Chitradurga news|nammajana.com|5-7-2024
ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ, ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ, ಡಾ. ಬಿ.ಆರ್.ಅಂಬೇಡ್ಕರ್, ಶ್ರೀಮತಿ ಇಂದಿರಾಗಾಂದಿ ವಸತಿ ಶಾಲೆಗಳ 2024-25ನೇ ಸಾಲಿನ 7, 8 ಮತ್ತು 9ನೇ ತರಗತಿಗಳ ಖಾಲಿ ಸ್ಥಾನಗಳ ದಾಖಲಾತಿಗೆ (Entrance Examination of Residential Schools)ಇದೇ ಜುಲೈ 6ರಂದು ಬೆಳಿಗ್ಗೆ 11 ರಿಂದ 12.30 ರವರೆಗೆ ಪ್ರವೇಶ ಪರೀಕ್ಷೆ ನಡೆಯಲಿದೆ.
ಪರೀಕ್ಷಾ ಕೇಂದ್ರಗಳ ವಿವರ ಇಂತಿದೆ. ಚಿತ್ರದುರ್ಗ ತಾಲ್ಲೂಕಿನ ಗೂಳಯ್ಯನಹಟ್ಟಿ ಮೊರಾರ್ಜಿ ದೇಸಾಯಿ ವಸತಿ ಶಾಲೆ (ಸಾಮಾನ್ಯ-24), ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆ ನಗರದ (Entrance Examination of Residential Schools) ಪಾವಗಡ ರಸ್ತೆಯಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆ (ಪ.ವರ್ಗ-26), ಹಿರಿಯೂರು ತಾಲ್ಲೂಕಿನ ದೇವರಕೊಟ್ಟ ಮೊರಾರ್ಜಿ ದೇಸಾಯಿ ವಸತಿ ಶಾಲೆ (ಪ.ಜಾತಿ-33), ಹೊಳಲ್ಕೆರೆ ತಾಲ್ಲೂಕಿನ ಚಿತ್ರಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ(ಪ.ವರ್ಗ-100), ಹೊಸದುರ್ಗ ತಾಲ್ಲೂಕಿನ ನಾಗೇನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ(ಹಿಂ.ವರ್ಗ-30), ಮೊಳಕಾಲ್ಮೂರು ತಾಲ್ಲೂಕಿನ ಸೂಲೇನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ (ಪ.ವರ್ಗ-28) ಕೇಂದ್ರಗಳಲ್ಲಿ ಪರೀಕ್ಷೆ ಜರುಗಲಿದೆ.

ಇದನ್ನೂ ಓದಿ: ಹೃದಯ ರೋಗವನ್ನು ರಕ್ಷಿಸಲು ಆಹಾರ | Health adviceadvice
ಅರ್ಜಿ ಸ್ವೀಕರಿಸಿದ ಎಲ್ಲಾ ವಸತಿ ಶಾಲೆಗಳಲ್ಲಿ ಪ್ರವೇಶ (Entrance Examination of Residential Schools) ಪತ್ರಗಳನ್ನು ವಿತರಿಸಲಾಗುತ್ತಿದೆ. ಪ್ರವೇಶ ಪತ್ರಗಳು ತಲುಪದೇ ಇರುವ ಅಭ್ಯರ್ಥಿಗಳು ಪರೀಕ್ಷಾ ದಿನದಂದು ತಮ್ಮ ತಾಲ್ಲೂಕಿನ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಿ ತಮ್ಮ ಪ್ರವೇಶ ಪತ್ರಗಳನ್ನು ಪಡೆದು ಪರೀಕ್ಷೆ ಬರೆಯಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252