Chitradurga news|nammajana.com|19-7-2024
ನಮ್ಮಜನ.ಕಾಂ, ಚಿತ್ರದುರ್ಗ: ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಕೆ ಪಾವತಿಸುವ (Educational Allowance) ಸಂಘಟಿತ ಕಾರ್ಮಿಕರ ಮಕ್ಕಳಿಂದ ಪ್ರೌಢ ಶಾಲೆಯಿಂದ ಸ್ನಾತ್ತಕೋತ್ತರ ಪದವಿಯವರೆಗೆ ಹಾಗೂ ವೈಧ್ಯಕೀಯ, ಇಂಜಿನಿಯರಿಂಗ್‍ನಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ 2024-25ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹಧನ ಸಹಾಯಕ್ಕೆ ಆನ್‍ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನ
2025ರ ಜನವರಿ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.(Educational Allowance) ಕಾರ್ಮಿಕರ ಮಾಸಿಕ ವೇತನ ರೂ.35,000/- ಗಿಂತ ಮೀರಿರಬಾರದು. ಒಂದು ಕುಟುಂಬದಲ್ಲಿ ಒಬ್ಬ ವಿದ್ಯಾರ್ಥಿಗೆ ಮಾತ್ರ ಈ ಸೌಲಭ್ಯ ನೀಡಲಾಗುವುದು.
ಆನ್ಲೈನ್ ಅರ್ಜಿಗೆ ಹೆಚ್ಚಿನ ಮಾಹಿತಿ
ಈ ಶೈಕ್ಷಣಿಕ ಪ್ರೋತ್ಸಾಹಧನ ಸಹಾಯ ಬಯಸುವ ವಿದ್ಯಾಥಿಗಳು ಆನ್‍ಲೈನ್ ಮುಖಾಂತರ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ವೆಬ್‍ಸೈಟ್ ಲ್ಲಿ (Educational Allowance) WWW.klwbapps.karnataka.gov.in ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ವಿದ್ಯಾರ್ಥಿಯು ಹಿಂದಿನ ವರ್ಷದಲ್ಲಿ ಸಾಮಾನ್ಯ ವರ್ಗ ಶೇ.50, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು ಶೇ.45 ರಷ್ಟು ಅಂಕ ಪಡೆದು ತೇರ್ಗಡೆಯಾಗಿರಬೇಕು.
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ
ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ, ಕಾರ್ಮಿಕಕಲ್ಯಾಣ ಭವನ, ನಂ.48, 1ನೇ & 2ನೇ ಮಹಡಿ, ಮತ್ತೀಕೆರೆ ಮುಖ್ಯರಸ್ತೆ, (Educational Allowance) ಯಶವಂತಪುರ, ಬೆಂಗಳೂರು-560022 ಇಲ್ಲಿ ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 080-23475188, 8277291175, 8277120505, 9141585402, 9141602562 ಮೂಲಕ ಸಂಪರ್ಕಿಸಬಹುದಾಗಿದೆ ಎಂದು ಚಿತ್ರದುರ್ಗ ಕಾರ್ಮಿಕ ಅಧಿಕಾರಿಗಳು ತಿಳಿಸಿದ್ದಾರೆ.