Chitradurga News | Nammajana. Com |24-4-2024
ನಮ್ಮಜನ.ಕಾಂ:ಚಿತ್ರದುರ್ಗ:
ಲೋಕಸಭೆ ಚುನಾವಣೆಯಲ್ಲಿ ಮತದಾನಕ್ಕೆ ಆ ದಾಖಲೆ ಬೇಕು, ಎಲೆಕ್ಷನ್ ಕಾರ್ಡ್ ಬೇಕು ಅಂತ ತಾವು ಚಿಂತೆ ಮಾಡುವ ಅವಶ್ಯಕತೆ ಇಲ್ಲ. ಆಯೋಗ ತಿಳಿಸಿದಂತೆ ಈ 12 ದಾಖಲೆ ಇದ್ದರೆ ಮತ ಚಲಾಯಿಸಬಹದು.

ಮತ ಚಲಾಯಿಸಲು ಬಳಸಬಹುದಾದ ದಾಖಲೆಗಳು:
ಲೋಕಸಭೆ ಚುನಾವಣೆಯಲ್ಲಿ ಮತದಾನ ಮಾಡಲು ಮತದಾರನು ಎಪಿಕ್ ಕಾರ್ಡ್ ಇಲ್ಲವೆಂದು ಚಿಂತಿಸಬೇಕಿಲ್ಲಾ. ಪ್ರಜಾಪ್ರಭುತ್ವದ ಹಬ್ಬದಲ್ಲಿ ಯಾವೊಬ್ಬ ಮತದಾರನು ಮತದಾನದಿಂದ ವಂಚಿತರಾಗಬಾರದು ಎಂಬ ದೃಷ್ಠಿಯಿಂದ ಚುನಾವಣಾ ಆಯೋಗವು ಎಪಿಕ್ ಕಾರ್ಡ್ ಹೊರತುಪಡಿಸಿ 12 ಅನುಮೋದಿತ ದಾಖಲೆಗಳನ್ನು ಗುರುತಿನ ಚೀಟಿಯಾಗಿ ಬಳಸಿ ಮತದಾನ ಮಾಡಲು ಅವಕಾಶ ಕಲ್ಪಿಸಿಕೊಟ್ಟಿದೆ. ಮತದಾರನು ಎಪಿಕ್ ಇಲ್ಲದೇ ಹೋದಲ್ಲಿ ಅದರ ಬದಲಾಗಿ ಆಧಾರ್, ನರೇಗಾ ಜಾಬ್ ಕಾರ್ಡ್, ಬ್ಯಾಂಕ್/ಅಂಚೆ ಕಛೇರಿಯ ಭಾವಚಿತ್ರವುಳ್ಳ ಪಾಸ್‌ಬುಕ್, ಕಾರ್ಮಿಕ ಸಚಿವಾಲಯದಿಂದ ನೀಡಿರುವ ಆರೋಗ್ಯ ವಿಮಾ ಕಾರ್ಡ್, ಚಾಲನಾ ಪರವಾನಗಿ, ವಿಶೇ಼ಷ ಚೇತನರ ಗುರುತಿನ ಚೀಟಿ, ಪಾನ್ ಕಾರ್ಡ್, ಎನ್.ಪಿ.ಆರ್ ಅಡಿಯಲ್ಲಿ ಆರ್.ಜಿ.ಐ ನ ಸ್ಮಾರ್ಟ್ ಕಾರ್ಡ್, ಭಾರತೀಯ ಪಾಸ್‌ಪೋರ್ಟ್, ಭಾವಚಿತ್ರ ಇರುವ ಪಿಂಚಣಿ ದಾಖಲೆ, ಸೇವಾ ಗುರುತಿನ ಚೀಟಿ ಹಾಗೂ ಎಂಪಿ, ಎಂಎಲ್‌ಎ ಗಳಿಗೆ ನೀಡಿರುವ ಅಧಿಕೃತ ಗುರುತಿನ ಚೀಟಿಗಳನ್ನು ಬಳಸಿ ಮತದಾನ ಚಲಾಯಿಸಬಹುದು ಎಂದು ಚುನಾವಣಾ ಆಯೋಗವು ಸ್ಪಷ್ಟಪಡಿಸಿದೆ
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252