್ಯಕ್ಷ ಕೆ.ವೀರಭದ್ರಪ್ಪ ತಿಳಿಸಿದರು.
ಅವರು, ಶಾಸಕರಭವನದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ರೈಲ್ವೆ ಇಲಾಖೆ, ಪರಿಸರ ಸಂರಕ್ಷಣಾ ಇಲಾಖೆ, ಕೇಂದ್ರ ಸರ್ಕಾರ ವ್ಯಾಪ್ತಿಯಲ್ಲಿ ಬರುತ್ತವೆ.
ಪ್ರಸ್ತುತ ಡಂಪಿಂಗ್ ಯಾರ್ಡ್ ಸಹ(Dumping yard) ರೈಲ್ವೆ ಇಲಾಖೆ ಅಧಿನದಲ್ಲಿದೆ. ಸಂಸದರು ಹಾಗೂ ಕೇಂದ್ರ ರೈಲ್ವೆ ಸಚಿವರು ಬಿಜೆಪಿ ಪಕ್ಷದವರಾಗಿದ್ದು, ಡಂಪಿಂಗ್ ಯಾರ್ಡ್ ಸ್ಥಳಾಂತರ ಅವರ ವ್ಯಾಪ್ತಿಗೆ ಬರಲಿದೆ. ಆದರೆ, ಅನಗತ್ಯವಾಗಿ ಶಾಸಕರ ವಿರುದ್ದ ವಿವಾದವನ್ನು ಹುಟ್ಟಿಸುವುದು ಎಂದಿದ್ಧಾರೆ.
ಇದನ್ನೂ ಓದಿ: ಚಿನ್ನದ ಬೆಲೆಯಲ್ಲಿ ಏರಿಕೆ
ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಗದ್ದಿಗೆ ತಿಪ್ಪೇಸ್ವಾಮಿ ಮಾತನಾಡಿ ರಾಜ್ಯದಲ್ಲಿ ಯಾವುದೇ ಘಟನೆಯಾದರೂ ಬಿಜೆಪಿ ಕಾಂಗ್ರೆಸ್ ಪಕ್ಷವನ್ನು ಖಂಡಿಸುತ್ತದೆ.
ಅದೇ ರೀತಿ ಚಳ್ಳಕೆರೆಯಲ್ಲೂ ಬಿಜೆಪಿ ಮುಖಂಡರು ಅದನ್ನೇ ಮುಂದುವರೆಸಿದ್ಧಾರೆ. ಸಾರ್ವಜನಿಕರಿಗೆ ವಿರೋಧವಾದ ಯಾವುದೇ ಕಾರ್ಯವನ್ನು ಶಾಸಕರು ಮಾಡುವುದಿಲ್ಲವೆಂದರು.
ಸಮಾಜಸೇವಕ ಎಚ್.ಎಸ್.ಸೈಯದ್ ಮಾತನಾಡಿ, ಯಾವುದೇ ವಿಚಾರವನ್ನು ಪ್ರಶ್ನಿಸುವ ಸಂದರ್ಭದಲ್ಲಿ ಅದರ ಮೂಲ ಅರಿಯಬೇಕು.
ಡಂಪಿಂಗ್ ಯಾರ್ಡ್(Dumping yard) ಕಾರ್ಯನಿರ್ವಹಣೆ ಶಾಸಕ ವ್ಯಾಪ್ತಿಗೆ ಬರುವುದಿಲ್ಲ. ಅನಗತ್ಯವಾಗಿ ಅವರ ಹೆಸರನ್ನು ತಂದು ವಿವಾದ ಮಾಡುವ ಬಿಜೆಪಿಯ ಕಾರ್ಯ ಖಂಡನೀಯವೆಂದರು.
ಇದನ್ನೂ ಓದಿ: ಯಾವ್ಯಾವ ರಾಷ್ಟ್ರೀಯ ಹೆದ್ದಾರಿಗೆ ಹಣ ಕೇಳಿದ್ದಾರೆ ಸಂಸದ ಗೋವಿಂದ ಎಂ.ಕಾರಜೋಳ
ಪತ್ರಿಕಾಗೋಷ್ಠಿಯಲ್ಲಿ ನಗರಸಭೆ ಸ್ಥಾಯಿಸಮಿತಿ ಅಧ್ಯಕ್ಷ ಟಿ.ಮಲ್ಲಿಕಾರ್ಜುನ್, ಸದಸ್ಯ ಬಿ.ಟಿ.ರಮೇಶ್‌ಗೌಡ, ವೈ.ಪ್ರಕಾಶ್, ತಾಪಂ ಮಾಜಿ ಸದಸ್ಯ ಸಮರ್ಥರಾಯ, ಎ.ನಾಗರಾಜು, ಓ.ತಿಪ್ಪೇಸ್ವಾಮಿ, ಪಾಲಯ್ಯ, ಬೋರಯ್ಯ ಮುಂತಾದವರು ಉಪಸ್ಥಿತರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252