Chitradurga news|nammajana.com|22-2-2025
ನಮ್ಮಜನ.ಕಾಂ, ಚಿತ್ರದುರ್ಗ: ಜಿಲ್ಲೆಯ ಎಲ್ಲಾ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿರುವ, ಆದರೆ ಇದುವರೆಗೂ ಇ-ಖಾತಾ ಪಡೆಯದೇ ಇರುವ ಕಟ್ಟಡಗಳ ಮತ್ತು ನಿವೇಶನಗಳ ಮಾಲೀಕರು ನಗರಾಭಿವೃದ್ಧಿ ಇಲಾಖೆಯಿಂದ (E account) ನಿಯಮಾನುಸಾರ ಅವಕಾಶ ಕಲ್ಪಿಸಿಕೊಟ್ಟಂತೆ, ಮೂರು ತಿಂಗಳ ಒಳಗಾಗಿ ಅಂದರೆ 2025ರ ಮೇ 10ರೊಳಗೆ “ಬಿ” ರಿಜಿಸ್ಟರ್‍ನಲ್ಲಿ ನಮೂದಿಸಿಕೊಂಡು ಇ-ಖಾತಾ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಕರೆ ನೀಡಿದ್ದಾರೆ.
ಕರ್ನಾಟಕ ಪೌರಸಭೆಗಳ ಅಧಿನಿಯಮ 1964 ಪ್ರಕರಣ 110 ರ ಅನ್ವಯ ‘ಎ’ ರಿಜಿಸ್ಟರ್‍ನಲ್ಲಿ ಅಂದರೆ ಸಕ್ಷಮ ಪ್ರಾಧಿಕಾರದಿಂದ ಅನುಮೋದನೆ ಪಡೆಯಲಾದ ಬಡಾವಣೆಯಲ್ಲಿನ ಸ್ವತ್ತುಗಳಿಗೆ ಇ-ಖಾತಾ ನೀಡಲಾಗುತ್ತದೆ. ಆದರೆ, ಭೂ ಪರಿವರ್ತನೆ ಆಗದೇ ಉಪ-ವಿಭಜನೆ ಮಾಡಿ ನಿವೇಶನಗಳಾಗಿ ಮಾರಾಟ ಮಾಡಿರುವ ನಿವೇಶನ, ಕಟ್ಟಡಗಳು ಮತ್ತು ಭೂ ಪರಿವರ್ತನೆಯಾಗಿದ್ದು, ಆದರೆ ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾಗದ ಬಡಾವಣೆಗಳಲ್ಲಿನ ನಿವೇಶನ ಅಥವಾ ಕಟ್ಟಡಗಳಿಗೆ “ಬಿ” ರಿಜಿಸ್ಟರ್‍ನಲ್ಲಿ ನಮೂದಿಸಿಕೊಂಡು ಇ-ಖಾತಾ ನೀಡಲಾಗುತ್ತದೆ. ಈ ಅವಕಾಶವನ್ನು ಒಮ್ಮೆ ಮಾತ್ರ ನೀಡಲಾಗುತ್ತಿದ್ದು, ಕಟ್ಟಡ (E account) ನಿವೇಶನಗಳ ಮಾಲೀಕರು ಈ ಅವಕಾಶದ ಸದುಪಯೋಗ ಪಡಿಸಿಕೊಳ್ಳಲು ಜಿಲ್ಲಾಧಿಕಾರಿಗಳು ಕರೆ ನೀಡಿದ್ದಾರೆ.

“ಬಿ” ರಿಜಿಸ್ಟರ್‍ನಲ್ಲಿ ದಾಖಲಿಸುವ ಆಸ್ತಿಗಳಿಗೆ 2024-25ನೇ ಸಾಲಿಗೆ ಮೊದಲ ಬಾರಿಗೆ ಸ್ವತ್ತು ತೆರಿಗೆಯ 2 ರಷ್ಟು ತೆರಿಗೆಯನ್ನು ವಿಧಿಸಲಾಗುತ್ತದೆ. ತದನಂತರದ ವರ್ಷಗಳಲ್ಲಿ ಸ್ವತ್ತು ತೆರಿಗೆಯನ್ನು ಮಾತ್ರ ವಿಧಿಸಲಾಗುತ್ತದೆ. ಕರ್ನಾಟಕ ಪೌರಸಭೆಗಳ ಅಧಿನಿಯಮ 1964 ರ ಪ್ರಕರಣ 106 ಕ್ಕೆ ತಿದ್ದುಪಡಿ ತರಲಾದಂತೆ ದಿನಾಂಕ: 10.09.2024 ರಿಂದ ಜಾರಿಗೆ ಬಂದಂತೆ ಈ ತೆರಿಗೆಯನ್ನು ವಿಧಿಸಲಾಗುತ್ತದೆ.
