Chitradurga news|nammajana.com|21-11-2024
ನಮ್ಮಜನ.ಕಾಂ, ಚಿತ್ರದುರ್ಗ: 2024-29 ಸಾಲಿನ ಅವಧಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಜಿಲ್ಲಾಧ್ಯಕ್ಷ, ಜಿಲ್ಲಾ ಖಜಾಂಜಿ ಹಾಗೂ ರಾಜ್ಯ ಪರಿಷತ್ ಸದಸ್ಯರ (Election of Government Employees) ಆಯ್ಕೆಗೆ ಚುನಾವಣೆ ವೇಳಾಪಟ್ಟಿ ಪ್ರಕಟ ಮಾಡಲಾಗಿದೆ.
ನ.19 ರಂದು ನ.27 ವರೆಗೆ ಪ್ರತಿದಿನ ಬೆಳಿಗ್ಗೆ 11 ಗಂಟೆಯಿದ ಸಂಜೆ 5 ಗಂಟೆವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ನ.28 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು ಅಂದೆ ಪರಿಶೀಲನೆ ನಂತರ ಅರ್ಹ ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗುವುದು.
71 ಜನರಿಂದ ಮತದಾನ
ನ.29 ರಂದು ಬೆಳಿಗ್ಗೆ 11 ಗಂಟೆಯಿAದ ಸಂಜೆ 4:30 ಗಂಟೆಯವರೆಗೆ ನಾಮಪತ್ರ ಹಿಂಪಡೆಯಲು ಅವಕಾಶವಿದೆ. ತದನಂತರ ಅಂತಿಮವಾಗಿ ಕಣದಲ್ಲಿ ಉಳಿದ ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗುವುದು. ಡಿ.4 ರಂದು ಬೆಳಿಗ್ಗೆ 9 (Election of Government Employees) ಗಂಟೆಯಿಂದ ಮಧ್ಯಾಹ್ನ 4 ಗಂಟೆ ವರೆಗೆ ನಗರದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಚೇರಿಯಲ್ಲಿ ಮತದಾನ ನಡೆಯಲಿದೆ.
ಇದನ್ನೂ ಓದಿ: ವಾಣಿ ವಿಲಾಸ ಸಾಗರಕ್ಕೆ 577 ಕ್ಯೂಸೆಕ್ಸ್ ನೀರು | ಇಂದಿನ ನೀರಿನ ಮಟ್ಟ ಎಷ್ಟಿದೆ? | Vani Vilasa Sagara Dam
ಮತದಾನ ಮುಕ್ತಾಯವಾದ ನಂತರ ಮತಣ ಎಣಿಕೆ ನಡೆಸಿ, ಪಲಿತಾಂಶ ಪ್ರಕಟಿಸಲಾಗುವುದು. ಜಿಲ್ಲೆಯ ಎಲ್ಲಾ ತಾಲ್ಲೂಕು ಘಟಕಗಳ ಅಧ್ಯಕ್ಷರು ಸೇರಿದಂತೆ ಒಟ್ಟು 71 ಮತದಾರರು ಮತ ಚಲಾವಣೆ ಮಾಡಲಿದ್ದಾರೆ ಎಂದು ಚುನಾವಣಾಧಿಕಾರಿ (Election of Government Employees) ಡಿ.ಟಿ.ಜಗನ್ನಾಥ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಬಿಪಿಎಲ್ ಕಾರ್ಡ್ ರದ್ದು | ಸಿಹಿ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ | BPL card