“ಬಿ” ರಿಜಿಸ್ಟರ್‍ನಲ್ಲಿ ಸರ್ಕಾರಿ ಜಾಗದಲ್ಲಿರುವ ಸ್ವತ್ತುಗಳು, ಸರ್ಕಾರದ ನಿಗಮ ಮಂಡಳಿಗಳ ಜಾಗಗಳು, ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಜಾಗಗಳು ಹೊರತುಪಡಿಸಿ ದಿನಾಂಕ: 10.09.2024 ರ ಪೂರ್ವಕ್ಕೆ ನೋಂದಾಯಿತವಾದ ಭೂ ಪರಿವರ್ತನೆ ಆಗದೇ ಉಪ ವಿಭಜನೆ ಮಾಡಿ ನಿವೇಶನಗಳಾಗಿ ಮಾರಾಟ ಮಾಡಿರುವ ನಿವೇಶನ, ಕಟ್ಟಡಗಳು ಮತ್ತು ಭೂ ಪರಿವರ್ತನೆಯಾಗಿ ಸಕ್ಷಮ ಪ್ರಾಧಿಕಾರದಿಂದ (E account) ಅನುಮೋದನೆಯಾಗದ ಬಡಾವಣೆಗಳಲ್ಲಿನ ನಿವೇಶನ, ಕಟ್ಟಡಗಳಿಗೆ “ಬಿ” ರಿಜಿಸ್ಟರ್‍ನಲ್ಲಿ ನಮೂದಿಸಿಕೊಂಡು ಇ-ಖಾತಾ ನೀಡಲಾಗುತ್ತದೆ.
ಆದುದರಿಂದ, ಇದುವರೆಗೆ ಇ-ಖಾತಾ ಪಡೆಯದ ಅಂತಹ ಎಲ್ಲಾ ಸ್ವತ್ತುಗಳ ಮಾಲೀಕರು ಕೂಡಲೇ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಕಛೇರಿಗಳಿಗೆ ಭೇಟಿ ನೀಡಿ ಅಥವಾ ಸಹಾಯವಾಣಿ ಸಂಪರ್ಕಿಸಿ ಅಥವಾ ಈ ಕಛೇರಿಗಳಿಂದ ಏರ್ಪಡಿಸಲಾಗುವ ವಾರ್ಡ್‍ವಾರು ಕ್ಯಾಂಪ್‍ಗಳಿಗೆ ಭೇಟಿ ನೀಡಿ ‘ಬಿ’ ರಿಜಿಸ್ಟರ್‍ನಲ್ಲಿ ಇ-ಖಾತಾ ಪಡೆಯಲು ಅರ್ಜಿ ಸಲ್ಲಿಸಿ, ಸರ್ಕಾರ ನೀಡಿರುವ ಅವಕಾಶ ಸದುಪಯೋಗ ಪಡಿಸಿಕೊಳ್ಳಲು ಕರೆ ನೀಡಿದ್ದಾರೆ.
ಇದನ್ನೂ ಓದಿ: ದಿನ ಭವಿಷ್ಯ | ಇವತ್ತು ಯಾವ್ಯಾವ ರಾಶಿಗೆ ಉದ್ಯೋಗ, ವ್ಯಾಪರದಲ್ಲಿ ಲಾಭ? | Dina Bhavishya
ಇ-ಖಾತಾಗೆ ಸಂಬಂಧಿಸಿದಂತೆ ಸಹಾಯವಾಣಿ
ಸ್ಥಾಪಿಸಲಾಗಿದ್ದು, ಚಿತ್ರದುರ್ಗ ನಗರಸಭೆ-08194-222401, ಕೆ.ಕಿರಣ್ ಕುಮಾರ್-9606281164. ಚಳ್ಳಕೆರೆ ನಗರಸಭೆ-08195-200093, ಎಸ್.ವೀರಭದ್ರಪ್ಪ-8050551355. ಹಿರಿಯೂರು ನಗರಸ¨s-08193-296220, ಮಲ್ಲಿಕಾರ್ಜುನ ಸ್ವಾಮಿ-9620287514. ಹೊಸದುರ್ಗ ಪುರಸಭೆ- 08199-295095, ಎನ್.ವಿನಯ್-9353833372. ಹೊಳಲ್ಕೆರೆ ಪುರಸಭೆ-08191-275861, ಎಂ.ದೇವರಾಜ್-9845912244.ಮೊಳಕಾಲ್ಮೂರು ಪಟ್ಟಣ ಪಂಚಾಯಿತಿ-08198-229044, ಎಲ್.ಹೆಚ್.ತಿಪ್ಪೇಸ್ವಾಮಿ-
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252